Aadhaar Update: ಹೊಸ ವಿಳಾಸದ ದಾಖಲೆ ಇಲ್ಲದೆಯೇ ಆಧಾರ್​​ನಲ್ಲಿ ವಿಳಾಸ ಅಪ್​ಡೇಟ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ಹೊಸ ವಿಳಾಸಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳಿಲ್ಲದೆ, ಕುಟುಂಬದ ಮುಖ್ಯಸ್ಥರ ಒಪ್ಪಿಗೆಯೊಂದಿಗೆ ಆಧಾರ್ ಕಾರ್ಡಿನಲ್ಲಿ ಆನ್​ಲೈನ್ ಮೂಲಕ ವಿಳಾಸ ಬದಲಾಯಿಸುವ ವಿಧಾನವನ್ನು ಇಲ್ಲಿ ನೀಡಲಾಗಿದೆ.

Aadhaar Update: ಹೊಸ ವಿಳಾಸದ ದಾಖಲೆ ಇಲ್ಲದೆಯೇ ಆಧಾರ್​​ನಲ್ಲಿ ವಿಳಾಸ ಅಪ್​ಡೇಟ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ಆಧಾರ್ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: Ganapathi Sharma

Updated on: Jan 04, 2023 | 3:41 PM

ಹೊಸ ವಿಳಾಸಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳಿಲ್ಲದೆ ಆಧಾರ್ (Aadhaar) ಕಾರ್ಡಿನಲ್ಲಿ ವಿಳಾಸ ನವೀಕರಣ ಮಾಡಬಹುದಾದ (Address Change) ಹೊಸ ಆಯ್ಕೆ ಒಂದನ್ನು ಭಾರತೀಯ ವಿಶಿಷ್ಟ ಗುರುತು ಚೀಟಿ ಪ್ರಾಧಿಕಾರ (UIDAI) ಪರಿಚಯಿಸಿದೆ. ಆದರೆ ಕುಟುಂಬದ ಮುಖ್ಯಸ್ಥರೊಂದಿಗೆ ಹೊಂದಿರುವ ಸಂಬಂಧವನ್ನು ದೃಢೀಕರಿಸಲು ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ತಮ್ಮ ಹೆಸರಿನಲ್ಲಿ ಯಾವುದೇ ದಾಖಲೆ ಹೊಂದಿಲ್ಲದಿರುವವರಿಗೆ ಮತ್ತು ವಿವಿಧ ಕಾರಣಗಳಿಂದ ಬೇರೆ ಕಡೆ ವಲಸೆ ಹೋಗುವವರಿಗೆ ನೆರವಾಗುವ ನಿಟ್ಟಿನಲ್ಲಿ ಹೊಸ ಆಯ್ಕೆಯನ್ನು ಪರಿಚಯಿಸಲಾಗಿದೆ. ಕುಟುಂಬದ ಮುಖ್ಯಸ್ಥರ ಒಪ್ಪಿಗೆ ಮೇರೆಗೆ ಆಧಾರ್​​ನಲ್ಲಿ ಆನ್​ಲೈನ್ ಮೂಲಕ ವಿಳಾಸವನ್ನು ನವೀಕರಿಸಬಹುದಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ. ವಿವಾಹ ನೋಂದಣಿ ಪ್ರಮಾಣ ಪತ್ರ, ಪಡಿತರ ಚೀಟಿ, ಪಾಸ್​​​ಪೋರ್ಟ್ ಅಥವಾ ಇತರ ಯಾವುದೇ ದಾಖಲೆಗಳನ್ನು ಕುಟುಂಬದ ಮುಖ್ಯಸ್ಥರ ಜೊತೆ ಸಂಬಂಧ ಹೊಂದಿರುವುದನ್ನು ದೃಢಪಡಿಸಲು ಬಳಸಬಹುದಾಗಿದೆ.

ಹೊಸ ವಿಳಾಸಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳಿಲ್ಲದೆ, ಕುಟುಂಬದ ಮುಖ್ಯಸ್ಥರ ಒಪ್ಪಿಗೆಯೊಂದಿಗೆ ಆಧಾರ್ ಕಾರ್ಡಿನಲ್ಲಿ ಆನ್​ಲೈನ್ ಮೂಲಕ ವಿಳಾಸ ಬದಲಾಯಿಸುವ ವಿಧಾನವನ್ನು ಇಲ್ಲಿ ನೀಡಲಾಗಿದೆ.

  1. ಮೈ ಆಧಾರ್ ವೆಬ್ ಪೋರ್ಟಲ್​​ಗೆ ಭೇಟಿ ನೀಡಿ
  2. ಅಪ್​ಡೇಟ್ ಅಡ್ರೆಸ್ ಆನ್​​ಲೈನ್ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ
  3. ಕುಟುಂಬದ ಮುಖ್ಯಸ್ಥರ ಆಧಾರ್ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ಕುಟುಂಬದ ಮುಖ್ಯಸ್ಥರ ಖಾಸಗಿತನವನ್ನು ಕಾಪಾಡುವ ಉದ್ದೇಶದಿಂದ ಅವರ ಯಾವುದೇ ವಿವರಗಳು ಇಲ್ಲಿ ಪ್ರದರ್ಶಿಸಲ್ಪಡುವುದಿಲ್ಲ.
  4. ಕುಟುಂಬ ಮುಖ್ಯಸ್ಥರ ಆಧಾರ್ ಸಂಖ್ಯೆ ದೃಢೀಕರಣ ಗೊಳ್ಳುತ್ತದೆ. ನಂತರ ನೀವು ಅವರೊಂದಿಗೆ ಹೊಂದಿರುವ ಸಂಬಂಧವನ್ನು ದೃಢೀಕರಿಸಲು ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
  5. ಸೇವಾ ಶುಲ್ಕವಾಗಿ ಐವತ್ತು ರೂಪಾಯಿ ಪಾವತಿಸಬೇಕಾಗುತ್ತದೆ.
  6. ಶುಲ್ಕ ಪಾವತಿಸಿದ ಕೂಡಲೇ ಸೇವಾ ವಿನಂತಿ ಸಂಖ್ಯೆ ಅಥವಾ ಎಸ್​​ಆರ್​​ಎನ್ ನಿಮ್ಮ ಮೊಬೈಲಿಗೆ ಬರುತ್ತದೆ. ವಿಳಾಸ ಬದಲಾವಣೆಗಾಗಿ ಕುಟುಂಬ ಮುಖ್ಯಸ್ಥರಿಗೆ ವಿನಂತಿ ಸಂದೇಶ ಕಳುಹಿಸಲ್ಪಡುತ್ತದೆ.ಕುಟುಂಬ ಮುಖ್ಯಸ್ಥರು ವಿನಂತಿಯನ್ನು ಸ್ವೀಕರಿಸಿ ಅಪ್ರೂವ್ ಮಾಡಬೇಕಾಗುತ್ತದೆ. ಸಂದೇಶ ಬಂದ 30 ದಿನಗಳ ಒಳಗಾಗಿ ಅವರು ಮೈ ಆಧಾರ್ ಪೋರ್ಟಲ್​​ಗೆ ಲಾಗಿನ್ ಆಗಿ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗುತ್ತದೆ.
  7. ಒಂದು ವೇಳೆ ಕುಟುಂಬ ಮುಖ್ಯಸ್ಥರು ವಿಳಾಸ ಬದಲಾವಣೆ ವಿನಂತಿಯನ್ನು ತಿರಸ್ಕರಿಸಿದರೆ, ವಿಳಾಸ ಬದಲಾವಣೆ ಮಾಡಲು ಸಾಧ್ಯವಾಗುವುದಿಲ್ಲ. ನಿಮ್ಮ ವಿನಂತಿ ತಿರಸ್ಕೃತಗೊಂಡಿರುವ ಬಗ್ಗೆ ನಿಮಗೆ ಎಸ್ಎಂಎಸ್ ಮೂಲಕ ಸಂದೇಶ ಬರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?