Brent Crude: ಉಕ್ರೇನ್ ಮೇಲೆ ತೀವ್ರಗೊಂಡ ರಷ್ಯಾ ದಾಳಿ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಕಚ್ಚಾ ತೈಲ

ಒಂದು ಬ್ಯಾರೆಲ್ ಬ್ರೆಂಟ್ ಕ್ರೂಡ್ ಆಯಿಲ್​ನ ವಹಿವಾಟು 140 ಡಾಲರ್​ಗೆ ನಡೆಯಿತು. 2008ರ ನಂತರ ಇದೇ ಮೊದಲ ಬಾರಿಗೆ ಕಚ್ಚಾತೈಲ ದರವು ಈ ಮಟ್ಟಕ್ಕೆ ಏರಿಕೆಯಾಗಿದೆ.

Brent Crude: ಉಕ್ರೇನ್ ಮೇಲೆ ತೀವ್ರಗೊಂಡ ರಷ್ಯಾ ದಾಳಿ: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಕಚ್ಚಾ ತೈಲ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Mar 07, 2022 | 8:45 AM

ನ್ಯೂಯಾರ್ಕ್: ಉಕ್ರೇನ್ ಮೇಲಿನ ರಷ್ಯಾ ತೀವ್ರಗೊಂಡ ನಂತರ ಸತತ ಏರಿಕೆಯ ಹಾದಿಯಲ್ಲಿಯೇ ಇದ್ದ ಕಚ್ಚಾತೈಲ ದರವು ಭಾನುವಾರ 14 ವರ್ಷಗಳ ಗರಿಷ್ಠ ಮಟ್ಟಕ್ಕೆ ಮುಟ್ಟಿತು. ಒಂದು ಬ್ಯಾರೆಲ್ ಬ್ರೆಂಟ್ ಕ್ರೂಡ್ ಆಯಿಲ್​ನ ವಹಿವಾಟು 140 ಡಾಲರ್​ಗೆ ನಡೆಯಿತು. 2008ರ ನಂತರ ಇದೇ ಮೊದಲ ಬಾರಿಗೆ ಕಚ್ಚಾತೈಲ ದರವು ಈ ಮಟ್ಟಕ್ಕೆ ಏರಿಕೆಯಾಗಿದೆ. ಐರೋಪ್ಯ ಮಾರುಕಟ್ಟೆಗಳಲ್ಲಿ ಬೆಂಚ್​ಮಾರ್ಕ್ ಎನಿಸಿರುವ ಕ್ರೂಡ್​ನ ಪ್ರತಿ ಬ್ಯಾರೆಲ್​​ 128.77 ಡಾಲರ್​ಗೆ ವಹಿವಾಟಾಯಿತು. ಇದು ಶುಕ್ರವಾರ ಕೊನೆಗೊಂಡ ಅಂತಿಮ ಬೆಲೆಗಿಂತಲೂ ತುಸು ಹೆಚ್ಚು. ಕಳೆದ ಫೆಬ್ರುವರಿ 24ರಂದು ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ನಂತರ ಜಾಗತಿಕ ಮಾರುಕಟ್ಟೆಗಳಲ್ಲಿ ಬ್ರೆಂಟ್ ಆಯಿಲ್​ನ ಧಾರಣೆ ಶೇ 33ರಷ್ಟು ಹೆಚ್ಚಾಗಿದೆ.

ಉಕ್ರೇನ್​ ವಿರುದ್ಧ ದಾಳಿ ಮಾಡಿರುವ ರಷ್ಯಾವನ್ನು ಶಿಕ್ಷಿಸಲು ಅಲ್ಲಿ ಉತ್ಪಾದನೆಯಾಗುವ ಕಚ್ಚಾ ತೈಲಕ್ಕೆ ದಂಡ ರೂಪದ ನಿರ್ಬಂಧ ಹೇರುವುದಾಗಿ ಅಮೆರಿಕ ಈ ಮೊದಲು ಹೇಳಿತ್ತು. ಈ ನಿರ್ಧಾರ ಬೆಂಬಲಿಸುವಂತೆ ಯೂರೋಪ್​ನ ಹಲವು ದೇಶಗಳ ಮನವೊಲಿಸುವ ಯತ್ನವೂ ನಡೆಯುತ್ತಿದೆ ಎಂದು ಅಮೆರಿಕದ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಆಂಟೊನಿ ಬ್ಲಿಂಕೆನ್ ಹೇಳಿದ್ದರು. ಆದರೆ ರಷ್ಯಾದಿಂದ ಯಾವುದೇ ದೇಶವು ಕಚ್ಚಾತೈಲ ಖರೀದಿಸಬಾರದು ಎಂದು ನಿರ್ಬಂಧಿಸಲು ಅಮೆರಿಕಕ್ಕೆ ಈವರೆಗೆ ಸಾಧ್ಯವಾಗಿಲ್ಲ.

