AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಟೋಬರ್​ನಲ್ಲಿ ಭಾರತದ ನಿರುದ್ಯೋಗ ದರ ಶೇ. 4.9ಕ್ಕೆ ಇಳಿಕೆ; ಉದ್ಯೋಗಸ್ಥ ಮಹಿಳೆಯರ ಸಂಖ್ಯೆಯಲ್ಲಿ ಹೆಚ್ಚಳ

ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯೋಗ ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದಾರೆ. ಇದರಿಂದ 2026ರ ಅಕ್ಟೋಬರ್ ತಿಂಗಳಲ್ಲಿ ಭಾರತದ ಒಟ್ಟು ನಿರುದ್ಯೋಗ ದರವು ಶೇ. 4.9ಕ್ಕೆ ಇಳಿಕೆಯಾಗಿದೆ ಎಂದು ಅಧಿಕೃತ ಸಮೀಕ್ಷಾ ವರದಿಗಳು ತಿಳಿಸಿವೆ. ಉದ್ಯೋಗ ಮಾರುಕಟ್ಟೆಯಲ್ಲಿ ಮಹಿಳಾ ಪಾಲ್ಗೊಳ್ಳುವಿಕೆ ಪ್ರಮಾಣ ಶೇ. 35 ಇದೆ. ಒಟ್ಟಾರೆ ಕೆಲಸ ಮಾಡುವ ಮಹಿಳೆಯರ ಪ್ರಮಾಣ ಶೇ. 33.3ಕ್ಕೆ ಏರಿದೆ.

ಅಕ್ಟೋಬರ್​ನಲ್ಲಿ ಭಾರತದ ನಿರುದ್ಯೋಗ ದರ ಶೇ. 4.9ಕ್ಕೆ ಇಳಿಕೆ; ಉದ್ಯೋಗಸ್ಥ ಮಹಿಳೆಯರ ಸಂಖ್ಯೆಯಲ್ಲಿ ಹೆಚ್ಚಳ
ಜವಳಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕನ ಚಿತ್ರImage Credit source: Getty Images
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 16, 2026 | 7:45 PM

Share

ನವದೆಹಲಿ, ನವೆಂಬರ್ 16: ಸೆಪ್ಟೆಂಬರ್‌ನಲ್ಲಿ ಶೇ. 5.0 ರಷ್ಟಿದ್ದ ಭಾರತದ ನಿರುದ್ಯೋಗ ದರವು ಅಕ್ಟೋಬರ್‌ನಲ್ಲಿ ಶೇ. 4.9ಕ್ಕೆ ಇಳಿದಿದೆ. ಕಳೆದ ವರ್ಷದ ಅದೇ ತಿಂಗಳಲ್ಲಿ (2025ರ ಅಕ್ಟೋಬರ್) ಈ ನಿರುದ್ಯೋಗ ದರ (Unemployment rate) ಶೇ. 5.2 ಎಂದು ದಾಖಲಾಗಿತ್ತು. ಇದು 15 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟವರಲ್ಲಿನ ನಿರುದ್ಯೋಗ ಪ್ರಮಾಣವಾಗಿದೆ.

ನಗರ ಪ್ರದೇಶದ ನಿರುದ್ಯೋಗ ದರವು ಸೆಪ್ಟೆಂಬರ್‌ನಲ್ಲಿ ಶೇ. 6.9ರಷ್ಟಿದ್ದದ್ದು ಅಕ್ಟೋಬರ್​ನಲ್ಲಿ ಶೇ. 6.7ಕ್ಕೆ ತಗ್ಗಿದೆ. ಗ್ರಾಮೀಣ ಪ್ರದೇಶದಲ್ಲಿ ಇದು ಶೇ. 4.2ರಷ್ಟು ಸ್ಥಿರವಾಗಿದೆ.

ಉದ್ಯೋಗದಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಯಲ್ಲಿ ಹೆಚ್ಚಳ

ಉದ್ಯೋಗ ಮಾರುಕಟ್ಟೆಯಲ್ಲಿ ಮಹಿಳೆಯರ ಸಕ್ರಿಯ ಪಾಲ್ಗೊಳ್ಳುವಿಕೆ ಹೆಚ್ಚಾಗಿರುವುದು ಈ ಇಳಿಕೆಗೆ ಪ್ರಮುಖ ಕಾರಣವಾಗಿದೆ. ಮಹಿಳಾ ಉದ್ಯೋಗ ಭಾಗವಹಿಸುವಿಕೆಯ ಪ್ರಮಾಣ (LFPR) ಶೇ. 35ಕ್ಕೆ ಏರಿಕೆಯಾಗಿದೆ. ಕೆಲಸ ಮಾಡುವ ಮಹಿಳೆಯರ ಪ್ರಮಾಣ ಸೆಪ್ಟೆಂಬರ್​ನಲ್ಲಿ ಶೇ. 32.8ರಷ್ಟು ಇದ್ದದ್ದು ಅಕ್ಟೋಬರ್​ನಲ್ಲಿ ಶೇ. 33.3ಕ್ಕೆ ಏರಿದೆ.

ಇದನ್ನೂ ಓದಿ: ಇನ್ನೂ ಓದು ಮುಗಿಯದಿದ್ದರೂ 2 ಕೋಟಿ ರೂ ಸಂಬಳದ ಕೆಲಸ ಗಿಟ್ಟಿಸಿದ ಧರ್ಮತೇಜ ರೆಡ್ಡಿ

ವಿಶೇಷವಾಗಿ ಗ್ರಾಮೀಣ ಪ್ರದೇಶದ ಮಹಿಳೆಯರ ಉದ್ಯೋಗ ಭಾಗವಹಿಸುವಿಕೆಯು ಶೇ. 39.5ಕ್ಕೆ ತಲುಪಿದೆ. ಒಟ್ಟಾರೆ ಮಹಿಳಾ ನಿರುದ್ಯೋಗ ದರವು ಅಕ್ಟೋಬರ್​ನಲ್ಲಿ ಶೇ. 5.0ಕ್ಕೆ ಕುಸಿದಿದೆ. ಸೆಪ್ಟೆಂಬರ್​ನಲ್ಲಿ ಇದು ಶೇ. 5.2 ಇತ್ತು.

ಒಟ್ಟಾರೆ ಕಾರ್ಮಿಕ ಬಲದ ವೃದ್ಧಿ

ದೇಶದಲ್ಲಿ ಕೆಲಸ ಮಾಡುತ್ತಿರುವ ಅಥವಾ ಕೆಲಸ ಹುಡುಕುತ್ತಿರುವವರ ಒಟ್ಟು ಪ್ರಮಾಣವನ್ನು ಸೂಚಿಸುವ ಕಾರ್ಮಿಕ ಶಕ್ತಿಯ ಭಾಗವಹಿಸುವಿಕೆ ದರವು (LFPR) ಶೇ. 55.7ಕ್ಕೆ ಹೆಚ್ಚಾಗಿದೆ.

ಇದನ್ನೂ ಓದಿ: ಜಾಗತಿಕ ಎಐ ಪೂರೈಕೆ ಸರಪಳಿ ವ್ಯವಸ್ಥೆಗೆ ಮೈತ್ರಿ; ಅಮೆರಿಕ ನೇತೃತ್ವದ ಗುಂಪಿಗೆ ಭಾರತ ಸೇರ್ಪಡೆ

ಚೀನಾಗಿಂತಲೂ ಭಾರತದಲ್ಲಿ ಕಡಿಮೆ ನಿರುದ್ಯೋಗ ದರ

ಜಿ20 ದೇಶಗಳ ಪೈಕಿ ಅತಿಕಡಿಮೆ ನಿರುದ್ಯೋಗ ದರ ಇರುವ ರಾಷ್ಟ್ರಗಳ ಸಾಲಿನಲ್ಲಿ ಭಾರತಕ್ಕೆ 12ನೇ ಸ್ಥಾನ ಬರುತ್ತದೆ. ಚೀನಾ ಶೇ. 5.1 ನಿರುದ್ಯೋಗದರ ಹೊಂದಿದೆ. ಸೌತ್ ಆಫ್ರಿಕಾದಲ್ಲಿ ಬರೋಬ್ಬರಿ ಶೇ. 33ರಷ್ಟು ನಿರುದ್ಯೋಗದರ ಇದೆ. ಸ್ಪೇನ್, ಟರ್ಕಿ, ಫ್ರಾನ್ಸ್, ಕೆನಡಾ ಮೊದಲಾದ ದೇಶಗಳೂ ಕೂಡ ಅಧಿಕ ನಿರುದ್ಯೋಗ ದರ ಹೊಂದಿವೆ.

