Gas Subsidy: ಪಿಎಂ ಉಜ್ವಲ ಫಲಾನುಭವಿಗಳಿಗೆ 300 ರೂ ಎಲ್​ಪಿಜಿ ಸಬ್ಸಿಡಿ, ಒಂದು ವರ್ಷ ಮುಂದುವರಿಕೆ

Union Cabinet Approves PM Ujjwala Yojana Gas Subsidy, India AI Mission, DA DR Hike: ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 300 ರೂ ಗ್ಯಾಸ್ ಸಬ್ಸಿಡಿ ಇನ್ನೂ ಒಂದು ವರ್ಷ ಮುಂದುವರಿಯಲಿದೆ. ಕೇಂದ್ರ ಸಂಪುಟ ಇದಕ್ಕೆ ಅನುಮೋದನೆ ನೀಡಿದೆ. ಸರ್ಕಾರಿ ಉದ್ಯೋಗಿಗಳು ಮತ್ತು ನಿವೃತ್ತ ನೌಕರರ ಪಿಂಚಣಿಗೆ ಡಿಎ ಮತ್ತು ಡಿಆರ್ ಅನ್ನು ಶೇ. 4ರಷ್ಟು ಹೆಚ್ಚಿಸಲು ಸಂಪುಟ ಅಸ್ತು ಎಂದಿದೆ. ಹಾಗೆಯೇ, ಭಾರತದಲ್ಲಿ ಎಐ ಕಂಪ್ಯೂಟಿಂಗ್ ಪರಿಸರ ನಿರ್ಮಿಸಲು ಅನುಕೂಲವಾಗಲೆಂದು ಐದು ವರ್ಷಗಳಿಗೆ ಇಂಡಿಯಾ ಎಐ ಮಿಷನ್​ಗೆ 10,000 ಕೋಟಿ ರೂಗೂ ಹೆಚ್ಚು ಅನುದಾನಕ್ಕೆ ಸಮ್ಮತಿಸಲಾಗಿದೆ.

Gas Subsidy: ಪಿಎಂ ಉಜ್ವಲ ಫಲಾನುಭವಿಗಳಿಗೆ 300 ರೂ ಎಲ್​ಪಿಜಿ ಸಬ್ಸಿಡಿ, ಒಂದು ವರ್ಷ ಮುಂದುವರಿಕೆ
ಎಲ್​ಪಿಜಿ ಗ್ಯಾಸ್​
Follow us
|

Updated on: Mar 08, 2024 | 10:47 AM

ನವದೆಹಲಿ, ಮಾರ್ಚ್ 8: ಪಿಎಂ ಉಜ್ವಲ ಯೋಜನೆಯ ಗ್ರಾಹಕರಿಗೆ ಇನ್ನೂ ಒಂದು ವರ್ಷ ಎಲ್​ಪಿಜಿ ಗ್ಯಾಸ್​ಗೆ 300 ರೂ ಸಬ್ಸಿಡಿ ಸಿಗಲಿದೆ. 2025ರ ಮಾರ್ಚ್ ತಿಂಗಳವರೆಗೆ ಫಲಾನುಭವಿಗಳಿಗೆ ಸಬ್ಸಿಡಿ ಮುಂದುವರಿಯಲಿದೆ. ಕೇಂದ್ರ ಸಂಪುಟ ಗುರುವಾರ ಉಜ್ವಲ ಯೋಜನೆ (PM Ujjwala Yojana) ಸಬ್ಸಿಡಿ ಮುಂದುವರಿಕೆಗೆ ಅನುಮೋದನೆ ನೀಡಿದೆ. ಈ ಯೋಜನೆ ಅಡಿಯಲ್ಲಿ ಪಿಎಂ ಉಜ್ವಲ ಯೋಜನೆಯ 10.27 ಕೋಟಿ ಫಲಾನುಭವಿಗಳಿಗೆ ಒಂದು ಎಲ್​ಪಿಜಿ ಗ್ಯಾಸ್ ಸಿಲಿಂಡರ್​ಗೆ 300 ರೂ ಸಬ್ಸಿಡಿ ಸಿಗುತ್ತದೆ. ಒಂದು ವರ್ಷದಲ್ಲಿ 12 ಎಲ್​ಪಿಜಿ ಸಿಲಿಂಡರ್​ಗಳಿಗೆ ಸಬ್ಸಿಡಿ ನೀಡಲಾಗುತ್ತದೆ. 2024-25ರ ಹಣಕಾಸು ವರ್ಷದಲ್ಲಿ ಈ ಸಬ್ಸಿಡಿಗೆ ಸರ್ಕಾರ 12,000 ಕೋಟಿ ರೂ ವ್ಯಯಿಸಲಿದೆ.

