AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPI, RuPay: ಶ್ರೀಲಂಕಾ, ಮಾರಿಷಸ್​ನಲ್ಲೂ ಭಾರತದ ಯುಪಿಐ, ರುಪೇ ಕಾರ್ಡ್ ಸೇವೆಗೆ ಚಾಲನೆ

Mauritius and Sri Lanka Gets UPI, RuPay Service: ಭಾರತದ ಯೂನಿಫೈಡ್ ಪೇಮೆಂಟ್ ಇಂಟರ್ಫೇಸ್ ಮತ್ತು ರುಪೇ ಕಾರ್ಡ್ ಈಗ ಬೇರೆ ಬೇರೆ ದೇಶಗಳಲ್ಲಿ ಸೇವೆ ವಿಸ್ತರಿಸುತ್ತಿದೆ. ಮಾರಿಷಸ್ ಮತ್ತು ಶ್ರೀಲಂಕಾ ದೇಶಗಳಿಗೆ ಯುಪಿಐ ಮತ್ತು ರುಪೇ ಕಾರ್ಡ್ ಸೇವೆಗೆ ಇಂದು ಚಾಲನೆ ಕೊಡಲಾಗಿದೆ. ಶ್ರೀಲಂಕಾದ ಲಂಕಾ ಪೇ ಜೊತೆ ಭಾರತದ ಯುಪಿಐ ಅನ್ನು ಜೋಡಿಸಲಾಗಿದೆ. ಮಾರಿಷಸ್ ದೇಶದ ಬ್ಯಾಂಕುಗಳು ರುಪೇ ನೆಟ್ವರ್ಕ್ ಬಳಸಿ ಕಾರ್ಡ್ ಒದಗಿಸಬಹುದು.

UPI, RuPay: ಶ್ರೀಲಂಕಾ, ಮಾರಿಷಸ್​ನಲ್ಲೂ ಭಾರತದ ಯುಪಿಐ, ರುಪೇ ಕಾರ್ಡ್ ಸೇವೆಗೆ ಚಾಲನೆ
ರುಪೇ ಕಾರ್ಡ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 12, 2024 | 11:45 AM

Share

ನವದೆಹಲಿ, ಫೆಬ್ರುವರಿ 12: ಭಾರತದಲ್ಲಿ ಡಿಜಿಟಲ್ ಕ್ರಾಂತಿಗೆ ಒಂದು ಕಾರಣವಾಗಿರುವ ಯುಪಿಐ ಈಗ ಬೇರೆ ಬೇರೆ ದೇಶಗಳಲ್ಲಿ ಬಳಕೆಯಾಗತೊಡಗಿದೆ. ಸಿಂಗಾಪುರದಲ್ಲಿ ಚಲಾವಣೆಯಲ್ಲಿರುವ ಯುಪಿಐ ಸೇವೆ ಈಗ ಶ್ರೀಲಂಕಾ ಮತ್ತು ಮಾರಿಷಸ್ ದೇಶಗಳಲ್ಲೂ ಲಭ್ಯ ಇದೆ. ಇಂದು ಸೋಮವಾರ ಈ ಎರಡು ದೇಶಗಳಲ್ಲಿ ಯುಪಿಐ ಮತ್ತು ರುಪೇ ಕಾರ್ಡ್ (RuPay card) ಸೇವೆ ಚಾಲನೆಗೊಂಡಿದೆ. ಇದರೊಂದಿಗೆ ಆ ದೇಶಗಳಿಗೆ ಪ್ರವಾಸ ಹೋಗುವ ಭಾರತೀಯರಿಗೆ, ಹಾಗೂ ಭಾರತಕ್ಕೆ ಪ್ರವಾಸ ಬರುವ ಆ ದೇಶದ ಜನರಿಗೆ ಹಣಕಾಸು ವಹಿವಾಟು ಮಾಡುವುದು ಸುಲಭವಾಗಲಿದೆ.

ಶ್ರೀಲಂಕಾದಲ್ಲಿ ಡಿಜಿಟಲ್ ವಹಿವಾಟಿಗೆ ಲಂಕಾ ಪೇ (Lanka Pay) ಪ್ಲಾಟ್​ಫಾರ್ಮ್ ಇದೆ. ಈಗ ಯುಪಿಐ ಅನ್ನು ಲಂಕಾ ಪೇ ಜೊತೆ ಜೋಡಿಸಲಾಗಿದೆ. ಇದರೊಂದಿಗೆ ಶ್ರೀಲಂಕಾಗೆ ಹೋಗುವ ಭಾರತೀಯರು ಲಂಕಾ ಪೇ ಆ್ಯಪ್​​ನಲ್ಲಿ ಯುಪಿಐ ಮೂಲಕ ಹಣದ ವಹಿವಾಟು ನಡೆಸಲು ಸಾಧ್ಯವಾಗುತ್ತದೆ.

