Railway Budget 2024: ವಂದೇ ಭಾರತ್​​ ಗುಣಮಟ್ಟಕ್ಕೆ 40 ಸಾವಿರ ಕೋಚ್​ಗಳ ಪರಿವರ್ತನೆ, ಬಜೆಟ್​ನಲ್ಲಿ ಘೋಷಣೆ

Union Budget 2024: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್​​ನಲ್ಲಿ ರೈಲ್ವೆ ಇಲಾಖೆಗೂ ಕೆಲವು ಯೋಜನೆಗಳನ್ನು ಘೋಷಿಸಲಾಗಿದೆ. ರೈಲು ಕೋಚ್​ಗಳ ಮೇಲ್ದರ್ಜೆಗೇರಿಸುವಿಕೆ, ಮೂರು ನೂತನ ಕಾರಿಡಾರ್​ಗಳ ನಿರ್ಮಾಣ ಸೇರಿದಂತೆ ರೈಲ್ವೆ ಇಲಾಖೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿರುವ ಯೋಜನೆಗಳ ವಿವರ ಇಲ್ಲಿದೆ.

Railway Budget 2024: ವಂದೇ ಭಾರತ್​​ ಗುಣಮಟ್ಟಕ್ಕೆ 40 ಸಾವಿರ ಕೋಚ್​ಗಳ ಪರಿವರ್ತನೆ, ಬಜೆಟ್​ನಲ್ಲಿ ಘೋಷಣೆ
ವಂದೇ ಭಾರತ್ ರೈಲು
Follow us
Ganapathi Sharma
|

Updated on:Feb 01, 2024 | 2:11 PM

ನವದೆಹಲಿ, ಫೆಬ್ರವರಿ 1: ಸುಮಾರು 40 ಸಾವಿರ ಬೋಗಿಗಳನ್ನು ವಂದೇ ಭಾರತ್ ರೈಲಿನ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಘೋಷಣೆ ಮಾಡಿದರು. ಕೇಂದ್ರ ಮಧ್ಯಂತರ ಬಜೆಟ್ (Union Budget 2024) ಮಂಡನೆ ಮಾಡಿದ ಅವರು, ಪ್ರಯಾಣಿಕರ ಸುರಕ್ಷತೆ ಮತ್ತು ಅನುಕೂಲ ವೃದ್ಧಿಸುವುದಕ್ಕಾಗಿ ಸಾಮಾನ್ಯ ಕೋಚ್​ಗಳನ್ನು ವಂದೇ ಭಾರತ್ ಗುಣಮಟ್ಟಕ್ಕೆ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.

ಹೊಸ ಹಣಕಾಸು ವರ್ಷಕ್ಕೆ ರೈಲ್ವೆ ಇಲಾಖೆಗೆ 2.55 ಲಕ್ಷ ಕೋಟಿ ಅನುದಾನ ಘೋಷಣೆ ಮಾಡಲಾಗಿದೆ.

ರೈಲ್ವೆಗೆ ಮೂರು ಕಾರಿಡಾರ್

ರೈಲ್ವೆ ಇಲಾಖೆಗೆ ಇಂಧನ, ಖನಿಜ, ಸಿಮೆಂಟ್ ಕಾರಿಡಾರ್, ಬಂದರು ಸಂಪರ್ಕ ಕಾರಿಡಾರ್ ಮತ್ತು ಹೈ ಟ್ರಾಫಿಕ್ ಡೆನ್ಸಿಟಿ ಕಾರಿಡಾರ್ ಅನ್ನು ಹಣಕಾಸು ಸಚಿವರು ಘೋಷಣೆ ಮಾಡಿದ್ದಾರೆ. ಪಿಎಂ ಗತಿಶಕ್ತಿ ಯೋಜನೆಯಡಿ ಈ ಕಾರಿಡಾರ್​ಗಳು ಸಾಕಾರಗೊಳ್ಳಲಿದ್ದು, ಬಹು ವಿಧದ ಸಂಪರ್ಕಕ್ಕೆ ನೆರವಾಗಲಿದೆ. ಈ ಕಾರಿಡಾರ್​ಗಳು ವೆಚ್ಚದಲ್ಲಿ ಗಮನಾರ್ಹ ಕಡಿತ ಮಾಡಲು ನೆರವಾಗುವುದರ ಜತೆಗೆ ದಕ್ಷತೆ ಸುಧಾರಣೆಗೆ ನೆರವಾಗಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ಪ್ರಯಾಣಿಕರ ಸುರಕ್ಷತೆ, ರೈಲುಗಳ ಸಂಚಾರದ ವೇಗ ವೃದ್ಧಿಗೆ ಕೂಡ ಹೊಸ ಹೈ ಟ್ರಾಫಿಕ್ ಡೆನ್ಸಿಟಿ ಕಾರಿಡಾರ್ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಕಳೆದ ವರ್ಷ 5,200 ಕಿಲೋಮೀಟರ್​ನಷ್ಟು ಹೊಸ ಹಳಿಗಳ ನಿರ್ಮಾಣ ಮಾಡಲಾಗಿದೆ. ಈಗ, ಪ್ರತಿ ದಿನ 15 ಕಿಲೋಮೀಟರ್​ನಷ್ಟು ಹಳಿ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸುವ ಗುರಿ ಹಾಕಿಕೊಳ್ಳಲಾಗಿದೆ. 2.4 ಲಕ್ಷ ಕೋಟಿ ಅನುದಾನದಲ್ಲಿ ಶೇ 77ರಷ್ಟು ಬಳಸಿಕೊಳ್ಳಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಇನ್ನೂ 2 ಕೋಟಿ ಮನೆ: ನಿರ್ಮಲಾ ಸೀತಾರಾಮನ್ ಘೋಷಣೆ

ಅಪಘಾತದ ವೇಳೆ ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದ ಕವಚ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ವಿಚಾರದಲ್ಲಿ ಅಂತಾರಾಷ್ಟ್ರೀಯ ಸಂಸ್ಥೆಗಳೂ ಉತ್ಸಾಹ ಪ್ರದರ್ಶಿಸಿವೆ. ಕವಚ ತಂತ್ರಜ್ಞಾನದಲ್ಲಿ ತೊಡಗಿಸಿಕೊಳ್ಳುವ ಮೂಲಕ ಉತ್ತರ ಅಮೆರಿಕ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಆಗ್ನೇಯ ಏಷ್ಯಾದ ಮಾರುಕಟ್ಟೆಗಳಲ್ಲಿ ಕೂಡ ಅವಕಾಶಗಳು ಸಿಗುತ್ತಿವೆ ಎಂದು ಸಚಿವರು ಹೇಳಿದ್ದಾರೆ.

ಮತ್ತಷ್ಟು ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:55 pm, Thu, 1 February 24

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು