Income Tax: ಆದಾಯ ತೆರಿಗೆ ಮಿತಿ ಹೆಚ್ಚಿಸಬೇಕೆಂಬ ಬೇಡಿಕೆ ಸರಿಯೇ? ಟಿವಿ9 ಸಮೀಕ್ಷೆಯಲ್ಲಿ ವ್ಯಕ್ತವಾದ ಅಭಿಪ್ರಾಯ ಇಲ್ಲಿದೆ

TV9 kannada Digital Poll; ಕೇಂದ್ರ ಬಜೆಟ್ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಮಿತಿ ಹೆಚ್ಚಿಸಬೇಕೆಂಬ ಬೇಡಿಕೆ ಸರಿಯೇ? ಮುಂಬರುವ ಬಜೆಟ್​ನಲ್ಲಿ ಮಿತಿ ಹೆಚ್ಚಿಸುವ ಸಾಧ್ಯತೆ ಇದೆಯೇ ಎಂದು ‘ಟಿವಿ9 ಕನ್ನಡ ಡಿಜಿಟಲ್’ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಯನ್ನಿಡಲಾಗಿತ್ತು. ಇದಕ್ಕೆ ಅನೇಕ ಮಂದಿ ಕಮೆಂಟ್ ಮಾಡಿದ್ದಾರೆ.

Income Tax: ಆದಾಯ ತೆರಿಗೆ ಮಿತಿ ಹೆಚ್ಚಿಸಬೇಕೆಂಬ ಬೇಡಿಕೆ ಸರಿಯೇ? ಟಿವಿ9 ಸಮೀಕ್ಷೆಯಲ್ಲಿ ವ್ಯಕ್ತವಾದ ಅಭಿಪ್ರಾಯ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on:Jan 04, 2023 | 2:08 PM

2023-24ನೇ ಸಾಲಿನ ಮುಂಗಡ ಪತ್ರಕ್ಕೆ (Union Budget 2023-24) ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಈಗಾಗಲೇ ಪೂರ್ವ ತಯಾರಿ ಆರಂಭಿಸಿದ್ದು, ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರ ಜತೆ ಮೊದಲ ಸುತ್ತಿನ ಸಭೆ ನಡೆಸಿದ್ದಾರೆ. ಜತೆಗೆ ಕೈಗಾರಿಕೋದ್ಯಮಿಗಳ ಜತೆಗೂ ಸಭೆಗಳನ್ನು ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಆದಾಯ ತೆರಿಗೆ ಮಿತಿಯನ್ನು (Income Tax Limit) ಹೆಚ್ಚಿಸಬೇಕು ಎಂಬ ಆಗ್ರಹವೂ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ. ವಾರ್ಷಿಕ 8 ಲಕ್ಷ ರೂ.ಗಿಂತ ಕಡಿಮೆ ಆದಾಯ ಹೊಂದಿರುವವರಿಂದ ಆದಾಯ ತೆರಿಗೆ ಸಂಗ್ರಹಿಸುತ್ತಿರುವುದನ್ನು ಪ್ರಶ್ನಿಸಿ ಡಿಎಂಕೆ ನಾಯಕ ಕುನ್ನೂರ್ ಶ್ರೀನಿವಾಸನ್ ಎಂಬವರು ಮದ್ರಾಸ್ ಹೈಕೋರ್ಟ್​ನ ಮದುರೈ ಪೀಠಕ್ಕೆ ಇತ್ತೀಚೆಗೆ ಅರ್ಜಿ ಸಲ್ಲಿಸಿದ್ದರು. ಈ ಎಲ್ಲ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಆದಾಯ ತೆರಿಗೆ ಮಿತಿ ಹೆಚ್ಚಿಸಬೇಕೆಂಬ ಬೇಡಿಕೆ ಸರಿಯೇ? ಮುಂಬರುವ ಬಜೆಟ್​ನಲ್ಲಿ ಮಿತಿ ಹೆಚ್ಚಿಸುವ ಸಾಧ್ಯತೆ ಇದೆಯೇ ಎಂದು ‘ಟಿವಿ9 ಕನ್ನಡ ಡಿಜಿಟಲ್’ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಯನ್ನಿಡಲಾಗಿತ್ತು. ಇದಕ್ಕೆ ಅನೇಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Income Tax: 8 ಲಕ್ಷ ರೂ.ಗಿಂತ ಕಡಿಮೆ ಆದಾಯಕ್ಕೆ ತೆರಿಗೆ ಬೇಡ; ಕೇಂದ್ರದ ಅಭಿಪ್ರಾಯ ಕೋರಿದ ಮದ್ರಾಸ್ ಹೈಕೋರ್ಟ್

