ಎರಡು ಸಾರ್ವಜನಿಕ ಬ್ಯಾಂಕ್‌ಗಳ ಖಾಸಗೀಕರಣದ ಬಗ್ಗೆ ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿಲ್ಲ ಎಂದ ಹಣಕಾಸು ಸಚಿವೆ
ಎರಡು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ಗಳ ಖಾಸಗೀಕರಣದ ಬಗ್ಗೆ ಕೇಂದ್ರ ಸಚಿವ ಸಂಪುಟವು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ.
2021-22ರ ಬಜೆಟ್‌ನಲ್ಲಿ ಸರ್ಕಾರ ಘೋಷಿಸಿದ್ದ ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳ (ಪಿಎಸ್‌ಬಿ) ಖಾಸಗೀಕರಣದ ಬಗ್ಗೆ ಕೇಂದ್ರ ಸಂಪುಟವು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಸಂಸತ್ತಿಗೆ ಮಂಗಳವಾರ ತಿಳಿಸಲಾಗಿದೆ. 2021-22ರ ಹಣಕಾಸು ವರ್ಷದ ಕೇಂದ್ರ ಬಜೆಟ್‌ನಲ್ಲಿ ಎರಡು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ಗಳ ಖಾಸಗೀಕರಣ ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಕಾರ್ಯತಂತ್ರ ಹಿಂತೆಗೆತ ನೀತಿಯನ್ನು ಅನುಮೋದಿಸುವ ಉದ್ದೇಶವನ್ನು ಸರ್ಕಾರ ಘೋಷಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಎರಡು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ಗಳ ಖಾಸಗೀಕರಣದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ಖಾಸಗಿ ಬಂಡವಾಳ, ತಂತ್ರಜ್ಞಾನ ಮತ್ತು ಉತ್ತಮ ಅಭ್ಯಾಸಗಳ ಮೂಲಕ ಸಾರ್ವಜನಿಕ ವಲಯದ ಉದ್ಯಮಗಳ ಬೆಳವಣಿಗೆಯನ್ನು ಸಕ್ರಿಯಗೊಳಿಸುವುದು ನೀತಿಯ ಉದ್ದೇಶ ಒಳಗೊಂಡಿದೆ ಎಂದು ಸಚಿವೆ ಹೇಳಿದ್ದಾರೆ.
“ಹೂಡಿಕೆ ಹಿಂತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಪರಿಗಣನೆಯನ್ನು ಈ ಉದ್ದೇಶಕ್ಕಾಗಿ ಗೊತ್ತುಪಡಿಸಿದ ಸಂಪುಟ ಸಮಿತಿಗೆ/ ಸಂಪುಟಕ್ಕೆ ವಹಿಸಲಾಗಿದೆ. ಸಂಪುಟ ಸಮಿತಿ/ ಸಂಪುಟ ಈ ನಿಟ್ಟಿನಲ್ಲಿ ನಿರ್ಧಾರವನ್ನು ತೆಗೆದುಕೊಂಡಿಲ್ಲ,” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್‌ಗಳ ಖಾಸಗೀಕರಣಕ್ಕೆ ಸಂಬಂಧಿಸಿದ ಮಸೂದೆಯನ್ನು ಡಿಸೆಂಬರ್ 23ರಂದು ಕೊನೆಗೊಳ್ಳುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಪಟ್ಟಿ ಮಾಡಲಾಗಿದೆ.
ಇದನ್ನೂ ಓದಿ: Bank strike: ಸಾರ್ವಜನಿಕ ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ಡಿ. 16, 17ಕ್ಕೆ ದೇಶವ್ಯಾಪಿ ಬ್ಯಾಂಕ್ ಮುಷ್ಕರ