ಯುಪಿಐ ವಹಿವಾಟಿನಲ್ಲಿ ಗಮನಾರ್ಹ ಪ್ರಗತಿ: ಆರ್ಥಿಕತೆ ಮುನ್ನಡೆಯ ದ್ಯೋತಕ ಎಂದ ಸಚಿವ ಅಶ್ವಿನಿ ವೈಷ್ಣವ್

ಯುಪಿಐ ವಹಿವಾಟಿನ ಮೊತ್ತವನ್ನು ಡಾಲರ್​ ಮೌಲ್ಯದಲ್ಲಿ ಲೆಕ್ಕಹಾಕಿದರೆ ಸೆಪ್ಟೆಂಬರ್ ತಿಂಗಳಲ್ಲಿ 86.19 ಶತಕೋಟಿ ಡಾಲರ್ ವಹಿವಾಟು ನಡೆದಿದೆ ಎಂದು ಸಚಿವರು ಹೇಳಿದ್ದಾರೆ.

ಯುಪಿಐ ವಹಿವಾಟಿನಲ್ಲಿ ಗಮನಾರ್ಹ ಪ್ರಗತಿ: ಆರ್ಥಿಕತೆ ಮುನ್ನಡೆಯ ದ್ಯೋತಕ ಎಂದ ಸಚಿವ ಅಶ್ವಿನಿ ವೈಷ್ಣವ್
ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್
Follow us
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 04, 2021 | 4:49 PM

ಬೆಂಗಳೂರು: ಏಕೀಕೃತ ಪಾವತಿ ವ್ಯವಸ್ಥೆ – ಯುಪಿಐ (Unified Payments Interface – UPI) ಕಳೆದ ಆಗಸ್ಟ್ ಮತ್ತು ಸೆಪ್ಟೆಂಬರ್​ ತಿಂಗಳಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ. ಈ ಮಾಹಿತಿಯನ್ನು ಸ್ವತಃ ಕೇಂದ್ರದ ಎಲೆಕ್ಟ್ರಾನಿಕ್ಸ್​ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ ಕೂ ಮೂಲಕ ಹಂಚಿಕೊಂಡಿದ್ದಾರೆ.

2021ರ ಜನವರಿಯಿಂದ ಸೆಪ್ಟೆಂಬರ್ ಅವಧಿಯ ಪ್ರತಿ ತಿಂಗಳ ಯುಪಿಐ ವಹಿವಾಟು ಅಂಕಿಅಂಶ ಹಂಚಿಕೊಂಡಿರುವ ಸಚಿವರು, ತಿಂಗಳಿನಿಂದ ತಿಂಗಳಿಗೆ ವಹಿವಾಟಿನ ಗಾತ್ರ ಗಮನಾರ್ಹ ಪ್ರಮಾಣದಲ್ಲಿ ವೃದ್ಧಿಯಾಗಿರುವುದನ್ನು ಎತ್ತಿತೋರಿಸಿದ್ದಾರೆ. ಜನವರಿ 2021ರಲ್ಲಿ ₹ 4,31,181 ಕೋಟಿ (₹ 4.31 ಲಕ್ಷ ಕೋಟಿ) ಮೊತ್ತದ ವಹಿವಾಟು ಯುಪಿಐ ಮೂಲಕ ನಡೆದಿದ್ದರೆ, ಸೆಪ್ಟೆಂಬರ್​ ತಿಂಗಳಲ್ಲಿ ಈ ಮೊತ್ತವು ₹ 6,54,351 ಕೋಟಿಗೆ (₹ 6.54 ಲಕ್ಷ ಕೋಟಿ) ಮುಟ್ಟಿದೆ.

ಅಮೆರಿಕ ಡಾಲರ್​ ಎದುರಿನ ಭಾರತೀಯ ರೂಪಾಯಿ ಮೌಲ್ಯದ ಲೆಕ್ಕಾಚಾರದಲ್ಲಿ ಕಳೆದ ಆಗಸ್ಟ್​ನಲ್ಲಿ ನಡೆದಿರುವ ಯುಪಿಐ ವಹಿವಾಟಿನ ಮೊತ್ತ 86.19 ಶತಕೋಟಿ ಡಾಲರ್. ಸೆಪ್ಟೆಂಬರ್ ತಿಂಗಳಲ್ಲಿ ಇದು 88.25 ಶತಕೋಟಿ ಡಾಲರ್​ಗೆ ಮುಟ್ಟಿದೆ.

ದೇಶದ ಆರ್ಥಿಕತೆಯನ್ನು ಬೃಹತ್ ಗಾತ್ರದಲ್ಲಿ ವಿಸ್ತರಿಸುವ ಕನಸು ಹಂಚಿಕೊಂಡಿದ್ದ ಪ್ರಧಾನಿ ನರೇಂದ್ರ ಮೋದಿ 5 ಲಕ್ಷ ಕೋಟಿ ಡಾಲರ್ (5 ಟ್ರಿಲಿಯನ್ ಡಾಲರ್) ಆರ್ಥಿಕತೆಯ ಬಗ್ಗೆ ಪ್ರಸ್ತಾಪಿಸಿದ್ದರು. ಈ ಕನಸು ಸಾಕಾರಗೊಳ್ಳಲು ಭಾರತದ ಆರ್ಥಿಕತೆಯು ಪ್ರತಿವರ್ಷ 1 ಲಕ್ಷ ಕೋಟಿ ಡಾಲರ್​ನಷ್ಟು ಬೆಳೆಯಬೇಕು ಎಂದು ಸಲಹೆ ಮಾಡಿದ್ದರು.

ಅಶ್ವನಿ ವೈಷ್ಣವ್ ಸಹ ತಾವು ಮಾಡಿರುವ ಕೂನಲ್ಲಿ ಈ ವಿಷಯ ಪ್ರಸ್ತಾಪಿಸಿದ್ದಾರೆ. #UPIChalega ಹ್ಯಾಷ್​ಟ್ಯಾಗ್​ನೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ‘ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಭಾರತದ ಯುಪಿಐ ವಹಿವಾಟು ಗಾತ್ರವು ಪ್ರತಿವರ್ಷ 1 ಲಕ್ಷ ಕೋಟಿ ಡಾಲರ್ ಆರ್ಥಿಕ ಪ್ರಗತಿ ಸಾಧಿಸಲು ಅಗತ್ಯ ವೇಗ ಸಿಗುತ್ತಿರುವ ದ್ಯೋತಕ’ ಎಂದು ವಿವರಿಸಿದ್ದಾರೆ.

ಭೀಮ್, ಫೋನ್ ಪೇ, ಗೂಗಲ್ ಪೇ, ಪೇಟಿಎಂ ಆ್ಯಪ್​ಗಳನ್ನು ಬಳಸಿ ಯುಪಿಐ ಮೂಲಕ ಹಣ ವರ್ಗಾಯಿಸಲು ಸಾಧ್ಯವಿದೆ. ಅಂಗಡಿಗಳ ಮುಂದೆ ಪ್ರದರ್ಶಿಸಿರುವ ಕ್ಯುಆರ್​ ಕೋಡ್​ಗಳು ಸಹ ಯುಪಿಐ ತಂತ್ರಜ್ಞಾನ ಆಧರಿಸಿಯೇ ಕೆಲಸ ಮಾಡುತ್ತವೆ.

(UPI Transactions Improved in Last August September Union IT Minister Ashwini Vaishnaw Says its Indication of Growing Economy)

ಇದನ್ನೂ ಓದಿ: Offline UPI: ಇಂಟರ್ನೆಟ್ ಕನೆಕ್ಷನ್ ಇಲ್ಲದೆಯೂ ಯುಪಿಐ ಮೂಲಕ ಹಣ ಕಳುಹಿಸುವ ಟ್ರಿಕ್ ನಿಮಗೆ ಗೊತ್ತೇ?

