ಬೆಂಗಳೂರು, ನವೆಂಬರ್ 7: ಮನೆ ಅಥವಾ ಸೈಟ್ ಖರೀದಿಸಬೇಕು ಎನ್ನುವ ಆಸೆ ಪ್ರತಿಯೊಬ್ಬರಲ್ಲೂ ಇದ್ದೇ ಇರುತ್ತದೆ. ಬೆಂಗಳೂರಿನಂಥ ನಗರಗಳಲ್ಲಿ ಚಿರಾಸ್ತಿ ಹೊಂದುವುದು ಜೀವಮಾನದ ಸಾಧನೆ ಎಂಬಂತಾಗಿದೆ. ಥರಹೇವಾರಿ ಬಿಸಿನೆಸ್ಗಳಿಗೆ ಪೋಷಕವಾಗಿರುವ ಬೆಂಗಳೂರು ನಗರದಲ್ಲಿ ಭೂಮಿ ಬೆಲೆ ರಾಕೆಟ್ನಂತೆ ಮೇಲೇರುತ್ತಲೇ ಇದೆ. ಎಲ್ಲಾ ವರ್ಗದ ಜನರ ಆಸೆ, ಅಗತ್ಯಗಳಿಗೆ ತಕ್ಕಂತೆ ಮನೆ, ನಿವೇಶನಗಳು ಲಭ್ಯ ಇವೆ. ಆದರೆ, ಅವುಗಳನ್ನು ಹುಡುಕಲು ಸಂಯಮ ಬೇಕು. ಅಷ್ಟು ವ್ಯವಧಾನ, ಸಮಯ ಇರುವವರ ಸಂಖ್ಯೆ ಕಡಿಮೆ. ಹೀಗಾಗಿ, ದುರಾಸೆಯ ಬ್ರೋಕರ್ಗಳ ಜಾಲಕ್ಕೆ ಬೀಳುವುವರೇ ಹೆಚ್ಚು. ಇಂಥವರಿಗೆ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋ ಉತ್ತಮ ಮಾರ್ಗೋಪಾಯ ನೀಡಿದೆ. ನಗರದ ಪ್ರಮುಖ ಲ್ಯಾಂಡ್ ಡೆವಲಪರ್ಗಳು ಈ ಎಕ್ಸ್ಪೋದಲ್ಲಿ ಒಂದೆಡೆ ಲಭ್ಯ ಇರುತ್ತಾರೆ. ಇವರ ವಿವಿಧ ರೆಸಿಡೆನ್ಷಿಯಲ್ ಮತ್ತು ಕಮರ್ಷಿಯಲ್ ಪ್ರಾಪರ್ಟಿಗಳ ಬಗ್ಗೆ ಒಂದೇ ವೇದಿಕೆಯಲ್ಲಿ ಮಾಹಿತಿ ಪಡೆಯಬಹುದು.
ಕಳೆದ ವರ್ಷ (2023ರ ಸೆಪ್ಟೆಂಬರ್) ನಡೆದ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್ಪೋಗೆ ಬೆಂಗಳೂರಿಗರು ಭರ್ಜರಿ ಸ್ಪಂದನೆ ನೀಡಿದ್ದರು. 20,000ಕ್ಕೂ ಹೆಚ್ಚು ಜನರು ಎಕ್ಸ್ಪೋಗೆ ಬಂದು ಹೋಗಿದ್ದರು. ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಅದೊಂದು ಹೊಸ ಮೈಲಿಗಲ್ಲಿನಂತಾಗಿತ್ತು. ಈ ವರ್ಷದ ಎಕ್ಸ್ಪೋ ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ನವೆಂಬರ್ 15, 16 ಮತ್ತು 17ರಂದು ನಡೆಯಲಿದೆ.
ಟಿವಿ9 ಕನ್ನಡ ಸ್ವೀಟ್ ಹೋಮ್ ಕಳೆದ 10ಕ್ಕೂ ಹೆಚ್ಚು ವರ್ಷಗಳಿಂದ ಪ್ರಾಪರ್ಟಿ ಎಕ್ಸ್ಪೋ ಆಯೋಜಿಸುತ್ತಾ ಬರುತ್ತಿದೆ. ವರ್ಷದಿಂದ ವರ್ಷಕ್ಕೆ ಎಕ್ಸ್ಪೋದ ವಿಶ್ವಾಸಾರ್ಹತೆ, ಉಪಯುಕ್ತತೆ, ವ್ಯಾಪ್ತಿ ಹೆಚ್ಚುತ್ತಾ ಬಂದಿದೆ. ನಿಮಗೆ ಪ್ರಾಪರ್ಟಿ ಖರೀದಿಸುವ ಇರಾದೆ ಇದ್ದಲ್ಲಿ ಈ ವರ್ಷದ ಎಕ್ಸ್ಪೋ ಖಂಡಿತ ತಪ್ಪಿಸಿಕೊಳ್ಳಬೇಡಿ…
ಕಾರ್ಯಕ್ರಮ ನಡೆಯುವ ದಿನ: 2024ರ ನವೆಂಬರ್ 15, 16, ಮತ್ತು 17 (ಶುಕ್ರವಾರದಿಂದ ಭಾನುವಾರದವರೆಗೆ)
ಕಾರ್ಯಕ್ರಮ ಸಮಯ: ಬೆಳಗ್ಗೆ 10ರಿಂದ 7 ಗಂಟೆವರೆಗೆ
ಕಾರ್ಯಕ್ರಮ ಸ್ಥಳ: ನಂದಿ ಲಿಂಕ್ ಗ್ರೌಂಡ್, ನಾಯಂಡಹಳ್ಳಿ, ಬೆಂಗಳೂರು.
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