ಬಡಮಹಿಳೆಯರಿಗೆ ಸಹಾಯವಾಗಲೆಂದು 2016ರಲ್ಲಿ ಕೇಂದ್ರ ಸರ್ಕಾರ ಈ ಯೋಜನೆ ಆರಂಭಿಸಿದೆ. ಬಡವರು, ಪರಿಶಿಷ್ಟ ಜಾತಿ, ಪಂಗಡ, ಅತಿ ಹಿಂದುಳಿದವರು ಹೀಗೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಬಹಳ ಹಿಂದುಳಿದ ಸಮುದಾಯದ ಮಹಿಳೆಯರು ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಾಗಬಹುದು. ಈವರೆಗೆ 10 ಕೋಟಿಗೂ ಹೆಚ್ಚು ಮಹಿಳೆಯರು ಈ ಯೋಜನೆಗೆ ನೊಂದಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ: ಎಲ್​ಪಿಜಿ ಸಿಲಿಂಡರ್ ಬೆಲೆ ಇಳಿಕೆ: ಮಹಿಳಾ ದಿನಾಚರಣೆ ದಿನ ಪ್ರಧಾನಿ ಮೋದಿ ಗಿಫ್ಟ್

ಶೇ. 4ರಷ್ಟು ತುಟ್ಟಿಭತ್ಯೆ ಹೆಚ್ಚಳ

ಕೇಂದ್ರ ಸಂಪುಟ ನಿನ್ನೆ (ಮಾ. 7) ಪಿಎಂ ಉಜ್ವಲ ಯೋಜನೆಯ ಸಬ್ಸಿಸಿ ಮುಂದುವರಿಕೆ ಅಷ್ಟೇ ಅಲ್ಲದೇ, ತುಟ್ಟಿಭತ್ಯೆ ಶೇ. 4ಕ್ಕೆ ಹೆಚ್ಚಳ ಹಾಗೂ ಇಂಡಿಯಾ ಎಐ ಮಿಷನ್ ಯೋಜನೆಗಳಿಗೂ ಅನುಮೋದನೆ ನೀಡಿದೆ.

ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ. 4ರಷ್ಟು ಡಿಎ ಮತ್ತು ಡಿಆರ್ ಹೆಚ್ಚಳವಾಗಿದೆ. ಇದರೊಂದಿಗೆ ಒಟ್ಟು ತುಟ್ಟಿಭತ್ಯೆ ಶೇ. 50ಕ್ಕೆ ಏರಿಕೆ ಆಗಿದೆ. ಇದರ ಜೊತೆಗೆ ಸರ್ಕಾರಿ ಉದ್ಯೋಗಿಗಳಿಗೆ ಎಚ್​ಆರ್​ಎ ಕೂಡ ಹೆಚ್ಚಳವಾಗಿದೆ.

ಇದನ್ನೂ ಓದಿ: ಮೋದಿ ತಂತ್ರಜ್ಞಾನದ ಅಳವಡಿಕೆಗೆ ಜೈ, ಕೃತಕ ಬುದ್ಧಿಮತ್ತೆ ಉತ್ತೇಜನಕ್ಕೂ ಸೈ: ಅಶ್ವಿನಿ ವೈಷ್ಣವ್

10,371 ಕೋಟಿ ರೂನ ಇಂಡಿಯಾ ಎಐ ಮಿಷನ್

ಭಾರತದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಅಳವಡಿಕೆಗೆ ಉತ್ತೇಜಿಸಲು ಸರ್ಕಾರ ಇಂಡಿಯಾ ಎಐ ಮಿಷನ್ ಆರಂಭಿಸಿದೆ. ಮುಂದಿನ ಐದು ವರ್ಷಕ್ಕೆ 10,371.92 ಕೋಟಿ ರೂ ನಿಯೋಜಿಸಿದೆ. ಭಾರತದಲ್ಲಿ ಎಐ ಕಂಪ್ಯೂಟಿಂಗ್ ಕೆಪಾಸಿಟಿ ಸ್ಥಾಪಿಸುವ ಖಾಸಗಿ ಕಂಪನಿಗಳಿಗೆ ಸರ್ಕಾರದಿಂದ ಸಹಾಯಧನ ಸಿಗುತ್ತದೆ. ಎಐ ಸ್ಟಾರ್ಟಪ್​ಗಳಿಗೂ ಈ ಯೋಜನೆಯಿಂದ ಸಹಾಯ ಸಿಗುತ್ತದೆ. ಒಟ್ಟಾರೆ ಬೃಹತ್ ಕಂಪ್ಯೂಟಿಂಗ್ ಸೌಕರ್ಯ ನಿರ್ಮಿಸಲು ಈ ನಿಧಿಯನ್ನು ಬಳಸಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್