AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Union Budget 2026: ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್ ಮಿಷನ್​ಗೆ ಪುಷ್ಟಿ; ರೇರ್ ಅರ್ಥ್ ಕಾರಿಡಾರ್ ನಿರ್ಮಾಣ

Union Budget 2026, announcements on electronics manufacturing, semiconductor mission, rare earth corridor: 2026-27ರ ಬಜೆಟ್​ನಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಸೆಕ್ಟರ್​ಗಳಿಗೆ ಒತ್ತು ಕೊಡಲಾಗಿದೆ. ಎಲೆಕ್ಟ್ರಾನಿಕ್ಸ್ ಬಿಡಿಭಾಗಗಳ ತಯಾರಿಕೆಗೆ 40,000 ಕೋಟಿ ರೂ ಅಲೋಕೇಶನ್ ಇಡಲಾಗಿದೆ. ಮೊದಲ ಸೆಮಿಕಂಡಕ್ಟರ್ ಮಿಷನ್ ಯಶಸ್ವಿಯಾಗಿದ್ದು, ಎರಡನೇ ಆವೃತ್ತಿಯ ಮಿಷನ್​ಗೆ ಚಾಲನೆ ಕೊಡಲಾಗುತ್ತದೆ ಎಂದಿದ್ದಾರೆ. ರೇರ್ ಅರ್ಥ್ ಕಾರಿಡಾರ್ ನಿರ್ಮಿಸುವುದಾಗಿಯೂ ಬಜೆಟ್​ನಲ್ಲಿ ಹೇಳಲಾಗಿದೆ.

Union Budget 2026: ಎಲೆಕ್ಟ್ರಾನಿಕ್ಸ್, ಸೆಮಿಕಂಡಕ್ಟರ್ ಮಿಷನ್​ಗೆ ಪುಷ್ಟಿ; ರೇರ್ ಅರ್ಥ್ ಕಾರಿಡಾರ್ ನಿರ್ಮಾಣ
ಸೆಮಿಕಂಡಕ್ಟರ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Feb 01, 2026 | 11:54 AM

Share

ನವದೆಹಲಿ, ಫೆ. 1: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ 9ನೇ ಬಜೆಟ್​ನಲ್ಲಿ ಆದ್ಯತಾ ಕ್ಷೇತ್ರಗಳ ಬೆಳವಣಿಗೆಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ಭಾರತದ ಭವಿಷ್ಯದ ಸೆಕ್ಟರ್ ಎನಿಸಿದ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಗಮನ ಕೊಟ್ಟಿದ್ದಾರೆ. ಎಲೆಕ್ಟ್ರಾನಿಕ್ ಕಾಂಪೊನೆಂಟ್ ಮ್ಯಾನುಫ್ಯಾಕ್ಚರಿಂಗ್ ಸ್ಕೀಮ್​ನಲ್ಲಿ ಅನುದಾನದ ಪ್ರಮಾಣವನ್ನು 40,000 ಕೋಟಿ ರೂಗೆ ಏರಿಸಿವುದಾಗಿ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಸರ್ಕಾರವು ಇಂಡಿಯಾ ಸೆಮಿಕಂಡಕ್ಟರ್ ಮಿಷನ್ 2.0 ಅನ್ನು ಆರಂಭಿಸಲಿದೆ ಎಂದು ಹಣಕಾಸು ಸಚಿವರು ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ. ಈ ಎರಡನೇ ಆವೃತ್ತಿಯ ಸೆಮಿಕಂಡಕ್ಟರ್ ಮಿಷನ್​ನಲ್ಲಿ ಉಪಕರಣಗಳು ಮತ್ತು ವಸ್ತುಗಳ ತಯಾರಿಕೆ, ಫುಲ್ ಸ್ಟ್ಯಾಕ್ ಇಂಡಿಯನ್ ಐಪಿ ಅಭಿವೃದ್ಧಿಗೆ ಒತ್ತು ಕೊಡಲಾಗುತ್ತದೆ. ಈ ಸೆಕ್ಟರ್​ನ ಸಪ್ಲೈ ಚೈನ್ ಅನ್ನು ಬಲಪಡಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಈ ಮೊದಲು ಸರ್ಕಾರ ಆರಂಭಿಸಿದ ಸೆಮಿಕಂಡಕ್ಟರ್ ಮಿಷನ್ ಹೇಗೆ ದೇಶದಲ್ಲಿ ಸೆಮಿಕಂಡಕ್ಟರ್ ಸಾಮರ್ಥ್ಯಗಳನ್ನು ಹೆಚ್ಚಿಸಲು ಸಾಧ್ಯವಾಯಿತು, ಮುಂಬರುವ ಎರಡನೇ ಆವೃತ್ತಿಯ ಮಿಷನ್ ಹೇಗೆ ಭಾರತಕ್ಕೆ ಅನುಕೂಲವಾಗುತ್ತದೆ ಎಂಬುದನ್ನು ಅವರು ವಿವರಿಸಿದ್ದಾರೆ.

ನಿರ್ಮಲಾ ಸೀತಾರಾಮನ್​ ಬಜೆಟ್​ ಭಾಷಣ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ

ರೇರ್ ಅರ್ತ್ ಕಾರಿಡಾರ್​ಗಳು

ಸೆಮಿಕಂಡಕ್ಟರ್ ಮಿಷನ್ ಹಾಗೂ ಇತರ ಉದ್ಯಮಗಳಿಗೆ ಬಹಳ ಅಗತ್ಯವಾಗಿರುವ ವಿರಳ ಭೂಖನಿಜಗಳಿಗಾಗಿ ಸರ್ಕಾರ ಹೊಸ ಪ್ಲಾನ್ ಮಾಡಿದೆ. ಈ ವಸ್ತುಗಳಿಗಾಗಿ ಭಾರತ ಬಹುತೇಕ ಆಮದು ಮೇಲೆ ಅವಲಂಬಿತವಾಗಿದೆ. ಇದನ್ನು ತಪ್ಪಿಸಲು ದೇಶೀಯವಾಗಿ ಇವುಗಳ ಉತ್ಪಾದನೆಗೆ ಸರ್ಕಾರ ಯೋಜಿಸಿದೆ. ಬಜೆಟ್​ನಲ್ಲಿ ಈ ಬಗ್ಗೆ ಘೋಷಣೆ ಮಾಡಲಾಗಿದ್ದು, ರೇರ್ ಅರ್ಥ್ ಕಾರಿಡಾರ್ ನಿರ್ಮಿಸುತ್ತಿರುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಒಡಿಶಾ, ಕೇರಳ ಮತ್ತು ಆಂಧ್​ರಪ್ರದೇಶದಂತಹ ಖನಿಜ ಸಮೃದ್ಧ ರಾಜ್ಯಗಳನ್ನೊಳಗೊಂಡ ರೇರ್ ಅರ್ಥ್ ಕಾರಿಡಾರ್ ನಿರ್ಮಿಸಲಾಗುತ್ತದೆ. ಇಲ್ಲಿ ಸಂಶೋಧನೆ ಮತ್ತು ಮೈನಿಂಗ್​ಗೆ ಉತ್ತೇಜನ ಕೊಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಬಜೆಟ್ ಮಾಹಿತಿ ಕ್ಷಣಕ್ಷಣದ ಅಪ್​ಡೇಟ್, ಲೈವ್ ಬ್ಲಾಗ್

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:48 am, Sun, 1 February 26

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