AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಕಂಡಕ್ಟರ್, ಮೂಲಸೌಕರ್ಯ, ಮೊಬೈಲ್ ಫೋನ್ ಉತ್ಪಾದನೆ ಸೇರಿದಂತೆ ಏಳು ಪ್ರಮುಖ ಯೋಜನೆಗಳಿಗೆ ಸರ್ಕಾರದ ಅನುಮೋದನೆ

Union cabinet approves various programmes and schemes with expenditure of Rs 2.19 lakh crore: ಕೇಂದ್ರ ಸಚಿವ ಸಂಪುಟ ಮತ್ತು ಆರ್ಥಿಕ ವ್ಯವಹಾರಗಳ ಸಮಿತಿ ಸಭೆಯಲ್ಲಿ 2.19 ಲಕ್ಷ ಕೋಟಿ ರೂ ವೆಚ್ಚದ ವಿವಿಧ ಯೋಜನೆಗಳಿಗೆ ಅನುಮೋದನೆ ಸಿಕ್ಕಿದೆ. ಮೂಲ ಸೌಕರ್ಯ ಯೋಜನೆಗಳು, ಸೆಮಿಕಾನ್ ಮಿಷನ್, ರೈಲ್ವೆ ಯೋಜನೆಗಳು ಇತ್ಯಾದಿ ಒಳಗೊಂಡಿವೆ. ಮೊಬೈಲ್ ಫೋನ್ ತಯಾರಿಕೆಗೆ ಉತ್ತೇಜಿಸಲು ಎರಡನೇ ಆವೃತ್ತಿಯ ಪಿಎಲ್​ಐ ಅನ್ನು ಜಾರಿಗೊಳಿಸಲಾಗುತ್ತಿದೆ.

ಸೆಮಿಕಂಡಕ್ಟರ್, ಮೂಲಸೌಕರ್ಯ, ಮೊಬೈಲ್ ಫೋನ್ ಉತ್ಪಾದನೆ ಸೇರಿದಂತೆ ಏಳು ಪ್ರಮುಖ ಯೋಜನೆಗಳಿಗೆ ಸರ್ಕಾರದ ಅನುಮೋದನೆ
ನರೇಂದ್ರ ಮೋದಿImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 15, 2026 | 5:00 PM

Share

ನವದೆಹಲಿ, ಜುಲೈ 15: ಭಾರತದಲ್ಲಿ ತಯಾರಿಕಾ ಕ್ಷೇತ್ರ ಮತ್ತು ಮೂಲಸೌಕರ್ಯ ಕ್ಷೇತ್ರಕ್ಕೆ ಮತ್ತಷ್ಟು ಪುಷ್ಟಿ ಕೊಡಲು ಸರ್ಕಾರ ಪ್ರಯತ್ನಗಳನ್ನು ಮುಂದುವರಿಸಿದೆ. ಈ ನಿಟ್ಟಿನಲ್ಲಿ ಕೆಲ ಮಹತವದ ಯೋಜನೆಗಳಿಗೆ ಅನುಮೋದನೆ ಸಿಕ್ಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಮತ್ತು ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (CCEA) ಸಭೆಯಲ್ಲಿ ದೇಶದ ಮೂಲಸೌಕರ್ಯ, ಸೆಮಿಕಂಡಕ್ಟರ್, ಕೃಷಿ ಮತ್ತು ರೈಲ್ವೆ ಕ್ಷೇತ್ರಗಳಿಗೆ ಸಂಬಂಧಿಸಿದಂತೆ 2,19,353 ಕೋಟಿ ರೂ ವೆಚ್ಚದ 7 ಪ್ರಮುಖ ಐತಿಹಾಸಿಕ ನಿರ್ಧಾರಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳ ವಿವರ ಈ ಕೆಳಕಂಡಂತಿದೆ:

1) ವಾರಣಾಸಿಯಲ್ಲಿ ಎರಡು ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳು

ಉತ್ತರಪ್ರದೇಶದ ವಾರಣಾಸಿ ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಆಧುನಿಕ ಸಂಪರ್ಕ ಕಲ್ಪಿಸಲು ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ:

