AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Social Trailblazer: ಯುವಜನರ ನವೋತ್ಸಾಹದಲ್ಲಿ ಭಾರತ ಹೊಸ ಹೆಜ್ಜೆ: ಸೋಷಿಯಲ್ ಟ್ರೇಲ್​ಬ್ಲೇಜರ್ ಕಾರ್ಯಕ್ರಮ ಬಗ್ಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಶ್ಲಾಘನೆ

Union Minister Dharmendra Pradhan Inaugurates Social Trailblazer Event: ಎಲ್​ಐಸಿ ಎಚ್​ಎಫ್​ಎಲ್ ಮತ್ತು ಐಆರ್​ಎಂಎ ಐಸೀಡ್ ಫೌಂಡೇಶನ್ ಜಂಟಿಯಾಗಿ ಆಯೋಜಿಸಿರುವ ಎರಡನೇ ಆವೃತ್ತಿಯ ಸೋಷಿಯಲ್ ಟ್ರೇಲ್​ಬ್ಲೇಜರ್ ಕಾರ್ಯಕ್ರಮವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಉದ್ಘಾಟಿಸಿದ್ದಾರೆ.

Social Trailblazer: ಯುವಜನರ ನವೋತ್ಸಾಹದಲ್ಲಿ ಭಾರತ ಹೊಸ ಹೆಜ್ಜೆ: ಸೋಷಿಯಲ್ ಟ್ರೇಲ್​ಬ್ಲೇಜರ್ ಕಾರ್ಯಕ್ರಮ ಬಗ್ಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಶ್ಲಾಘನೆ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 05, 2023 | 10:49 AM

Share

ನವದೆಹಲಿ: ಯುವ ಶಕ್ತಿಯ ಉದ್ಯಮಶೀಲತಾ ಉತ್ಸಾಹ ಹಾಗೂ ಹೊಸ ಆಲೋಚನೆಗಳಿಂದ ಬಲ ಪಡೆದ ಭಾರತ ಹೊಸ ಹಂತಕ್ಕೆ ಕಾಲಿಡುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Union Education Minister Dharmendra Pradhan) ಅಭಿಪ್ರಾಯಪಟ್ಟಿದ್ದಾರೆ. ಎಲ್​ಐಸಿ ಹೌಸಿಂಗ್ ಫೈನಾನ್ಸ್ ಲಿ ಮತ್ತು ಐಆರ್​ಎಂಎ ಐಸೀಡ್ ಫೌಂಡೇಶನ್ (IRMA iSeed Foundation) ವತಿಯಿಂದ ಆಯೋಜಿಸಲಾಗಿದ್ದ ಎರಡನೇ ಆವೃತ್ತಿಯ ಸೋಷಿಯಲ್ ಟ್ರೇಲ್​ಬ್ಲೇಜರ್ (Social Trailblazer) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಧರ್ಮೇಂದ್ರ ಪ್ರಧಾನ್, ತಳಮಟ್ಟದಲ್ಲಿ ಸಾಮಾಜಿಕ ಉದ್ಯಮಶೀಲತಾ ವ್ಯವಸ್ಥೆಗೆ ಉತ್ತೇಜನ ತುಂಬುವ ಕೆಲಸವಾಗಬೇಕು ಎಂದಿದ್ದಾರೆ.

20 ಸಾಮಾಜಿಕ ಉದ್ದಿಮೆದಾರರನ್ನು ಸೃಷ್ಟಿಸಿ ಸಮಾಧಾನಗೊಳ್ಳಬಾರದು ಎಂದು ಎಲ್​ಐಸಿ ಹೌಸಿಂಗ್ ಫೈನಾನ್ಸ್ ಸಂಸ್ಥೆಗೆ ತಿಳಿಹೇಳಿದ ಕೇಂದ್ರ ಸಚಿವರು, ಸೋಷಿಯಲ್ ಟ್ರೇಲ್​ಬ್ಲೇಜರ್​ನಂತಹ ನವೀನ ಕಾರ್ಯಕ್ರಮಗಳು ಸಮಾಜಕ್ಕೆ ಒಳಿತು ಮಾಡುವ ಯುವಸಮುದಾಯದ ಪ್ರಯತ್ನಗಳಿಗೆ ಶಕ್ತಿ ತುಂಬಬಲ್ಲುವು ಎಂದಿದ್ದಾರೆ. ಹಾಗೆಯೇ, ಎಲ್​ಐಸಿ ಎಚ್​ಎಫ್​ಎಲ್ ಮತ್ತು ಐಆರ್​ಎಂಎ ಈ ಎರಡೂ ಸಂಸ್ಥೆಗಳು ಸರಿಯಾದ ಜಾಗದಲ್ಲಿ ಒಟ್ಟಿಗೆ ಸೇರಿರುವುದನ್ನು ಧರ್ಮೇಂದ್ರ ಪ್ರಧಾನ್ ಶ್ಲಾಘಿಸಿದ್ದಾರೆ.

