UPI Now in France: ಫ್ರಾನ್ಸ್‌ನಲ್ಲಿ ಯುಪಿಐ ಬಳಕೆಗೆ ಚಾಲನೆ, ಭಾರತೀಯರು UPI ಮೂಲಕ ಪೇ ಮಾಡಬಹುದು!

UPI now in France: ಭಾರತದ ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ತಂತ್ರಜ್ಞಾನದ ದಾಪುಗಾಲು ಇಲ್ಲಿಗೆ ಭೇಟಿ ನೀಡುವ ಅನೇಕ ವಿದೇಶಿ ನಾಯಕರನ್ನು ಬೆರಗುಗೊಳಿಸಿದೆ. ಇತ್ತೀಚೆಗಷ್ಟೇ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರೋನ್‌ ಕೂಡ ಅವರಲ್ಲೊಬ್ಬರು. ಹೌದು, ಇಮಾನ್ಯುಯೆಲ್‌ ಮ್ಯಾಕ್ರಾನ್ ಅವರು ಭಾರತದಿಂದ ವಾಪಸ್ ಹೋದ ಬೆನ್ನಲ್ಲೇ ಫ್ರಾನ್ಸ್​ನಲ್ಲಿ ಭಾರತದ ಯುಪಿಐ ಪಾವತಿ ಶುರುವಾಗಿದೆ. ಪ್ಯಾರೀಸ್​ನಲ್ಲಿಂದು ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಯುಪಿಐ ಪಾವತಿಗೆ ಚಾಲನೆ ಸಿಕ್ಕಿದೆ.

UPI Now in France: ಫ್ರಾನ್ಸ್‌ನಲ್ಲಿ ಯುಪಿಐ ಬಳಕೆಗೆ ಚಾಲನೆ, ಭಾರತೀಯರು UPI ಮೂಲಕ ಪೇ ಮಾಡಬಹುದು!
Follow us
| Updated By: ರಮೇಶ್ ಬಿ. ಜವಳಗೇರಾ

Updated on:Feb 02, 2024 | 10:31 PM

ನವದೆಹಲಿ, (ಫೆಬ್ರವರಿ 02): ಭಾರತದ ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ಪಾವತಿ ವ್ಯವಸ್ಥೆಯು ಇದೀಗ ಫ್ರಾನ್ಸ್‌ಗೂ ತಲುಪಿದೆ. ಇಂದು (ಫೆಬ್ರವರಿ 02) ಪ್ಯಾರೀಸ್​ನಲ್ಲಿ ನಡೆದ ಗಣರಾಜ್ಯೋತ್ಸವ (Republic Day )ಸಮಾರಂಭದಲ್ಲಿ ಯುಪಿಐ ಪಾವತಿಗೆ ಚಾಲನೆ ನೀಡಲಾಗಿದೆ. ಈ ಬಗ್ಗೆ ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯು X ನಲ್ಲಿ ಹಂಚಿಕೊಂಡಿದ್ದು, ಯುಪಿಐ ಪಾವತಿಯನ್ನು ಜಾಗತಿಕಗೊಳಿಸುವ ದೃಷ್ಟಿ ಪ್ರಧಾನಿ ನರೇಂದ್ರ ಮೋದಿಯವರದ್ದಾಗಿದೆ ಎಂದು ಬರೆದುಕೊಂಡಿದೆ.

ಭಾರತೀಯ ಪ್ರವಾಸಿಗರು ಈಗ ಯುಪಿಐ ಬಳಸಿ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಖರೀದಿಸಬಹುದು ಮತ್ತು ಐಫೆಲ್ ಟವರ್‌ಗೆ ಭೇಟಿ ನೀಡಲು ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಎನ್‌ಪಿಸಿಐ ಹೇಳಿದೆ. ಈ ವಹಿವಾಟು ಪ್ರಕ್ರಿಯೆಯು ಯಾವುದೇ ತೊಂದರೆಗಳಿಲ್ಲದೆ ತ್ವರಿತ ಮತ್ತು ಸುಲಭವಾಗಿರುತ್ತದೆ. ಐಫೆಲ್ ಟವರ್‌ಗೆ ಭೇಟಿ ನೀಡುವ ಅಂತರರಾಷ್ಟ್ರೀಯ ಪ್ರವಾಸಿಗರಲ್ಲಿ ಭಾರತೀಯರು 2ನೇ ಸ್ಥಾನದಲ್ಲಿದ್ದಾರೆ . ಹಾಗಾಗಿ ಈ ಸೌಲಭ್ಯವನ್ನು ಜಾರಿ ಮಾಡಲಾಗಿದ್ದು, ಭಾರತೀಯ ಪ್ರವಾಸಿಗರು QR ಕೋಡ್ ಮೂಲಕ ಸ್ಕ್ಯಾನ್ ಮಾಡಿ ಪಾವತಿ ಮಾಡಬಹುದಾಗಿದೆ.

