AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electric Two Wheelers: ಹೊಸ ಎಲೆಕ್ಟ್ರಿಕ್ ಸ್ಕೂಟರ್​ಗಳ ಬಿಡುಗಡೆ ಮಾಡದಂತೆ ಕೇಂದ್ರದಿಂದ ಸೂಚನೆ

ಈಚಿನ ಎಲೆಕ್ಟ್ರಿಕ್ ವಾಹನಗಳ ಬೆಂಕಿ ಅವಘಡದ ಹಿನ್ನೆಲೆಯಲ್ಲಿ ಹೊಸದಾಗಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಬಿಡುಗಡೆ ಮಾಡದಂತೆ ವಾಹನ ತಯಾರಕರಿಗೆ ಕೇಂದ್ರ ಸರ್ಕಾರ ತಿಳಿಸಿದೆ.

Electric Two Wheelers: ಹೊಸ ಎಲೆಕ್ಟ್ರಿಕ್ ಸ್ಕೂಟರ್​ಗಳ ಬಿಡುಗಡೆ ಮಾಡದಂತೆ ಕೇಂದ್ರದಿಂದ ಸೂಚನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Apr 29, 2022 | 12:45 AM

Share

ದೇಶದಾದ್ಯಂತ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳಲ್ಲಿ (Electric Scooter) ಬ್ಯಾಟರಿ-ಸಂಬಂಧಿತ ಬೆಂಕಿ ಹೊತ್ತಿಕೊಂಡ ಘಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಎಲ್ಲ e2W (ಎಲೆಕ್ಟ್ರಿಕ್ ದ್ವಿಚಕ್ರ ವಾಹನ) ಬ್ರ್ಯಾಂಡ್‌ಗಳನ್ನು ಮಾರುಕಟ್ಟೆಯಲ್ಲಿ ಯಾವುದೇ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡದಂತೆ ಕೇಳಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಇತ್ತೀಚೆಗೆ ರಾಜಧಾನಿಯಲ್ಲಿ ಸಭೆಯನ್ನು ನಡೆಸಿದ್ದು, ಇದರಲ್ಲಿ ಸಾರ್ವಜನಿಕ ಕಾಳಜಿಯ ವಿಷಯವಾಗಿ ಪರಿಣಮಿಸಿರುವ ಬ್ಯಾಟರಿ-ಸಂಬಂಧಿತ ಬೆಂಕಿಯ ಘಟನೆ ಹೆಚ್ಚಳವಾಗುತ್ತಿರುವ ಬಗ್ಗೆ ಚರ್ಚಿಸಲಾಯಿತು. e2W ತಯಾರಕರು ಈಗಿರುವ ಮಾದರಿಗಳನ್ನು ಮಾರಾಟ ಮಾಡಲು ಯಾವುದೇ ಸಮಸ್ಯೆ ಇಲ್ಲ. ಆದರೆ ಈ ಬೆಂಕಿಯ ಅವಘಡದ ಕಾರಣವನ್ನು ಮತ್ತಷ್ಟು ತನಿಖೆ ಮಾಡಲು ವಾಹನಗಳನ್ನು ಹಿಂದಕ್ಕೆ ಕರೆಸಿಕೊಳ್ಳಬಹುದು. ಒಕಿನಾವದಿಂದ 3,215 ಸ್ಕೂಟರ್‌ಗಳನ್ನು, ಅತಿ ದೊಡ್ಡ ಸಂಖ್ಯೆಯಲ್ಲಿ ಹಿಂಪಡೆದಿದೆ. ಕಳೆದ ವರ್ಷದಿಂದ ಬೆಂಕಿ-ಸಂಬಂಧಿತ ಘಟನೆಗಳು ಹೆಚ್ಚಾಗಿ ವರದಿ ಆಗಿರುವ ಪ್ಯೂರ್ ಇವಿ, ಓಲಾ ಎಲೆಕ್ಟ್ರಿಕ್ 1,441 ಸ್ಕೂಟರ್‌ಗಳನ್ನು ಹಿಂಪಡೆದಿದೆ.

ಪುಣೆಯಲ್ಲಿ ಬ್ಯಾಟರಿ ಬೆಂಕಿಯ ಏಕಮಾತ್ರ ಘಟನೆ ಸಂಭವಿಸಿದ ನಂತರ ಓಲಾ ಇದನ್ನು ಮಾಡಿದೆ ಎಂದು ಗಮನಿಸಬೇಕು. ಆದರೆ ಒಂದು ಸ್ಕೂಟರ್ ಅಸಮರ್ಪಕವಾಗಿ ಕಾರ್ಯನಿರ್ವಹಿಸಿದರೂ ಸಂಪೂರ್ಣ ಬ್ಯಾಚ್ ಸ್ಕೂಟರ್‌ಗಳನ್ನು ಹಿಂಪಡೆಯಬೇಕು ಎಂಬ ಸರ್ಕಾರದ ಸೂಚನೆಗಳಿಗೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಸ್ಕೂಟರ್‌ಗಳನ್ನು ಸಕಾಲದಲ್ಲಿ ಹಿಂಪಡೆಯಲು ವಿಫಲವಾದರೆ ದಂಡ ವಿಧಿಸುವುದಾಗಿ ಬ್ರ್ಯಾಂಡ್‌ಗಳಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಬೆದರಿಕೆ ಹಾಕಿದ್ದಾರೆ. ಈ ನಿರ್ದೇಶನದ ಅನುಸಾರವಾಗಿ ಬ್ಯಾಟರಿ-ಸಂಬಂಧಿತ ಬೆಂಕಿಯ ಸಮಸ್ಯೆಯನ್ನು ನೋಡದ ಬ್ರ್ಯಾಂಡ್‌ಗಳು ಸಹ ಈ ವರ್ಷ ಯಾವುದೇ ಇ-ಸ್ಕೂಟರ್‌ಗಳನ್ನು ಪ್ರಾರಂಭಿಸುವುದಿಲ್ಲ. ಇಲ್ಲಿಯವರೆಗೆ ಕೇವಲ ಮೌಖಿಕ ಸಲಹೆಯಾಗಿದ್ದಕ್ಕೆ ಬ್ರ್ಯಾಂಡ್‌ಗಳು ಹೇಗೆ ಪ್ರತಿಕ್ರಿಯಿಸುತ್ತವೆ ಎಂಬುದನ್ನು ನೋಡಬೇಕಾಗಿದೆ.

ಸೂಕ್ತ ಪ್ರಾಧಿಕಾರವನ್ನು ಸ್ಥಾಪಿಸಲು ಮತ್ತು ಈ ಘಟನೆಗಳ ಹಿಂದಿನ ಕಾರಣವನ್ನು ಸೂಕ್ಷ್ಮವಾಗಿ ಗಮನಿಸಲು ಸರ್ಕಾರಕ್ಕೆ ಹೆಚ್ಚಿನ ಸಮಯವನ್ನು ಒದಗಿಸಲು ಈ ಕ್ರಮವನ್ನು ಕೈಗೊಳ್ಳಲಾಗಿದೆ. ಆದರೆ ಬ್ರ್ಯಾಂಡ್‌ಗಳು ಈ ಸ್ಕೂಟರ್‌ಗಳ ವೇಗವಾಗಿ, ದೊಡ್ಡ ಮತ್ತು ಹೆಚ್ಚು ಅಪಾಯಕಾರಿ ಆವೃತ್ತಿಗಳನ್ನು ಬಿಡುಗಡೆ ಮಾಡುವುದನ್ನು ತಡೆಯುತ್ತದೆ. ಇದು ಬ್ರ್ಯಾಂಡ್‌ಗಳು ಕಳಪೆ ಉತ್ಪನ್ನಗಳ ಸುಧಾರಿತ ಆವೃತ್ತಿಗಳನ್ನು ಪ್ರಾರಂಭಿಸುವುದನ್ನು ತಡೆಯುತ್ತದೆ. ಭಾರತೀಯ ಮಾರುಕಟ್ಟೆಯಲ್ಲಿ ಪದಾರ್ಪಣೆ ಮಾಡಲು ಕಾಯುತ್ತಿರುವ ಎಲೆಕ್ಟ್ರಿಕಲ್ ವಾಹನಗಳ ಬ್ರ್ಯಾಂಡ್‌ಗಳಿಗೆ ಏನಾಗುತ್ತದೆ ಎಂಬುದನ್ನು ನೋಡಬೇಕಾಗಿದೆ.

ಇದನ್ನೂ ಓದಿ: How To: ನಿಮ್ಮ ಎಲೆಕ್ಟ್ರಿಕ್ ಸ್ಕೂಟರ್​ನ ಸೇಫ್ಟಿಗೆ ಹೀಗೆ ಮಾಡಿ; EV ಬ್ಯಾಟರಿಗಳ ಬಾಳಿಕೆ, ಸುರಕ್ಷೆಗೆ ಇಲ್ಲಿದೆ ಟಿಪ್ಸ್

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