ತಾಂತ್ರಿಕವಾಗಿ ರಷ್ಯಾದಿಂದ ಕಚ್ಚಾ ತೈಲ ಖರೀದಿಸಲು ಯಾವುದೇ ದೇಶಕ್ಕೆ ನಿರ್ಬಂಧ ಇಲ್ಲ. ಆದರೂ ರಷ್ಯಾದ ಪೆಟ್ರೋಲಿಯಂ ಉತ್ಪನ್ನಗಳ ರಫ್ತು ವಹಿವಾಟು ಮಾಡುವವರಿಗೆ ಖರೀದಿದಾರರನ್ನು ಹುಡುಕಲು ಸಾಧ್ಯವಾಗುತ್ತಿಲ್ಲ. ರಷ್ಯಾದಿಂದ ಕಚ್ಚಾ ತೈಲು ಖರೀದಿಸುವುದನ್ನು ಶೆಲ್ ಕಂಪನಿ ಇಂದಿಗೂ ಮುಂದುವರಿಸಿದೆ. ತೈಲ ವ್ಯಾಪಾರದಿಂದ ಗಳಿಸುವ ಲಾಭವನ್ನು ಉಕ್ರೇನ್​ನ ಸಂಕಷ್ಟ ಪರಿಹಾರಕ್ಕೆ ನೀಡುವುದಾಗಿ ಹೇಳಿದೆ. ಈ ನಡುವೆ ಉಕ್ರೇನ್ ಸಹ ರಷ್ಯಾ ವಿರುದ್ಧದ ರಾಜತಾಂತ್ರಿಕ ಲಾಬಿ ತೀವ್ರಗೊಳಿಸಿದೆ. ಸದ್ಯಕ್ಕೆ ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಖರೀದಿಸುತ್ತಿರುವ ಶೆಲ್ ಕಂಪನಿಗೆ ಮನವಿ ಮಾಡಿರುವ ಉಕ್ರೇನ್ ವಿದೇಶಾಂಗ ಸಚಿವ ಡ್ಮಿಟ್ರೊ ಕುಲೆಬಾ ರಷ್ಯಾದಿಂದ ತೈಲೋತ್ಪನ್ನಗಳನ್ನು ಖರೀದಿಸಬೇಡಿ ಎಂದು ವಿನಂತಿಸಿದ್ದಾರೆ. ರಷ್ಯಾದಿಂದ ನೀವು ಖರೀದಿಸುವ ಪೆಟ್ರೋಲಿಯಂ ಉತ್ಪನ್ನ ಮತ್ತು ನೈಸರ್ಗಿಕ ಅನಿಲಗಳಲ್ಲಿ ಉಕ್ರೇನ್ ಜನರ ರಕ್ತದ ವಾಸನೆಯಿದೆ ಎಂದು ಹೇಳಿದ್ದಾರೆ.

ಭಾರತದ ಪ್ರಮುಖ ನಗರಗಳ ಪೆಟ್ರೋಲ್, ಡೀಸೆಲ್ ದರ ಎಷ್ಟಾಗಿದೆ?

ಭಾರತದ ತೈಲ ಕಂಪನಿಗಳು ಇಂದು ಬೆಳಗ್ಗೆ ಪೆಟ್ರೋಲ್​- ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡಿದೆ. ಕೆಲಸ ಕೆಲಸಕ್ಕೆ ತೆರಳುವ ಬಹುತೇಕರು ಈಗ ಸ್ವಂತ ವಾಹನ ಅವಲಂಬಿಸಿರುತ್ತಾರೆ. ಪೆಟ್ರೋಲ್ ಹಾಗೂ ಡೀಸೆಲ್ ದರ ಎಷ್ಟಿದೆ ಎಂಬುದು ಎಲ್ಲರಿಗೂ ಕುತೂಹಲದ ವಿಷಯ ಆಗಿರುತ್ತದೆ. ಇಂದು (ಮಾರ್ಚ್ 07, ಸೋಮವಾರ) ಕೂಡ ಇಂಧನಗಳ ದರದಲ್ಲಿ (Fuel Rate) ಯಾವುದೇ ಬದಲಾವಣೆಯಾಗಿಲ್ಲ. ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.53 ರೂಪಾಯಿ ಇದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ವಿವಿಧ ನಗರದಲ್ಲಿ ಪೆಟ್ರೋಲ್ ದರ ಎಷ್ಟಿದೆ ಎಂಬುದನ್ನು ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/petrol-price-today.html

ವಿವಿಧ ನಗರದ ಡೀಸೆಲ್ ದರ ತಿಳಿಯಲು ಈ ಕೆಳಗಿನ ಲಿಂಕ್ಅನ್ನು ಕ್ಲಿಕ್ ಮಾಡಿ: https://tv9kannada.com/business/diesel-price-today.htm

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