ಇನ್ನು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಭಾರತಕ್ಕೆ ಭೇಟಿ ನೀಡಿ ರಾಜ್‌ಪಥ್‌ನಲ್ಲಿ ನಡೆದ ಪರೇಡ್‌ನಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಆ ಫೋಟೋಗಳನ್ನು ಇಂದು ಫ್ರಾನ್ಸ್‌ನಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪ್ರದರ್ಶಿಸಲಾಯಿತು.

ಲೈರಾ ನೆಟ್‌ವರ್ಕ್‌ನೊಂದಿಗೆ ಒಪ್ಪಂದ

ಭಾರತದಿಂದ UPI ಅನ್ನು ಅಳವಡಿಸಿಕೊಳ್ಳಲು ಫ್ರಾನ್ಸ್ ಬಲವಾದ ಆಸಕ್ತಿಯನ್ನು ತೋರಿಸಿತ್ತು. ಜುಲೈನಲ್ಲಿ ಮೋದಿಯವರು ಫ್ರಾನ್ಸ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ, ಐಫೆಲ್ ಟವರ್‌ನಿಂದ ಪ್ರಾರಂಭವಾಗುವ ಯುಪಿಐ ಪಾವತಿ ಕಾರ್ಯವಿಧಾನವನ್ನು ಬಳಸಲು ಭಾರತ ಮತ್ತು ಫ್ರಾನ್ಸ್ ಒಪ್ಪಿಕೊಂಡಿವೆ. ಫ್ರಾನ್ಸ್‌ನಲ್ಲಿರುವ ಭಾರತೀಯ ಪ್ರವಾಸಿಗರು ಈಗ ರೂಪಾಯಿಗಳಲ್ಲಿ ಪಾವತಿ ಮಾಡಲು ಸಾಧ್ಯವಾಗುತ್ತದೆ ಎಂದು ಮೋದಿ ಹೇಳಿದ್ದರು. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ (ಎನ್‌ಸಿಪಿಐ) ಅಂತಾರಾಷ್ಟ್ರೀಯ ಅಂಗವು ಯುಪಿಐ ಮತ್ತು ರುಪೇ ಸ್ವೀಕರಿಸಲು ಫ್ರಾನ್ಸ್‌ನ ಲೈರಾ ನೆಟ್‌ವರ್ಕ್‌ನೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ.

ಯುಪಿಐ ಬಳಕೆಯನ್ನು ಆಶ್ಚರ್ಯಚಕಿತರಾಗಿ ವೀಕ್ಷಿಸಿದ್ದ ಮ್ಯಾಕ್ರಾನ್

ಜೈಪುರದ ಹವಾ ಮಹಲ್ ಬಳಿಯ ಅಂಗಡಿಯಲ್ಲಿ ಮ್ಯಾಕ್ರಾನ್ ಮತ್ತು ಮೋದಿ ಕುಲ್ಹಾಡ್ ಚಹಾ ಸೇವಿಸಿದ್ದರು. ಮೋದಿ ಅದಕ್ಕೆ ತಮ್ಮ ಫೋನ್‌ನಲ್ಲಿ ಯುಪಿಐ ಬಳಸಿ ಚಹಾಕ್ಕೆ ಹಣ ಪಾವತಿಸಿದ್ದರು. ಮ್ಯಾಕ್ರಾನ್ ಇದನ್ನು ಆಶ್ಚರ್ಯಚಕಿತರಾಗಿ ವೀಕ್ಷಿಸಿದ್ದರು. ಅಂಗಡಿ ಮಾಲೀಕರು ತಮ್ಮ ಫೋನ್‌ನಲ್ಲಿ ಪಾವತಿಯ ದೃಢೀಕರಣ ಪಡೆದಿದ್ದನ್ನು ಸಹ ಮೋದಿ ಮ್ಯಾಕ್ರಾನ್​ಗೆ ತಿಳಿಸಿದ್ದರು.

ವಿಶ್ವಾದ್ಯಂತ ಎಲ್ಲಾ ವಹಿವಾಟುಗಳಲ್ಲಿ 46 ಪ್ರತಿಶತದಷ್ಟು UPI ಮೂಲಕ ಮಾಡಲಾಗುತ್ತದೆ. ಯುಪಿಐ ಪಾವತಿ ಸಂಖ್ಯೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ ಎಂದು ರಾಯಭಾರಿ ಕಚೇರಿ ತಿಳಿಸಿದೆ. ಯುಪಿಐ ಅನ್ನು ಫ್ರಾನ್ಸ್‌ನಲ್ಲಿ ಲೈರಾ ಸಹಯೋಗದೊಂದಿಗೆ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಪ್ರಾರಂಭಿಸಿದೆ. ಎರಡೂ ದೇಶಗಳ ಆನ್‌ಲೈನ್ ಪಾವತಿ ವ್ಯವಸ್ಥೆಗಳ ಹಂಚಿಕೆಗೆ ಸಂಬಂಧಿಸಿದಂತೆ ಭಾರತ ಹಾಗೂ ಫ್ರಾನ್ಸ್‌ ದೇಶಗಳ ಪರಸ್ಪರ ಒಪ್ಪಂದ ಮಾಡಿಕೊಂಡಿದ್ದವು.

Published On - 10:28 pm, Fri, 2 February 24

ತಾಜಾ ಸುದ್ದಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