ಎರಡು ಸಾರ್ವಜನಿಕ ಬ್ಯಾಂಕ್​ಗಳ ಖಾಸಗೀಕರಣದ ಬಗ್ಗೆ ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿಲ್ಲ ಎಂದ ಹಣಕಾಸು ಸಚಿವೆ

| Updated By: Srinivas Mata

Updated on: Dec 21, 2021 | 9:12 PM

ಎರಡು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣದ ಬಗ್ಗೆ ಕೇಂದ್ರ ಸಚಿವ ಸಂಪುಟವು ಇನ್ನೂ ತೀರ್ಮಾನ ಮಾಡಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ.

ಎರಡು ಸಾರ್ವಜನಿಕ ಬ್ಯಾಂಕ್​ಗಳ ಖಾಸಗೀಕರಣದ ಬಗ್ಗೆ ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿಲ್ಲ ಎಂದ ಹಣಕಾಸು ಸಚಿವೆ
ಸಾಂದರ್ಭಿಕ ಚಿತ್ರ
Follow us on

2021-22ರ ಬಜೆಟ್‌ನಲ್ಲಿ ಸರ್ಕಾರ ಘೋಷಿಸಿದ್ದ ಎರಡು ಸಾರ್ವಜನಿಕ ವಲಯದ ಬ್ಯಾಂಕ್‌ಗಳ (ಪಿಎಸ್‌ಬಿ) ಖಾಸಗೀಕರಣದ ಬಗ್ಗೆ ಕೇಂದ್ರ ಸಂಪುಟವು ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಸಂಸತ್ತಿಗೆ ಮಂಗಳವಾರ ತಿಳಿಸಲಾಗಿದೆ. 2021-22ರ ಹಣಕಾಸು ವರ್ಷದ ಕೇಂದ್ರ ಬಜೆಟ್‌ನಲ್ಲಿ ಎರಡು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣ ಮತ್ತು ಸಾರ್ವಜನಿಕ ವಲಯದ ಉದ್ಯಮಗಳ ಕಾರ್ಯತಂತ್ರ ಹಿಂತೆಗೆತ ನೀತಿಯನ್ನು ಅನುಮೋದಿಸುವ ಉದ್ದೇಶವನ್ನು ಸರ್ಕಾರ ಘೋಷಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

ಎರಡು ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ಖಾಸಗಿ ಬಂಡವಾಳ, ತಂತ್ರಜ್ಞಾನ ಮತ್ತು ಉತ್ತಮ ಅಭ್ಯಾಸಗಳ ಮೂಲಕ ಸಾರ್ವಜನಿಕ ವಲಯದ ಉದ್ಯಮಗಳ ಬೆಳವಣಿಗೆಯನ್ನು ಸಕ್ರಿಯಗೊಳಿಸುವುದು ನೀತಿಯ ಉದ್ದೇಶ ಒಳಗೊಂಡಿದೆ ಎಂದು ಸಚಿವೆ ಹೇಳಿದ್ದಾರೆ.

“ಹೂಡಿಕೆ ಹಿಂತೆಗೆದುಕೊಳ್ಳುವುದಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಪರಿಗಣನೆಯನ್ನು ಈ ಉದ್ದೇಶಕ್ಕಾಗಿ ಗೊತ್ತುಪಡಿಸಿದ ಸಂಪುಟ ಸಮಿತಿಗೆ/ ಸಂಪುಟಕ್ಕೆ ವಹಿಸಲಾಗಿದೆ. ಸಂಪುಟ ಸಮಿತಿ/ ಸಂಪುಟ ಈ ನಿಟ್ಟಿನಲ್ಲಿ ನಿರ್ಧಾರವನ್ನು ತೆಗೆದುಕೊಂಡಿಲ್ಲ,” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳ ಖಾಸಗೀಕರಣಕ್ಕೆ ಸಂಬಂಧಿಸಿದ ಮಸೂದೆಯನ್ನು ಡಿಸೆಂಬರ್ 23ರಂದು ಕೊನೆಗೊಳ್ಳುವ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಪಟ್ಟಿ ಮಾಡಲಾಗಿದೆ.

ಇದನ್ನೂ ಓದಿ: Bank strike: ಸಾರ್ವಜನಿಕ ಬ್ಯಾಂಕ್​ಗಳ ಖಾಸಗೀಕರಣ ವಿರೋಧಿಸಿ ಡಿ. 16, 17ಕ್ಕೆ ದೇಶವ್ಯಾಪಿ ಬ್ಯಾಂಕ್ ಮುಷ್ಕರ