‘ಟಿವಿ9 ಕನ್ನಡ ಡಿಜಿಟಲ್’ನ ಫೇಸ್​ಬುಕ್, ಇನ್​ಸ್ಟಾಗ್ರಾಂ, ಟ್ವಿಟರ್, ಯೂಟ್ಯೂಬ್ ತಾಣಗಳಲ್ಲಿ ಸಮೀಕ್ಷೆಗೆ ಪ್ರತಿಕ್ರಿಯಿಸಿದವರ ಪೈಕಿ ಹೆಚ್ಚಿನವರು ಆದಾಯ ತೆರಿಗೆ ಮಿತಿ ಹೆಚ್ಚಿಸಬೇಕು ಎಂಬ ಉತ್ತರ ನೀಡಿದ್ದಾರೆ. ಅದೇರೀತಿ, ಈ ಬೇಡಿಕೆಯನ್ನು ಸರ್ಕಾರ ಬಜೆಟ್​ನಲ್ಲಿ ಈಡೇರಿಸುವ ಸಾಧ್ಯತೆ ಕಡಿಮೆ ಎಂದೂ ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು, ಸರ್ಕಾರದ ತೆರಿಗೆ ನೀತಿ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸಮೀಕ್ಷೆಯಲ್ಲಿ ಭಾಗವಹಿಸಿದ ಮಹಿಳೆಯರು ಮತ್ತು ಪುರುಷರು  

ಸಾಮಾಜಿಕ ಜಾಲತಾಣಗಳು ತೆರಿಗೆ ಮಿತಿ ಹೆಚ್ಚಿಸಬೇಕೆಂಬ ಬೇಡಿಕೆ ಸರಿ ಎಂದವರು ಬಜೆಟ್​ನಲ್ಲಿ ಬೇಡಿಕೆ ಈಡೇರಿಕೆ ಸಾಧ್ಯತೆ ಇದೆ ಎಂದವರು
ಫೇಸ್ಬುಕ್ : ಪುರುಷರು – 99 %

ಮಹಿಳೆಯರು – 98 %

ಪುರುಷರು– 0 %

ಮಹಿಳೆಯರು – 0 %

ಇನ್ಸ್ಟಾಗ್ರಾಮ್ ಪುರುಷರು – 99 %

ಮಹಿಳೆಯರು -100 %

ಪುರುಷರು– 0 %

ಮಹಿಳೆಯರು – 0 %

ಟ್ವಿಟರ್ : ಪುರುಷರು– 90 %

ಮಹಿಳೆಯರು – 95 %

ಪುರುಷರು– 0 %

ಮಹಿಳೆಯರು – 0 %

ಯೂಟ್ಯಬ್ ಪುರುಷರು– 100 %

ಮಹಿಳೆಯರು -100 %

ಪುರುಷರು– 0 %

ಮಹಿಳೆಯರು – 0 %

ಸಮೀಕ್ಷೆಯಲ್ಲಿ ಜನರ ಅಭಿಪ್ರಾಯ

  • ನಿಜವಾಗಿಯೂ ಕೇಂದ್ರ ಸರ್ಕಾರ ಆದಾಯ ತೆರಿಗೆ ಮಿತಿಯನ್ನು ಹೆಚ್ಚಿಸಬೇಕು ಎಂದು ಸಂಜಯ್ ಡಿ.ಜೆ. ಎಂಬವರು ಉತ್ತರಿಸಿದ್ದರೆ, ಆದಾಯ ತೆರಿಗೆ ಮಿತಿಯನ್ನು 10 ಲಕ್ಷ ರೂ.ಗೆ ನಿಗದಿಪಡಿಸಬೇಕು ಎಂದು ಪ್ರತಾಪ್ ದೇವಾಂಗಂ ಎಂಬವರು ಉತ್ತರಿಸಿದ್ದಾರೆ.
  • ಸದ್ಯದ ಹಣದುಬ್ಬರ ಪರಿಸ್ಥಿತಿಯನ್ನು ಗಮನಿಸಿದರೆ ಆದಾಯ ತೆರಿಗೆ ಮಿತಿಯನ್ನು 10 ಲಕ್ಷ ರೂ.ಗೆ ನಿಗದಿಪಡಿಸಬೇಕು ಎಂದು ಆರೀಸ್ ಎಂಬವರು ಉತ್ತರಿಸಿದ್ದಾರೆ.
  • ಆದಾಯ ತೆರಿಗೆ ಮಿತಿಯನ್ನು 5ರಿಂದ 8 ಲಕ್ಷ ರೂ.ಗೆ ಹೆಚ್ಚಿಸಬೇಕು. ತೆರಿಗೆಯ ಪ್ರಮಾಣ ಎಲ್ಲರಿಗೂ ಒಂದೇ ರೀತಿ ಇರಬೇಕು ಎಂದು ದಶಕಂಠ ಹಿರೇಮಠ ಎಂಬವರು ಉತ್ತರಿಸಿದ್ದಾರೆ.
  • ಆದಾಯ ತೆರಿಗೆ ಮಿತಿಯನ್ನು 8ರಿಂದ 10 ಲಕ್ಷ ರೂ.ಗೆ ನಿಗದಿಪಡಿಸಬೇಕು ಎಂದು ಸಂತೋಷ್ ಕುಮಾರ್ ಸಂತು ಎಂಬವರು ಉತ್ತರಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Mon, 28 November 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್