  • ಲಿಂಕ್ ಕಾರಿಡಾರ್ ನಿರ್ಮಾಣ: ರಾಷ್ಟ್ರೀಯ ಹೆದ್ದಾರಿ-19 (NH-19) ಅನ್ನು ವಾರಣಾಸಿ ರಿಂಗ್ ರೋಡ್‌ಗೆ ಸಂಪರ್ಕಿಸುವ 46.039 ಕಿಮೀ ಉದ್ದದ ಲಿಂಕ್ ಕಾರಿಡಾರ್ ನಿರ್ಮಿಸಲಾಗುವುದು. ಗಂಗಾ ನದಿ ತೀರದ ಮೂಲಕ ಹಾದುಹೋಗುವ ಈ ಯೋಜನೆಗೆ ರೂ. 14,447.64 ಕೋಟಿ ವೆಚ್ಚವಾಗಲಿದೆ. ಇದರಲ್ಲಿ 6-ಲೇನ್ ಎಲಿವೇಟೆಡ್ ರಸ್ತೆ ಮತ್ತು ಅತ್ಯಾಧುನಿಕ ಕೇಬಲ್ ಸೇತುವೆ (Cable-stayed bridge) ಒಳಗೊಂಡಿರುತ್ತದೆ.
  • ಎಲಿವೇಟೆಡ್ ಕಾರಿಡಾರ್: ವರುಣಾ ನದಿ ತೀರದಲ್ಲಿ 6/4 ಲೇನ್‌ಗಳ ಮತ್ತೊಂದು ಬೃಹತ್ ಎಲಿವೇಟೆಡ್ ಕಾರಿಡಾರ್ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಇದಕ್ಕೆ ರೂ. 10,998.32 ಕೋಟಿ ವೆಚ್ಚವಾಗಲಿದೆ.

ಇದನ್ನೂ ಓದಿ: ದೇಶದ ಭದ್ರತೆಗೆ ಕ್ವಾಂಟಮ್ ಕವಚ; ಡಿಆರ್​ಡಿಒದಿಂದ ಕ್ವಾಂಟಮ್ ಕೀ ಡಿಸ್ಟ್ರಿಬ್ಯೂಶನ್ ಸಿಸ್ಟಂನ ಪ್ರಯೋಗ ಯಶಸ್ವಿ; ಏನಿದು QKD?

2) ಸೆಮಿಕಾನ್ 2.0 ಮಿಷನ್

ಭಾರತವನ್ನು ಜಾಗತಿಕ ಚಿಪ್ ತಯಾರಿಕಾ ಹಬ್ ಮಾಡಲು ಐತಿಹಾಸಿಕ ಹೆಜ್ಜೆ ಇಡಲಾಗಿದೆ. ಭಾರತೀಯ ಸೆಮಿಕಂಡಕ್ಟರ್ ಮಿಷನ್‌ನ ಎರಡನೇ ಆವೃತ್ತಿಯಾದ ‘ಸೆಮಿಕಾನ್ 2.0’ ಯೋಜನೆಗೆ (Semicon 2.0 Mission) ರೂ. 1.27 ಲಕ್ಷ ಕೋಟಿ ಭಾರಿ ಮೊತ್ತದ ಅನುಮೋದನೆ ನೀಡಲಾಗಿದೆ. ಇದು ದೇಶದಲ್ಲಿ ಹೈ-ಟೆಕ್ ತಂತ್ರಜ್ಞಾನ ಮತ್ತು ಉದ್ಯೋಗ ಸೃಷ್ಟಿಗೆ ದೊಡ್ಡ ಕೊಡುಗೆ ನೀಡಲಿದೆ.

