AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಬಿಗೆ ನೂತನ ಛೇರ್ಮನ್ ಆಗಿ ತುಹಿನ್ ಕಾಂತ ಪಾಂಡೆ ನೇಮಕ; ಮಾಧಬಿ ಪುರಿ ಬುಚ್ ಅವಧಿ ವಿಸ್ತರಣೆ ಇಲ್ಲ

Tuhin Kanta Pandey new SEBI Chairman: ತುಹಿನ್ ಕಾಂತ ಪಾಂಡೆ ಅವರನ್ನು ಸೆಬಿ ಛೇರ್ಮನ್ ಆಗಿ ನೇಮಕ ಮಾಡಲಾಗಿದೆ. ಮಾಧಬಿ ಪುರಿ ಬುಚ್ ಅವರ ಸೇವಾವಧಿ ಸದ್ಯದಲ್ಲೇ ಅಂತ್ಯಗೊಳ್ಳಲಿದೆ. ಚಂದೀಗಡದಲ್ಲಿನ ಪಂಜಾಬ್ ಯೂನಿವರ್ಸಿಟಿಯಲ್ಲಿ ಎಕನಾಮಿಕ್ಸ್​ನಲ್ಲಿ ಎಂಎ ಹಾಗೂ ಬ್ರಿಟನ್​ನ ಬರ್ಮಿಂಗ್​ಹ್ಯಾಂನಲ್ಲಿ ಎಂಬಿಎ ಮಾಡಿರುವ ತುಹಿನ್ ಕಾಂತ ಪಾಂಡೆ 1987ರ ಬ್ಯಾಚ್​ನ ಐಎಎಸ್ ಅಧಿಕಾರಿಯಾಗಿದ್ದಾರೆ.

ಸೆಬಿಗೆ ನೂತನ ಛೇರ್ಮನ್ ಆಗಿ ತುಹಿನ್ ಕಾಂತ ಪಾಂಡೆ ನೇಮಕ; ಮಾಧಬಿ ಪುರಿ ಬುಚ್ ಅವಧಿ ವಿಸ್ತರಣೆ ಇಲ್ಲ
ತುಹಿನ್ ಕಾಂತ ಪಾಂಡೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 28, 2025 | 11:56 AM

Share

ನವದೆಹಲಿ, ಫೆಬ್ರುವರಿ 28: ಷೇರುಪೇಟೆ ನಿಯಂತ್ರಣ ಪ್ರಾಧಿಕಾರ ಸಂಸ್ಥೆಯಾದ ಸೆಬಿಗೆ ಹೊಸ ಮುಖ್ಯಸ್ಥರು ನೇಮಕವಾಗಿದ್ದಾರೆ. ಹಿರಿಯ ಸರ್ಕಾರಿ ಅಧಿಕಾರಿ ತುಹಿನ್ ಕಾಂತ ಪಾಂಡೆ ಅವರನ್ನು ಸೆಬಿ ಛೇರ್ಮನ್ ಆಗಿ ನೇಮಕ ಮಾಡಲಿದ್ದಾರೆ. ಪ್ರಸಕ್ತ ಛೇರ್ಮನ್ ಆಗಿರುವ ಮಾಧಬಿ ಪುರಿ ಬುಚ್ ಅವರ ಅವಧಿ ಶೀಘ್ರದಲ್ಲೇ ಮುಗಿಯಲಿದ್ದು, ಅವರ ಸ್ಥಾನವನ್ನು ಪಾಂಡೆ ತುಂಬಲಿದ್ದಾರೆ.

ಒಡಿಶಾ ಕೇಡರ್​ನ 1987ರ ಬ್ಯಾಚ್​ನ ಐಎಎಸ್ ಅಧಿಕಾರಿಯಾದ ತುಹಿನ್ ಕಾಂತ ಪಾಂಡೆ ಅವರು ಪಂಜಾಬ್ ಯೂನಿವರ್ಸಿಟಿಯಲ್ಲಿ ಅರ್ಥಶಾಸ್ತ್ರದಲ್ಲಿ ಎಂಎ ಮಾಡಿ, ಬ್ರಿಟನ್​ನ ಬರ್ಮಿಂಗ್​ಹ್ಯಾಂ ಯೂನಿವರ್ಸಿಟಿಯಲ್ಲಿ ಎಂಬಿಎ ಮಾಡಿದ್ದಾರೆ. ಐಎಎಸ್ ಆದ ಬಳಿಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕೆಲಸ ಮಾಡಿ ಅಪಾರ ಅನುಭವ ಗಳಿಸಿದವರಾಗಿದ್ದಾರೆ. ಒಡಿಶಾ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಎರಡರ ಅಡಿಯಲ್ಲೂ ಅವರು ಕೆಲಸ ಮಾಡಿದ್ದಾರೆ. ಹಣಕಾಸು, ತೆರಿಗೆ, ಆಡಳಿತ ಇತ್ಯಾದಿ ವಿಭಾಗಗಳಲ್ಲಿ ಅನುಭವ ಹೊಂದಿದ್ದಾರೆ.

ಎಲ್​ಐಸಿ ಐಪಿಒ, ಏರ್ ಇಂಡಿಯಾ ಮಾರಾಟ ಪ್ರಕ್ರಿಯೆಗಳು ಪಾಂಡೆ ಸುಪರ್ದಿಯಲ್ಲಿ ನಡೆದಿವೆ. ವಿಶ್ವಸಂಸ್ಥೆ ಕೈಗಾರಿಕೆ ಅಭಿವೃದ್ದಿ ಸಂಸ್ಥೆಯ (UNIDO) ಪ್ರಾದೇಶಿಕ ಕಚೇರಿಯಲ್ಲಿ ಕೆಲಸ ಮಾಡಿದ್ದಾರೆ. ಒಡಿಶಾ ಸಣ್ಣ ಕೈಗಾರಿಕೆಗಳ ನಿಗಮ ಮತ್ತು ಒಡಿಶಾ ರಾಜ್ಯ ಹಣಕಾಸು ನಿಗಮಗಳಲ್ಲೂ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: 2025-26ರಲ್ಲಿ ಪ್ರಯಾಣಿಕ ವಾಹನಗಳ ಮಾರಾಟ ಶೇ. 7ರಷ್ಟು ಹೆಚ್ಚಳ; ದ್ವಿಚಕ್ರ ವಾಹನಗಳು ಶೇ. 6-9 ಹೆಚ್ಚು ಸೇಲ್: ಇಕ್ರ ಅಂದಾಜು

ತುಹಿನ್ ಕಾಂತ ಪಾಂಡೆ ಅವರು ಸೆಬಿ ಛೇರ್ಮನ್ ಆಗಿ ನೇಮಕವಾಗುವ ಮುನ್ನ ಕಂದಾಯ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿದ್ದರು. ಅದಕ್ಕೂ ಮುನ್ನ ಹೂಡಿಕೆ, ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ, ಸರ್ಕಾರಿ ಉದ್ದಿಮೆಗಳ ಇಲಾಖೆ ಹಾಗು ಸಿಬ್ಬಂದಿ ಮತ್ತು ತರಬೇತಿ ಇಲಾಖೆ, ಈ ಮೂರು ಇಲಾಖೆಗಳಿಗೆ ಕಾರ್ಯದರ್ಶಿಯಾಗಿದ್ದರು. ಅದಕ್ಕೂ ಪೂರ್ವದಲ್ಲಿ ಅವರು ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