AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Green energy corridor: 12 ಸಾವಿರ ಕೋಟಿ ರೂಪಾಯಿಯ ಗ್ರೀನ್ ಎನರ್ಜಿ ಕಾರಿಡಾರ್​ಗೆ ಕೇಂದ್ರ ಸಂಪುಟದ ಅನುಮೋದನೆ

ಕೇಂದ್ರ ಸಚಿವ ಸಂಪುಟವು 12 ಸಾವಿರ ಕೋಟಿ ರೂಪಾಯಿಯ ಗ್ರೀನ್ ಎನರ್ಜಿ ಕಾರಿಡಾರ್​ಗೆ ಗುರುವಾರದಂದು ಅನುಮೋದನೆಯನ್ನು ನೀಡಿದೆ.

Green energy corridor: 12 ಸಾವಿರ ಕೋಟಿ ರೂಪಾಯಿಯ ಗ್ರೀನ್ ಎನರ್ಜಿ ಕಾರಿಡಾರ್​ಗೆ ಕೇಂದ್ರ ಸಂಪುಟದ ಅನುಮೋದನೆ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on:Jan 06, 2022 | 5:59 PM

Share

ಕೇಂದ್ರ ಸಚಿವ ಸಂಪುಟವು 12,000 ಕೋಟಿ ರೂಪಾಯಿ ವೆಚ್ಚದಲ್ಲಿ ಅಂತರ ರಾಜ್ಯ ಪ್ರಸರಣ ವ್ಯವಸ್ಥೆಯ ಎರಡನೇ ಹಂತದ ಗ್ರೀನ್ ಎನರ್ಜಿ ಕಾರಿಡಾರ್ ಅನ್ನು ಅನುಮೋದಿಸಿದೆ. ಈ ಯೋಜನೆಯು ದೇಶದಾದ್ಯಂತ 10,750 ಕಿಲೋಮೀಟರ್ ಉದ್ದದ ಸರ್ಕ್ಯೂಟ್ ಟ್ರಾನ್ಸ್‌ಮಿಷನ್ ಲೈನ್‌ಗಳನ್ನು ನಿರ್ಮಿಸುವುತ್ತದೆ ಮತ್ತು 20 GW (ಗಿಗಾವ್ಯಾಟ್) ವಿದ್ಯುತ್ ತೆರವು ಮಾಡಲು ಸಹಾಯ ಮಾಡುತ್ತದೆ. ತಮಿಳುನಾಡು, ಗುಜರಾತ್, ಕೇರಳ, ಕರ್ನಾಟಕ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಏಳು ರಾಜ್ಯಗಳು 2025-26ರವರೆಗೆ ಐದು ವರ್ಷಗಳ ಕಾಲ ಈ ಯೋಜನೆಯಿಂದ ಪ್ರಯೋಜನ ಪಡೆಯುವ ನಿರೀಕ್ಷೆಯಿದೆ.

10,142 ಕೋಟಿ ರೂಪಾಯಿಗಳ ಈ ಹಂತವು ಶೇ 80ರಷ್ಟು ಕೆಲಸ ಪೂರ್ಣಗೊಂಡಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ. ಈ ಯೋಜನೆಯು 2030ರ ವೇಳೆಗೆ 500 GW ನವೀಕರಿಸಬಹುದಾದ (ರಿನೀವಬಲ್) ಇಂಧನವನ್ನು ಉತ್ಪಾದಿಸುವ ಭಾರತದ ಯೋಜನೆಗಳ ನಿರ್ಣಾಯಕ ಅಂಶವಾಗಿದೆ. ಜರ್ಮನ್ ಸರ್ಕಾರಿ ಸ್ವಾಮ್ಯದ ಹೂಡಿಕೆ ಮತ್ತು ಅಭಿವೃದ್ಧಿ ಬ್ಯಾಂಕ್ ಗುಂಪು KfW ಯೋಜನೆಗೆ ಸಾಲಗಳನ್ನು ಒದಗಿಸುತ್ತದೆ. ಇದು ವಿಶ್ವದ ಅತಿದೊಡ್ಡ ರಾಷ್ಟ್ರೀಯ ಅಭಿವೃದ್ಧಿ ಬ್ಯಾಂಕ್ ಆಗಿದೆ.

ನೇಪಾಳವನ್ನು ಸಂಪರ್ಕಿಸುವ ಸೇತುವೆ ನೇಪಾಳದ ಗಡಿಯಲ್ಲಿ ಮಹಾಕಾಳಿ ನದಿಗೆ ಸೇತುವೆ ನಿರ್ಮಾಣಕ್ಕೂ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಉತ್ತರಾಖಂಡದ ಎತ್ತರದ ಧಾರ್ಚುಲಾ ಪ್ರದೇಶದಲ್ಲಿ ನಿರ್ಮಾಣ ಆಗಲಿರುವ ಈ ಸೇತುವೆಯು ಅಂತರಾಷ್ಟ್ರೀಯ ಗಡಿಯಾಗಿ ಕಾರ್ಯ ನಿರ್ವಹಿಸುವ ನದಿಯ ಎರಡೂ ಬದಿಗಳಲ್ಲಿ ವಾಸಿಸುವ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಸದ್ಯಕ್ಕೆ, ಉತ್ತರಾಖಂಡದ ಪಿಥೋರಗಢ ಜಿಲ್ಲೆಯ ಧಾರ್ಚುಲಾ ಪಟ್ಟಣವನ್ನು ನೇಪಾಳದ ಅದೇ ಹೆಸರಿನ ನಗರದೊಂದಿಗೆ ಸಂಪರ್ಕಿಸುವ ಹಳೆಯ ಸೇತುವೆ ಇದೆ.

ಇದನ್ನೂ ಓದಿ: PM MITRA ₹4,445 ಕೋಟಿ ವೆಚ್ಚದಲ್ಲಿ 7 ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸಂಪುಟ ಸಭೆಯಲ್ಲಿ ಒಪ್ಪಿಗೆ

Published On - 5:57 pm, Thu, 6 January 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?