Union Budget 2024: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಇನ್ನೂ 2 ಕೋಟಿ ಮನೆ: ನಿರ್ಮಲಾ ಸೀತಾರಾಮನ್ ಘೋಷಣೆ

Pradhan Mantri Awas Yojana: ಪಿಎಂ ಆವಾಸ್ ಯೋಜನೆಯಡಿ ದೇಶದಲ್ಲಿ 3 ಕೋಟಿ ಮನೆಗಳನ್ನು ನಿರ್ಮಿಸಲಾಗಿದ್ದು, ಅದನ್ನು 5 ಕೋಟಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆ ಹೇಳಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದರೇನು ಮತ್ತು ಅದರ ಅಡಿಯಲ್ಲಿ ಮನೆ ನಿರ್ಮಿಸಲು ಸರ್ಕಾರದಿಂದ ಯಾರು ಆರ್ಥಿಕ ಸಹಾಯವನ್ನು ಪಡೆಯಬಹುದು ಎಂಬ ಮಾಹಿತಿ ಇಲ್ಲಿದೆ.

Union Budget 2024: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಇನ್ನೂ 2 ಕೋಟಿ ಮನೆ: ನಿರ್ಮಲಾ ಸೀತಾರಾಮನ್ ಘೋಷಣೆ
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಇನ್ನೂ 2 ಕೋಟಿ ಮನೆ: ನಿರ್ಮಲಾ ಸೀತಾರಾಮನ್ ಘೋಷಣೆ

Updated on: Feb 01, 2024 | 12:24 PM

ನವದೆಹಲಿ, ಫೆಬ್ರವರಿ 1: ಪಿಎಂ ಆವಾಸ್ ಯೋಜನೆಯಡಿ (PMAY) 3 ಕೋಟಿ ಮನೆಗಳನ್ನು ನಿರ್ಮಿಸಲಾಗಿದ್ದು, ಅದನ್ನು 5 ಕೋಟಿಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಹೇಳಿದರು. ಸಂಸತ್​ನಲ್ಲಿ ಮಧ್ಯಂತರ ಬಜೆಟ್ ಮಂಡನೆ (Union Budget 2024) ವೇಳೆ ಅವರು, ಭಾರತವು ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಸಾಮಾನ್ಯ ಜನರು ಸರ್ಕಾರದ ಯೋಜನೆಗಳಿಂದ ನೇರವಾಗಿ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಹೇಳಿದರು. ಕುಟುಂಬಕ್ಕೊಂದು ಮನೆ ಎಂಬ ಕನಸನ್ನು ಸರಕಾರ ನನಸು ಮಾಡುತ್ತಿದೆ. ಸರ್ಕಾರವು ಪ್ರಸ್ತುತ 2 ಕೋಟಿ ಹೊಸ ಮನೆಗಳನ್ನು ನಿರ್ಮಿಸಲು ಉದ್ದೇಶಿಸಿದೆ ಎಂದು ಅವರು ತಿಳಿಸಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆ ಎಂದರೇನು ಎಂದು? ಈ ಯೀಜನೆ ಅಡಿಯಲ್ಲಿ ಮನೆ ನಿರ್ಮಿಸಲು ಯಾರೆಲ್ಲ ಸರ್ಕಾರದಿಂದ ಆರ್ಥಿಕ ಸಹಾಯವನ್ನು ಪಡೆಯಬಹುದು ಎಂಬ ಮಾಹಿತಿ ಇಲ್ಲಿದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಎಂದರೇನು?

ಪ್ರಧಾನ ಮಂತ್ರಿ ಆವಾಸ್ ಯೋಜನೆಯು ಲಕ್ಷಾಂತರ ಜನರಿಗೆ ಸ್ವಂತ ಮನೆ ನಿರ್ಮಿಸಲು ಸಹಾಯ ಮಾಡುವ ಯೋಜನೆಯಾಗಿದೆ. ವಾಸ್ತವವಾಗಿ, ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಪ್ರಯೋಜನವು ಬಡವರಿಗೆ ಮಾತ್ರ ಲಭ್ಯವಿರುತ್ತದೆ. ಆದರೆ ಈಗ ನಗರ ಪ್ರದೇಶದ ಬಡ ಮತ್ತು ಮಧ್ಯಮ ವರ್ಗದವರನ್ನು ಸಹ ಅದರ ವ್ಯಾಪ್ತಿಯಲ್ಲಿ ತರಲಾಗಿದೆ. ಆದಾಯದ ಆಧಾರದ ಮೇಲೆ ಹಲವು ವರ್ಗಗಳಿವೆ ಮತ್ತು ಸಾಲದ ಮೊತ್ತವನ್ನು ಆ ವರ್ಗಗಳ ಆಧಾರದ ಮೇಲೆ ಮಾತ್ರ ನಿರ್ಧರಿಸಲಾಗುತ್ತದೆ. ಆರಂಭದಲ್ಲಿ ಯೋಜನೆ ಅಡಿಯಲ್ಲಿ ಗೃಹ ಸಾಲದ ಮೊತ್ತಕ್ಕೆ 3 ರಿಂದ 6 ಲಕ್ಷ ರೂ. ಸಬ್ಸಿಡಿ ಲಭ್ಯವಿತ್ತು. ಈಗ ಅದನ್ನು 18 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಬಜೆಟ್​ಗೂ ಮುನ್ನ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ ಬೆಲೆ ಏರಿಕೆ

ಶೇ 46 ಕ್ಕಿಂತ ಹೆಚ್ಚು ಮನೆ ಖರೀದಿದಾರರಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಬಗ್ಗೆ ತಿಳಿದಿಲ್ಲ ಎಂಬುದು ಇತ್ತೀಚಿನ ಸಮೀಕ್ಷೆಯೊಂದರಲ್ಲಿ ಬಹಿರಂಗಪಡಿಸಿದೆ. ‘ಬೇಸಿಕ್ ಹೋಮ್ ಲೋನ್’ ನಡೆಸಿದ ಈ ಸಮೀಕ್ಷೆಯಲ್ಲಿ ಸಮೀಕ್ಷೆಗೆ ಒಳಗಾದ ಶೇಕಡಾ 17 ರಷ್ಟು ಜನರು ಯೋಜನೆಯಡಿಯಲ್ಲಿ ಗರಿಷ್ಠ 2.67 ಲಕ್ಷ ರೂ.ಗಳ ಸಬ್ಸಿಡಿ ಲಭ್ಯವಿದೆ ಎಂದು ತಿಳಿದುಕೊಂಡಿದ್ದಾರೆ ಎಂದು ಬಹಿರಂಗಪಡಿಸಿತ್ತು.

ಇತ್ತಷ್ಟು ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us