ಜಾಗತಿಕವಾಗಿ, ಥಾಯ್ಲೆಂಡ್​ನಲ್ಲಿ ನಿರುದ್ಯೋಗ ಪ್ರಮಾಣ ಕೇವಲ ಶೇ. 1 ಮಾತ್ರವೇ ಇದೆ. ಗ್ಯಾಬಾನ್​ನಿಂದ ಹಿಡಿದು ಸ್ವಾಜಿಲ್ಯಾಂಡ್​ವರೆಗೆ ಹತ್ತು ದೇಶಗಳಲ್ಲಿ ನಿರುದ್ಯೋಗ ದರ ಶೇ. 20ಕ್ಕಿಂತಲೂ ಹೆಚ್ಚಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸ್ಟಿಂಗ್ ಆಪರೇಷನ್ ಕೇಸ್​: ಸಿಸಿಬಿ ಮುಂದೆ ಕೃಪಾ ಆಳ್ವಾ ಹಾಜರ್
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಸೋನಿಯಾ ಗಾಂಧಿಯ ಆತ್ಮಕತೆ ಇಂದು ಅಧಿಕೃತ ಬಿಡುಗಡೆ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಮದ್ಯ ಮಾರಾಟ ನಿಷೇಧ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ತಪ್ಪಿದ ಅನಾಹುತ
ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ: ತಪ್ಪಿದ ಅನಾಹುತ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
‘ತಲೆ ಮೇಲೆ ಗಾನವಿ ಕಾಲಿಟ್ಟಳು’: ಬಿಗ್ ಬಾಸ್ ಒಳಗಿನ ವಿಷಯ ತೆರೆದಿಟ್ಟ ಸೋನಿಕಾ
ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌:ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ
ರಾಜ್ಯಾದ್ಯಂತ ಹಾಫ್ ಹೆಲ್ಮೆಟ್ ಬ್ಯಾನ್‌:ಸಚಿವ ಬೈರತಿ ಸುರೇಶ್ ಮಹತ್ವದ ಮಾಹಿತಿ
ರೇಷನ್ ಕಾರ್ಡ್‌ಗಾಗಿ 40 ವರ್ಷಗಳಿಂದ ಒಂಟಿ ವೃದ್ಧೆಯ ಪರದಾಟ
ರೇಷನ್ ಕಾರ್ಡ್‌ಗಾಗಿ 40 ವರ್ಷಗಳಿಂದ ಒಂಟಿ ವೃದ್ಧೆಯ ಪರದಾಟ
‘ನಾನು ಕನ್ನಡ ನಟರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ’; ಶ್ರೀರಾಮ್ ಸ್ಪಷ್ಟನೆ
‘ನಾನು ಕನ್ನಡ ನಟರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ’; ಶ್ರೀರಾಮ್ ಸ್ಪಷ್ಟನೆ
ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 280 ಕೋಟಿ ರೂ. ವೇತನ ಹಿಂಬಾಕಿ ಬಿಡುಗಡೆ
ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 280 ಕೋಟಿ ರೂ. ವೇತನ ಹಿಂಬಾಕಿ ಬಿಡುಗಡೆ
ಹೊಸ ಗಂಗಾ ಮನೆಯ ಬಗ್ಗೆ ಮುಕ್ತವಾಗಿ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌
ಹೊಸ ಗಂಗಾ ಮನೆಯ ಬಗ್ಗೆ ಮುಕ್ತವಾಗಿ ಹಂಚಿಕೊಂಡ ಸಿಎಂ ಡಿಕೆ ಶಿವಕುಮಾರ್‌