ಇದನ್ನೂ ಓದಿ: Inspiring: ಕಾಲೇಜು ಶುಲ್ಕ ಕಟ್ಟಲು ಚಹಾ ಮಾರುತ್ತಿದ್ದ ವಿಜಯ್ ಇವತ್ತು ಸಾವಿರ ಕೋಟಿ ರೂ ರಾಯಲ್ ಓಕ್ ಒಡೆಯ

‘ಐಆರ್​ಎಂಎ ಮತ್ತು ಎಲ್​ಐಸಿ ಎಚ್​ಎಫ್​ಎಲ್ ಸಂಸ್ಥೆಗಳು ಸಾಮಾಜಿಕ ಉದ್ದಿಮೆಗಳಿಗೆ ಸಹಾಯವಾಗಲು ಒಟ್ಟಿಗೆ ಪ್ರಯತ್ನಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಯುವ ಶಕ್ತಿಯ ಉದ್ಯಮಶೀಲತಾ ಶಕ್ತಿಯೊಂದಿಗೆ ನವ ಭಾರತ ಹೊಸ ಹಂತಕ್ಕೆ ಪ್ರವೇಶಿಸುತ್ತದೆ. ಇಂಥ ಅನನ್ಯ ಕಾರ್ಯಕ್ರಮಗಳು ಯುವಜನರ ಸಮಾಜಸೇವಾ ಕೈಂಕರ್ಯಕ್ಕೆ ಹೊಸ ಉತ್ಸಾಹ ತುಂಬುತ್ತದೆ’ ಎಂದು ಕೇಂದ್ರ ಶಿಕ್ಷಣ ಸಚಿವರೂ ಆದ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಈ ಕಾರ್ಯಕ್ರಮದಲ್ಲಿ ಇನ್ಸ್​ಟಿಟ್ಯೂಟ್ ಆಫ್ ರೂರಲ್ ಮ್ಯಾನೇಜ್ಮೆಂಟ್ ಶಿಕ್ಷಣ ಸಂಸ್ಥೆಯ ನಿರ್ದೇಶಕ ಉಮಾಕಾಂತ್ ದಾಶ್ ಹಾಗೂ ಎಲ್​ಐಸಿ ಹೌಸಿಂಗ್ ಫೈನಾನ್ಸ್ ಸಂಸ್ಥೆಯ ಸಿಇಒ ಮತ್ತು ಎಂಡಿ ವೈ ವಿಶ್ವನಾಥ್ ಗೌಡ್ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: Jio Bharat: 999 ರೂ ಬೆಲೆಯ ಜಿಯೋ ಭಾರತ್ ಫೋನ್; 10ಕೋಟಿ 2ಜಿ ಗ್ರಾಹಕರ ಸೆಳೆಯುವ ನಿರೀಕ್ಷೆ; ಷೇರುಪೇಟೆಯಲ್ಲಿ ಏರ್​ಟೆಲ್ ತತ್ತರ

ಎಲ್​ಐಸಿ ಎಚ್​ಎಫ್​ಎಲ್ ಮತ್ತು ಐಆರ್​ಎಂಎ ಸಂಸ್ಥೆಗಳು ಒಟ್ಟುಗೂಡಿ ನಡೆಸುತ್ತಿರುವ ಸೋಷಿಯಲ್ ಟ್ರೇಲ್​ಬ್ಲೇಜರ್ ಕಾರ್ಯಕ್ರಮವು ದೇಶದ ಯುವ ಸಮುದಾಯದವರಲ್ಲಿ ಸಾಮಾಜಿಕ ಕಾಳಜಿ ಇರುವ ಉದ್ಯಮಶೀಲತೆಗೆ ಉತ್ತೇಜನ ತುಂಬುವ ಉದ್ದೇಶ ಹೊಂದಿದೆ. ಆರೋಗ್ಯ, ಕಸತ್ಯಾಜ್ಯ ನಿರ್ವಹಣೆ, ಸ್ವಚ್ಛ ಇಂಧನ, ಕೃಷಿ ವ್ಯವಹಾರ, ಶಿಕ್ಷಣ, ಕೌಶಲ್ಯ ಅಭಿವೃದ್ದಿ ಕ್ಷೇತ್ರಗಳಲ್ಲಿ ನವ ಉದ್ದಿಮೆದಾರರನ್ನು ಬೆಳೆಸುವುದು ಈ ಕಾರ್ಯಕ್ರಮದ ಗುರಿ ಎಂದೆನ್ನಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್