Union Budget 2023-24: ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಸಾಧ್ಯತೆ; ವರದಿ

ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸುವುದರಿಂದ ಹೂಡಿಕೆಗೆ ಹೆಚ್ಚು ಅವಕಾಶ ಕಲ್ಪಿಸುವುದರ ಜತೆಗೆ ತೆರಿಗೆ ಮೌಲ್ಯಮಾಪನ ಪ್ರಮಾಣವನ್ನೂ ಕಡಿಮೆ ಮಾಡಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Union Budget 2023-24: ತೆರಿಗೆ ವಿನಾಯಿತಿ ಮಿತಿ 5 ಲಕ್ಷ ರೂ.ಗೆ ಸಾಧ್ಯತೆ; ವರದಿ
ಸಾಂದರ್ಭಿಕ ಚಿತ್ರImage Credit source: PTI
Follow us
TV9 Web
| Updated By: Ganapathi Sharma

Updated on:Jan 04, 2023 | 2:07 PM

ನವದೆಹಲಿ: ಆದಾಯ ತೆರಿಗೆ (Income Tax) ವಿನಾಯಿತಿ ಮಿತಿಯನ್ನು (Tax Free Slab) 5 ಲಕ್ಷ ರೂ.ಗೆ ವಿಸ್ತರಿಸಲು ನೀತಿ ನಿರೂಪಕರು ಚಿಂತನೆ ನಡೆಸುತ್ತಿದ್ದಾರೆ. ಎರಡು ವರ್ಷ ಹಿಂದೆ ಜಾರಿಗೆ ತಂದಿದ್ದ ಪರ್ಯಾಯ ವೈಯಕ್ತಿಕ ಆದಾಯ ತೆರಿಗೆ ನೀತಿಗೆ (Alternative Tax Regime) ಪೂರಕವಾಗಿ ಈ ಕುರಿತು ಚಿಂತನೆ ನಡೆಸಲಾಗಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ಬ್ಯುಸಿನೆಸ್​ ಸ್ಟಾಂಡರ್ಡ್’ ವರದಿ ಮಾಡಿದೆ. ಪ್ರಸ್ತುತ 2.5 ಲಕ್ಷ ರೂ.ನಿಂದ ಕಡಿಮೆ ವಾರ್ಷಿಕ ಆದಾಯ ಹೊಂದಿರುವವರು ತೆರಿಗೆ ಪಾವತಿಸಬೇಕಾಗಿಲ್ಲ. ತೆರಿಗೆ ವಿನಾಯಿತಿ ಮಿತಿಯನ್ನು ಹೆಚ್ಚಿಸುವುದರಿಂದ ಹೂಡಿಕೆಗೆ ಹೆಚ್ಚು ಅವಕಾಶ ಕಲ್ಪಿಸುವುದರ ಜತೆಗೆ ತೆರಿಗೆ ಮೌಲ್ಯಮಾಪನ ಪ್ರಮಾಣವನ್ನೂ ಕಡಿಮೆ ಮಾಡಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಸ್ತುತ ಕೆಲವೇ ಕೆಲವು ಮಂದಿ ತೆರಿಗೆ ಪಾವತಿದಾರರು ಮಾತ್ರ ಪರ್ಯಾಯ ತೆರಿಗೆ ನೀತಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅನೇಕರಿಗೆ ಹಳೆಯ ಆದಾಯ ತೆರಿಗೆ ನೀತಿಯನ್ನು ಆಯ್ದುಕೊಂಡರೆ ‘ಆದಾಯ ತೆರಿಗೆ ಕಾಯ್ದೆ’ಯ ಸೆಕ್ಷನ್ 80ಸಿ ಹಾಗೂ 80ಡಿ ಮೂಲಕ ಹೆಚ್ಚಿನ ತೆರಿಗೆ ವಿನಾಯಿತಿ ಪಡೆಯಲು ಅವಕಾಶವಿದೆ. ಪರ್ಯಾಯ ತೆರಿಗೆ ನೀತಿಯಲ್ಲಿ ಅನೇಕ ವಿನಾಯಿತಿ ಆಯ್ಕೆಗಳು ಇಲ್ಲವಾಗಿವೆ. 5 ಲಕ್ಷ ರೂ. ವರೆಗಿನ ಆದಾಯಕ್ಕೆ ತೆರಿಗೆ ವಿನಾಯಿತಿ ದೊರೆಯುತ್ತದೆ. 2.5 ಲಕ್ಷ ರೂ.ನಿಂದ 5 ಲಕ್ಷ ರೂ.ವರೆಗಿನ ಆದಾಯಕ್ಕೆ ರಿಬೇಟ್ ದೊರೆಯುತ್ತದೆ. ಹೀಗಾಗಿ ಹೊಸ ಪರ್ಯಾಯ ತೆರಿಗೆ ಪದ್ಧತಿಯಲ್ಲಾಗಲೀ ಹಳೆಯ ತೆರಿಗೆ ನೀತಿಯಲ್ಲಾಗಲೀ 5 ಲಕ್ಷ ರೂ. ವರೆಗೆ ಆದಾಯ ಪಡೆಯುತ್ತಿರುವವರು ತೆರಿಗೆ ವಿನಾಯಿತಿ ಪಡೆಯುತ್ತಿದ್ದಾರೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದರು.

ಬಜೆಟ್​​ ಸಿದ್ಧತೆ ವೇಳೆ ಸಮಾಲೋಚನೆ

ತೆರಿಗೆ ವಿನಾಯಿತಿ ಮಿತಿ ಹೆಚ್ಚಳ, ಪರ್ಯಾಯ ಆದಾಯ ತೆರಿಗೆ ನೀತಿಯನ್ನು ಇನ್ನಷ್ಟು ಆಕರ್ಷಕಗೊಳಿಸುವ ವಿಚಾರವಾಗಿ ಬಜೆಟ್ ಸಿದ್ಧತೆ ವೇಳೆ ಸಮಾಲೋಚನೆ ನಡೆಸಲಾಗುತ್ತಿದೆ. ಅನೇಕ ಇಲಾಖೆಗಳ ವಿಚಾರವಾಗಿ ಸಲಹೆಗಳನ್ನು ಕೋರಲಾಗಿದೆ ಎಂದು ಮೂಲಗಳು ತಿಳಿಸಿವೆ. ತೆರಿಗೆಗೆ ಸಂಬಂಧಿಸಿದ ಬಜೆಟ್ ಸಿದ್ಧತೆಗಳು ಮುಂದಿನ ವಾರದಿಂದ ಆರಂಭವಾಗಲಿವೆ. ಪರ್ಯಾಯ ತೆರಿಗೆ ನೀತಿಯನ್ನು ಇನ್ನಷ್ಟು ಆಕರ್ಷಕಗೊಳಿಸುವ ವಿಚಾರವಾಗಿ ಬಜೆಟ್ ಸಿದ್ಧತೆ ಸಭೆಗಳಲ್ಲಿ ಚರ್ಚಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: GST Council Meet: ಮುಂದಿನ ವಾರ ಜಿಎಸ್​ಟಿ ಮಂಡಳಿ ಸಭೆ; ಆರೋಗ್ಯ ವಿಮೆ ತೆರಿಗೆ ಇಳಿಕೆ ನಿರೀಕ್ಷೆ

ಆದಾಗ್ಯೂ, ಅಂಥ ಪ್ರಸ್ತಾವವು ಒಟ್ಟಾರೆ ಆದಾಯದ ಮೇಲೆ ಬೀರುವ ಪ್ರಭಾವ ಮತ್ತು ಅದನ್ನು ಜಾರಿಗೊಳಿಸಲು ಅವಕಾಶವಿದೆಯೇ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ ಎಂದು ಅವರು ಹೇಳಿದ್ದಾರೆ. ತೆರಿಗೆ ವಿನಾಯಿತಿ ಮಿತಿ ಹೆಚ್ಚಳ ಮಾಡಿದರೆ ಆದಾಯದ ಮೇಲೆ ಹೇಗೆ ಪರಿಣಾಮ ಬೀರಬಹುದು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಹಳೆಯ ಮತ್ತು ಪರ್ಯಾಯ ಆದಾಯ ತೆರಿಗೆ ಪದ್ಧತಿಯಲ್ಲಿ ಬದಲಾವಣೆ ಮಾಡುವ ಅಗತ್ಯವಿದೆಯೇ ಎಂಬ ಬಗ್ಗೆ ಮೊದಲಿಗೆ ಸಮಾಲೋಚನೆ ನಡೆಯಲಿದೆ ಎಂದು ಅಧಿಕಾರಿ ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಪರ್ಯಾಯ ತೆರಿಗೆ ನೀತಿಯಡಿ ಈಗ ಹೀಗಿದೆ ತೆರಿಗೆ ಲೆಕ್ಕಾಚಾರ

  • 2.5 ಲಕ್ಷ ರೂ. ಆದಾಯದ ವರೆಗೆ ಶೂನ್ಯ ತೆರಿಗೆ
  • 2.5 ಲಕ್ಷ ರೂ.ನಿಂದ 5 ಲಕ್ಷ ರೂ. ವರೆಗಿನ ಆದಾಯಕ್ಕೆ ಶೇಕಡಾ 5ರ ತೆರಿಗೆ
  • 5 ಲಕ್ಷ ರೂ.ನಿಂದ 7.5 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇಕಡಾ 10ರ ತೆರಿಗೆ
  • 7.5 ಲಕ್ಷ ರೂ.ನಿಂದ 10 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇಕಡಾ 15ರ ತೆರಿಗೆ
  • 10 ಲಕ್ಷ ರೂ.ನಿಂದ 12.5 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇಕಡಾ 20ರ ತೆರಿಗೆ
  • 12.5 ಲಕ್ಷ ರೂ.ನಿಂದ 15 ಲಕ್ಷ ರೂ.ವರೆಗಿನ ಆದಾಯಕ್ಕೆ ಶೇಕಡಾ 25ರ ತೆರಿಗೆ
  • 15 ಲಕ್ಷ ರೂ. ಮೇಲ್ಪಟ್ಟ ಆದಾಯಕ್ಕೆ ಶೇಕಡಾ 30ರ ತೆರಿಗೆ

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:34 am, Mon, 12 December 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