ಇದನ್ನೂ ಓದಿ: UPI Autopay: ಯುಪಿಐ ಆಟೋ ಪೇ ಬಗ್ಗೆ ಇಲ್ಲಿದೆ ಹಂತ ಹಂತವಾದ ಮಾಹಿತಿ

Published On - 4:36 pm, Mon, 4 October 21

ತಾಜಾ ಸುದ್ದಿ
ಉತ್ತರ ಕನ್ನಡ: ಗುಡ್ಡ ಕುಸಿತದಲ್ಲಿ ಸಂಬಂಧಿಕರನ್ನ ಕಳೆದುಕೊಂಡು ಮಹಿಳೆಯ ಗೋಳಾಟ
ಉತ್ತರ ಕನ್ನಡ: ಗುಡ್ಡ ಕುಸಿತದಲ್ಲಿ ಸಂಬಂಧಿಕರನ್ನ ಕಳೆದುಕೊಂಡು ಮಹಿಳೆಯ ಗೋಳಾಟ
ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಮಿಲಿಟರಿ: ಮಣ್ಣು ತೆರವು ಕಾರ್ಯಾಚರಣೆ ಶುರು
ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಮಿಲಿಟರಿ: ಮಣ್ಣು ತೆರವು ಕಾರ್ಯಾಚರಣೆ ಶುರು
ನೀರಿನಲ್ಲಿ ಈಜಿಕೊಂಡು ಹೋಗಿ ಗ್ರಾಮಗಳಿಗೆ ಬೆಳಕು ನೀಡಿದ ಪವರ್ ಮ್ಯಾನ್
ನೀರಿನಲ್ಲಿ ಈಜಿಕೊಂಡು ಹೋಗಿ ಗ್ರಾಮಗಳಿಗೆ ಬೆಳಕು ನೀಡಿದ ಪವರ್ ಮ್ಯಾನ್
ನಟಿಯರ ಕ್ರಿಕೆಟ್: ರೋಷಾವೇಷದಲ್ಲಿ ಬ್ಯಾಟ್ ಬೀಸಿದ ಸಪ್ತಮಿ ಗೌಡ
ನಟಿಯರ ಕ್ರಿಕೆಟ್: ರೋಷಾವೇಷದಲ್ಲಿ ಬ್ಯಾಟ್ ಬೀಸಿದ ಸಪ್ತಮಿ ಗೌಡ
ಕನ್ನಡಿಗರ ಉದ್ಯೋಗ ಮೀಸಲಾತಿಗೆ ವಿರೋಧಿಸಿದ ಕಿರಣ್ ಮಜುಂದಾರ್ ಸಂಸ್ಥೆಗೆ ಮಸಿ
ಕನ್ನಡಿಗರ ಉದ್ಯೋಗ ಮೀಸಲಾತಿಗೆ ವಿರೋಧಿಸಿದ ಕಿರಣ್ ಮಜುಂದಾರ್ ಸಂಸ್ಥೆಗೆ ಮಸಿ
ತಮಿಳುನಾಡಿನೊಂದಿಗಿನ ನೀರು ಸಂಘರ್ಷಕ್ಕೆ 1 ವರ್ಷ ವಿರಾಮ: ಕುಮಾರಸ್ವಾಮಿ
ತಮಿಳುನಾಡಿನೊಂದಿಗಿನ ನೀರು ಸಂಘರ್ಷಕ್ಕೆ 1 ವರ್ಷ ವಿರಾಮ: ಕುಮಾರಸ್ವಾಮಿ
ಮಿಲಿಟರಿ ಬರುವ ಕಾಲ ಬರುತ್ತೆ, ಕರೆದುಕೊಂಡು ಬರೋಣ: ಹೆಚ್​ಡಿಕೆ ಎಚ್ಚರಿಕೆ
ಮಿಲಿಟರಿ ಬರುವ ಕಾಲ ಬರುತ್ತೆ, ಕರೆದುಕೊಂಡು ಬರೋಣ: ಹೆಚ್​ಡಿಕೆ ಎಚ್ಚರಿಕೆ
ಪ್ರತಿ ಭಾನುವಾರ ಫ್ಯಾಮಿಲಿ ಬದಲು ಫ್ಯಾನ್ಸ್​ಗೆ ಸಮಯ ಮೀಸಲು: ಧ್ರುವ ಸರ್ಜಾ
ಪ್ರತಿ ಭಾನುವಾರ ಫ್ಯಾಮಿಲಿ ಬದಲು ಫ್ಯಾನ್ಸ್​ಗೆ ಸಮಯ ಮೀಸಲು: ಧ್ರುವ ಸರ್ಜಾ
ತಮಿಳುನಾಡಿನ ನೀರಿನ ದಾಹ ತಣಿಸಿದ ಕಾವೇರಿ, ಎಷ್ಟು ಹರಿಯುತ್ತಿದೆ ಎಂದು ನೋಡಿ
ತಮಿಳುನಾಡಿನ ನೀರಿನ ದಾಹ ತಣಿಸಿದ ಕಾವೇರಿ, ಎಷ್ಟು ಹರಿಯುತ್ತಿದೆ ಎಂದು ನೋಡಿ
ವಿಡಿಯೋ: ದರ್ಶನ್ ಪ್ರಕರಣದ ಬಗ್ಗೆ ಕೊನೆಗೂ ಮಾತನಾಡಿದ ನಟ ಧ್ರುವ ಸರ್ಜಾ
ವಿಡಿಯೋ: ದರ್ಶನ್ ಪ್ರಕರಣದ ಬಗ್ಗೆ ಕೊನೆಗೂ ಮಾತನಾಡಿದ ನಟ ಧ್ರುವ ಸರ್ಜಾ