ಇನ್ನು ರುಪೇ ಕಾರ್ಡ್ ಜಾಗತಿಕವಾಗಿ ಮಾನ್ಯತೆ ಪಡೆಯುತ್ತಿದೆ. ಶ್ರೀಲಂಕಾ ಮತ್ತು ಮಾರಿಷಸ್​ನಲ್ಲೂ ಈಗ ರುಪೇ ಕಾರ್ಡ್ ಬಳಸಿ ವಹಿವಾಟು ನಡೆಸಬಹುದು. ಇದು ಈ ಎರಡು ದೇಶಗಳ ಪ್ರವಾಸೋದ್ಯಮಕ್ಕೂ ಅನುಕೂಲವಾಗಲಿದೆ.

ಇದನ್ನೂ ಓದಿ: ಚೀನಾ ಕಂಪನಿಗಳನ್ನು ಹೀಗೆ ಗುರಿ ಮಾಡಿದರೆ ಸರಬರಾಜುದಾರರು ಭಾರತಕ್ಕೆ ಬರಲು ಭಯಬೀಳಬಹುದು: ಶಿಯೋಮಿ ಕಳವಳ

‘ಮಾರಿಷಸ್​ನಲ್ಲಿ ರುಪೇ ಕಾರ್ಡ್ ಸೇವೆ ವಿಸ್ತರಿಸುವುದರಿಂದ ಅಲ್ಲಿನ ಬ್ಯಾಂಕುಗಳು ರುಪೇ ಚೌಕಟ್ಟಿನಲ್ಲಿ ಕಾರ್ಡ್​ಗಳನ್ನು ನೀಡಬಹುದು. ಇದರಿಂದ ಭಾರತ ಮತ್ತು ಮಾರಿಷಸ್​ನಲ್ಲಿ ಇಂಥ ರುಪೇ ಕಾರ್ಡ್ ಬಳಕೆ ಸಾಧ್ಯವಾಗುತ್ತದೆ,’ ಎಂದು ಸಚಿವಾಲಯ ಅಭಿಪ್ರಾಯಪಟ್ಟಿದೆ.

2022ರ ಫೆಬ್ರುವರಿಯಲ್ಲಿ ಸಿಂಗಾಪುರದ ಪೇನೌ ಜೊತೆ ಯುಪಿಐ ಅನ್ನು ಜೋಡಿಸಲಾಗಿತ್ತು. ಈ ಮೂಲಕ ಸಿಂಗಾಪುರದಲ್ಲಿರುವ ಭಾರತೀಯರು ತಮ್ಮ ತವರೂರಿಗೆ ಹಣ ಕಳುಹಿಸುವುದು ಬಹಳ ಸುಲಭವಾಗಿದೆ.

ಇದನ್ನೂ ಓದಿ: ನೇರ ತೆರಿಗೆ ಸಂಗ್ರಹದಲ್ಲಿ ಶೇ. 20ರಷ್ಟು ಏರಿಕೆ; ಐಟಿಆರ್ ಸಲ್ಲಿಸುವವರ ಸಂಖ್ಯೆ 10 ವರ್ಷದಲ್ಲಿ ದ್ವಿಗುಣ

ಶ್ರೀಲಂಕಾ ಮತ್ತು ಮಾರಿಷಸ್ ದೇಶಗಳ ಜೊತೆ ಭಾರತದ ಬಹುಸ್ತರಗಳ ಸಂಬಂಧ ಹೆಚ್ಚು ಗಾಢವಾಗುತ್ತಿದೆ. ಆರ್ಥಿಕ ಸಂಬಂಧವೂ ಗಟ್ಟಿಯಾಗುತ್ತಿದೆ. ‘ಫಿನ್​ಟೆಕ್ ಕ್ರಿಯಾಶೀಲತೆ ಮತ್ತು ಡಿಜಿಟಲ್ ಪಬ್ಲಿಕ್ ಇನ್​ಫ್ರಾಸ್ಟ್ರಕ್ಚರ್​ನಲ್ಲಿ ಭಾರತ ಮುಂಚೂಣಿಗೆ ಬಂದಿದೆ. ಭಾರತದ ಸಹಭಾಗಿ ದೇಶಗಳ ಜೊತೆ ನಮ್ಮ ಅಭಿವೃದ್ಧಿ ಅನುಭವಗಳನ್ನು ಹಂಚಿಕೊಳ್ಳಲು ಪ್ರಧಾನಿ ಹೆಚ್ಚು ಒತ್ತು ಕೊಡುತ್ತಿದ್ದಾರೆ,’ ಎಂದು ಕೇಂದ್ರ ವಿದೇಶ ವ್ಯವಹಾರಗಳ ಸಚಿವಾಲಯ ಹೇಳಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