UPI For Feature Phones: ಫೀಚರ್​ ಫೋನ್​ ಯುಪಿಐಗೆ ಚಾಲನೆ ನೀಡಿದ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್

ಫೀಚರ್​ ಫೋನ್​ಗಾಗಿ ಯುಪಿಐ ಅನ್ನು ರಿಸರ್ವ್​ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ ದಾಸ್ ಅವರು ಬಿಡುಗಡೆ ಮಾಡಿದ್ದಾರೆ.

UPI For Feature Phones: ಫೀಚರ್​ ಫೋನ್​ ಯುಪಿಐಗೆ ಚಾಲನೆ ನೀಡಿದ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್
ಆರ್​ಬಿಐ ಗವರ್ನರ್ ಶಕ್ತಿಕಾಂತದಾಸ್ (ಸಂಗ್ರಹ ಚಿತ್ರ)
Follow us
TV9 Web
| Updated By: Srinivas Mata

Updated on: Mar 08, 2022 | 2:27 PM

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (Reserve Bank Of India) ಗವರ್ನರ್ ಶಕ್ತಿಕಾಂತ ದಾಸ್ ಅವರು ಮಾರ್ಚ್ 8ರ ಮಂಗಳವಾರದಂದು ಫೀಚರ್​ ಫೋನ್‌ಗಳಿಗಾಗಿ ಏಕೀಕೃತ ಪಾವತಿಗಳ ಇಂಟರ್​ಫೇಸ್ (UPI) ಹೊರತಂದರು. ಈ ಕ್ರಮವು ಡಿಜಿಟಲ್ ಅಳವಡಿಕೆಯನ್ನು ಹೆಚ್ಚಿಸುತ್ತದೆ ಮತ್ತು ಇದೇ ವೇಳೆ DigiSaathi ಎಂಬ ಡಿಜಿಟಲ್ ಪಾವತಿಗಾಗಿ 24×7 ಸಹಾಯವಾಣಿಯನ್ನು ಪ್ರಾರಂಭಿಸಲಾಯಿತು. “UPI 123Pay” ಗ್ರಾಹಕರಿಗೆ ಸ್ಕ್ಯಾನ್ ಮತ್ತು ಪಾವತಿ ಹೊರತುಪಡಿಸಿ ಬಹುತೇಕ ಎಲ್ಲ ವಹಿವಾಟುಗಳಿಗೆ ಫೀಚರ್ ಫೋನ್‌ಗಳನ್ನು ಬಳಸಲು ಅನುಮತಿಸುತ್ತದೆ. ವಹಿವಾಟುಗಳಿಗೆ ಇಂಟರ್​ನೆಟ್ ಸಂಪರ್ಕದ ಅಗತ್ಯವಿಲ್ಲ. ಈ ಸೌಲಭ್ಯವನ್ನು ಬಳಸಲು ಗ್ರಾಹಕರು ತಮ್ಮ ಬ್ಯಾಂಕ್ ಖಾತೆಯನ್ನು ಫೀಚರ್ ಫೋನ್‌ಗಳೊಂದಿಗೆ ಲಿಂಕ್ ಮಾಡಬೇಕು.

ಸ್ಮಾರ್ಟ್‌ಫೋನ್ ಪಡೆಯಲು ಸಾಧ್ಯವಾಗದ ಗ್ರಾಮೀಣ ಪ್ರದೇಶದ ಜನರು ಯುಪಿಐ ವಹಿವಾಟುಗಳಲ್ಲಿ ಭಾಗವಹಿಸಲು ಫೀಚರ್ ಫೋನ್‌ಗಳಲ್ಲಿನ ಯುಪಿಐ ಸಹಾಯ ಮಾಡುತ್ತದೆ ಎಂದು ದಾಸ್ ಹೇಳಿದರು. “ಪ್ರಸ್ತುತ ದಶಕವು ದೇಶದಲ್ಲಿ ಡಿಜಿಟಲ್ ಪಾವತಿ ಪರಿಸರ ವ್ಯವಸ್ಥೆಯಲ್ಲಿ ಪರಿವರ್ತಕ ಬದಲಾವಣೆಗೆ ಸಾಕ್ಷಿಯಾಗಲಿದೆ,” ಎಂದು ಅವರು ಹೇಳಿದರು. ಡಿಜಿಟಲ್ ವಹಿವಾಟುಗಳನ್ನು ಹೆಚ್ಚು ಮಾಡಲು ಆರ್‌ಬಿಐ ಕಳೆದ ಮೂರು ವರ್ಷಗಳಲ್ಲಿ ಹಲವಾರು ಕ್ರಮಗಳನ್ನು ಪ್ರಕಟಿಸಿದೆ. ಅಲ್ಲದೆ, ಸೈಬರ್ ಸುರಕ್ಷತೆಯ ಮೇಲೆ ಗಮನ ಕೇಂದ್ರೀಕರಿಸುವ ಅಗತ್ಯವನ್ನು ದಾಸ್ ಒತ್ತಿ ಹೇಳಿದರು. ಸೈಬರ್ ಅಪಾಯಗಳನ್ನು ಎದುರಿಸಲು ವ್ಯವಸ್ಥೆಗಳು ಸಿದ್ಧವಾಗಬೇಕಿದೆ ಎಂದು ಹೇಳಿದರು.

ಫೀಚರ್ ಫೋನ್‌ಗಳಲ್ಲಿ UPI ಅನ್ನು ಪರಿಚಯಿಸುವ ಯೋಜನೆಯನ್ನು ಡಿಸೆಂಬರ್‌ನಲ್ಲಿ ರಿಸರ್ವ್ ಬ್ಯಾಂಕ್ ಘೋಷಿಸಿದ ನಂತರ ಈ ಕ್ರಮವು ಬಂದಿದೆ. ಇದು 2016ರಲ್ಲಿ ಪ್ರಾರಂಭವಾದಾಗಿನಿಂದ ಸ್ಮಾರ್ಟ್‌ಫೋನ್‌ಗಳಿಗೆ ಪಾವತಿ ವೇದಿಕೆಯಾಗಿ ಸೀಮಿತವಾಗಿದೆ. ಫೀಚರ್ ಫೋನ್‌ಗಳನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಜನರಲ್ಲಿ ಅದರ ಬಳಕೆಯನ್ನು ಸೀಮಿತಗೊಳಿಸುತ್ತದೆ. 2016ರಲ್ಲಿ UPI ಪಾವತಿ ಪ್ಲಾಟ್‌ಫಾರ್ಮ್ ಅನ್ನು ಪರಿಚಯಿಸಿದಾಗಿನಿಂದ ವಹಿವಾಟುಗಳು ಬಹುಪಟ್ಟು ಬೆಳೆದಿದೆ.

ಇದನ್ನೂ ಓದಿ: ಆರ್​ಬಿಐ ವಿತ್ತೀಯ ನೀತಿ ಪ್ರಕಟ; ನಿಮ್ಮ ಹೋಂ ಲೋನ್, ಕಾರ್ ಲೋನ್, ಬ್ಯಾಂಕ್ ಎಫ್​ಡಿಗಳ ಇಎಂಐ ಮೇಲಾಗುವ ಪರಿಣಾಮಗಳೇನು?

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು