
ನವದೆಹಲಿ, ಮೇ 21: ತ್ವರಿತ ಸೇವೆ ಒದಗಿಸಲು ಗ್ರಾಹಕರಿಂದ ಮುಂಗಡವಾಗಿ ಟಿಪ್ಸ್ ಪಡೆಯಲು ಪ್ರಯತ್ನಿಸುತ್ತಿರುವ ಕ್ಯಾಬ್ ಅಗ್ರಿಗೇಟರ್ಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಸಚಿವ ಪ್ರಲ್ಹಾದ ಜೋಶಿ (Pralhad Joshi) ಎಚ್ಚರಿಸಿದ್ದಾರೆ. ಟ್ಯಾಕ್ಸಿ ಸೇವೆಗೆ ಗ್ರಾಹಕರಿಂದ ಬುಕ್ ಮಾಡುವಾಗಲೇ ಟಿಪ್ಸ್ ರೂಪದಲ್ಲಿ ಹೆಚ್ಚುವರಿ ಹಣ (Advance tip) ಪಡೆಯುತ್ತಿರುವುದು ಗಮನಕ್ಕೆ ಬಂದಿದ್ದು, ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈಗಾಗಲೇ ಈ ಸಂಬಂಧ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA)ಕ್ಕೆ ಸೂಚನೆ ನೀಡಿದ್ದೆ. ಈ ಪ್ರಾಧಿಕಾರವು ಪ್ರಮುಖ ಕ್ಯಾಬ್ ಸರ್ವೀಸ್ Uber ಗೆ ನೋಟಿಸ್ ಜಾರಿ ಮಾಡಿದೆ ಎಂದು ಜೋಶಿ ತಿಳಿಸಿದ್ದಾರೆ.
ಟ್ಯಾಕ್ಸಿ ಸೇವೆ ಒದಗಿಸಲು Uber ನಂತಹ ಸೇವಾ ಸಂಸ್ಥೆಗಳು ಗ್ರಾಹಕರಿಂದ ಮುಂಚಿತವಾಗಿಯೇ ಒತ್ತಾಯದಿಂದ ಟಿಪ್ಸ್ ಪಡೆಯುತ್ತಿರುವುದು ಕಳವಳಕಾರಿ ಬೆಳವಣಿಗೆ. ಟಿಪ್ಸ್ ಎನ್ನುವುದು ಗ್ರಾಹಕರು ಉತ್ತಮ ಸೇವೆಗೆ ಮೆಚ್ಚಿ ಕೊಡುವಂಥದ್ದು. ಇದನ್ನು ಯಾರೂ ಒತ್ತಾಯದಿಂದ ಪಡೆಯಬಾರದು ಎಂದು ಸಚಿವ ಪ್ರಲ್ಹಾದ ಜೋಶಿ ಅವರು ಎಕ್ಸ್ ಪೋಸ್ಟ್ನಲ್ಲಿ ಸೂಚಿಸಿದ್ದಾರೆ.
ಇದನ್ನೂ ಓದಿ: ಆಪರೇಷನ್ ಸಿಂದೂರದ ಬಳಿಕ ಭಾರತದ ಡಿಫೆನ್ಸ್ ಶಕ್ತಿ ಮೇಲೆ ಜಗತ್ತಿನ ಕಣ್ಣು; ಯುದ್ಧವಿಮಾನ ತಯಾರಿಕೆಯಲ್ಲೂ ಪಳಗುತ್ತಿದೆ ಭಾರತ
ಕ್ಯಾಬ್‌ನವರು ಗ್ರಾಹಕರಿಗೆ ಸೇವೆ ಕಲ್ಪಿಸುವ ಮೊದಲೇ ಟಿಪ್ಸ್ ಪಡೆಯುವುದು ದಬ್ಬಾಳಿಕೆಯಾಗುತ್ತದೆ. ಗ್ರಾಹಕರ ಶೋಷಣೆಯಾಗುತ್ತದೆ. ಹಾಗಾಗಿ ಈ ಮುಂಗಡ ಟಿಪ್ಸ್ ಬಗ್ಗೆ CCPAಗೆ ಸೂಚನೆ ನೀಡಿದ್ದೆ. CCPA ತಪಾಸಣೆ ವೇಳೆ Uber ಸೇವೆಗೆ ಮುಂಗಡ ಟಿಪ್ಸ್ ಪಡೆಯುತ್ತಿರುವುದು ಸಾಬೀತಾದ್ದರಿಂದ ನೋಟಿಸ್ ಜಾರಿ ಮಾಡಿ ವಿವರಣೆ ಕೇಳಲಾಗಿದೆ ಎಂದು ತಿಳಿಸಿದ್ದಾರೆ.
ಸಚಿವರು ತಮ್ಮ ಎಕ್ಸ್ ಪೋಸ್ಟ್ನಲ್ಲಿ ಸ್ಕ್ರೀನ್ಶಾಟ್ವೊಂದನ್ನೂ ಲಗತ್ತಿಸಿದ್ದಾರೆ. ಗ್ರಾಹಕರು ಕ್ಯಾಬ್ ಬುಕಿಂಗ್ ಮಾಡುವಾಗ ಪ್ರತ್ಯಕ್ಷವಾಗುವ ಟಿಪ್ಸ್ನ ಚಿತ್ರ ಅದರಲ್ಲಿದೆ.
The practice of ‘Advance Tip’ is deeply concerning. Forcing or nudging users to pay a tip in advance, for faster service is unethical and exploitative. Such actions fall under unfair trade practices. Tip is given as a token of appreciation not as a matter of right, after the… pic.twitter.com/WaPH26oT9G
— Pralhad Joshi (@JoshiPralhad) May 21, 2025
‘ಬೇಗ ಪಿಕಪ್ ಬೇಕೆಂದರೆ ಟಿಪ್ ಸೇರಿಸಿ. ನೀವು ಟಿಪ್ ಸೇರಿಸಿದರೆ ಈ ರೈಡ್ಗೆ ಡ್ರೈವರ್ ಒಪ್ಪಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಈ ಟಿಪ್ನ ಪೂರ್ಣ ಹಣವು ಡ್ರೈವರ್ಗೆ ಸಂದಾಯವಾಗುತ್ತದೆ. ನೀವು ಈಗ ಟಿಪ್ ಸೇರಿಸಿದರೆ ಅದನ್ನು ನಂತರ ಬದಲಿಸಲು ಆಗುವುದಿಲ್ಲ’ ಎಂದು ಆ ಟಿಪ್ ಮೆಸೇಜ್ನಲ್ಲಿ ಬರೆಯಲಾಗಿದೆ.
ಇದನ್ನೂ ಓದಿ: ಕೋಟಿ ಸಂಬಳ ಪಡೆಯುತ್ತಿದ್ದ ಎಂಜಿನಿಯರ್ ಈಗ ಫುಡ್ ಡೆಲಿವರಿ ಬಾಯ್; ಇದು ಭಾರತದ ಕಥೆಯಲ್ಲ, ಅಮೆರಿಕದ್ದು
ಊಬರ್ ಮಾತ್ರವಲ್ಲ ಇತರ ಕ್ಯಾಬ್ ಅಗ್ರಿಗೇಟರ್ಗಳೂ ಕೂಡ ಈ ಫೀಚರ್ ಅನ್ನು ಹೊಂದಿವೆ. ಸಾಮಾನ್ಯವಾಗಿ ಪೀಕ್ ಅವರ್ನ್ಲಲಿ, ಕ್ಯಾಬ್ಗಳ ಸಂಖ್ಯೆ ಕಡಿಮೆ ಇದ್ದಾಗ, ಅಥವಾ ಯಾವ ಡ್ರೈವರ್ ಕೂಡ ರೈಡ್ ಸ್ವೀಕರಿಸಿದೇ ಇದ್ದಾಗ ಇಂಥ ಟಿಪ್ ಆಫರ್ ಬರುತ್ತದೆ.
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