3) ಮೊಬೈಲ್ ಫೋನ್ ತಯಾರಿಕೆ

ದೇಶೀಯ ಮೊಬೈಲ್ ಉತ್ಪಾದನೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಮೊಬೈಲ್ ಉತ್ಪಾದನಾ ಪ್ರೋತ್ಸಾಹಕ ಯೋಜನೆ (PLI) ಯ ಎರಡನೇ ಆವೃತ್ತಿಗೆ (Mobile PLI – 2nd Edition) ಅನುಮೋದನೆ ನೀಡಲಾಗಿದೆ. ಇದಕ್ಕೆ ರೂ. 62,500 ಕೋಟಿ ಅನುದಾನ ಮೀಸಲಿಡಲಾಗಿದೆ.

4) ಯೂರಿಯಾ ರಾಷ್ಟ್ರೀಯ ಹೂಡಿಕೆ ನೀತಿ – 2026

ರಸಗೊಬ್ಬರ (ಯೂರಿಯಾ) ಉತ್ಪಾದನೆಯಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡಲು ಹೊಸ ಹೂಡಿಕೆ ನೀತಿಯನ್ನು (National Investment Policy for Urea) ತರಲಾಗಿದೆ. ಇದರ ಅಡಿಯಲ್ಲಿ ದೇಶದಲ್ಲಿ 9 ಹೊಸ ಯೂರಿಯಾ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುವುದು. ಇದರಿಂದ ಹೆಚ್ಚುವರಿಯಾಗಿ 1 ಕೋಟಿ ಟನ್ ಯೂರಿಯಾ ಉತ್ಪಾದನೆಯಾಗಲಿದ್ದು, ಭಾರತವು ಯೂರಿಯಾ ಆಮದು ಮಾಡಿಕೊಳ್ಳುವುದನ್ನು ಸಂಪೂರ್ಣವಾಗಿ ನಿಲ್ಲಿಸಬಹುದಾಗಿದೆ.

ಇದನ್ನೂ ಓದಿ: ರಷ್ಯಾ ತೈಲ ಖರೀದಿ: ಭಾರತ ಮತ್ತು ಚೀನಾ ವಿರುದ್ಧ ಶೇ. 100 ಸುಂಕ ವಿಧಿಸಲು ಅಮೆರಿಕ ಮುಂದು; ಬಂತು ಹೊಸ ವಿಧೇಯಕ

5) ರೈಲ್ವೆ ಜಾಲದ ನವೀಕರಣ ಮತ್ತು ನಾಲ್ಕನೇ ರೈಲ್ವೆ ಲೈನ್

ರೈಲ್ವೆ ಸಂಪರ್ಕವನ್ನು ಬಲಪಡಿಸಲು ಮತ್ತು ಸಾರಿಗೆ ವೇಗವನ್ನು ಹೆಚ್ಚಿಸಲು ಹಳಿಗಳ ದ್ವಿಗುಣಗೊಳಿಸುವಿಕೆ (Track Doubling) ಹಾಗೂ ರೈಲ್ವೆ ಜಾಲದ ನವೀಕರಣ ಯೋಜನೆಗಳಿಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಇದರಲ್ಲಿ ಅತ್ಯಂತ ಬ್ಯುಸಿ ಇರುವ ಮಾರ್ಗಗಳಲ್ಲಿ ನಾಲ್ಕನೇ ರೈಲ್ವೆ ಹಳಿ (4th Railway Line) ನಿರ್ಮಾಣ ಯೋಜನೆಯೂ ಸೇರಿದೆ.

ಈ ಎಲ್ಲಾ ಯೋಜನೆಗಳಿಗೆ ಒಟ್ಟಾರೆಯಾಗಿ ರೂ. 2.19 ಲಕ್ಷ ಕೋಟಿಗೂ ಹೆಚ್ಚು ಹಣ ಹೂಡಿಕೆ ಮಾಡಲಾಗುತ್ತಿದ್ದು, ಇದು ದೇಶದ ಆರ್ಥಿಕ ಪ್ರಗತಿಯನ್ನು ಹೆಚ್ಚಿಸುವುದರ ಜೊತೆಗೆ ಲಕ್ಷಾಂತರ ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us