ಅದಾನಿ ಸೇರಿ 8 ಮಂದಿ ವಿರುದ್ಧ ಅಮೆರಿಕದಲ್ಲಿ ವಂಚನೆ ಆರೋಪ ದಾಖಲು; ಗೌತಮ್, ಸಾಗರ್ ಅದಾನಿ ವಿರುದ್ಧ ಅರೆಸ್ಟ್ ವಾರಂಟ್

Gautam Adani face another big setback: ಗೌತಮ್ ಅದಾನಿ, ಸಾಗರ್ ಅದಾನಿ, ಅಜುರೆ ಪವರ್​ನ ಮಾಜಿ ಎಕ್ಸಿಕ್ಯೂಟಿವ್ ಸಿರಿಲ್ ಕೆಬನೆಸ್ ಸೇರಿ 8 ಮಂದಿ ವಿರುದ್ಧ ಅಮೆರಿಕ ಕೋರ್ಟ್​ನಲ್ಲಿ ವಂಚನೆಯ ಆರೋಪ ದಾಖಲಾಗಿದೆ. ಗೌತಮ್ ಅದಾನಿ, ಸಾಗರ್ ಅದಾನಿ ವಿರುದ್ಧ ನ್ಯೂಯಾರ್ಕ್ ಈಸ್ಟರ್ನ್ ಡಿಸ್ಟ್ರಿಕ್ಟ್ ಕೋರ್ಟ್​ನಿಂದ ಅರೆಸ್ಟ್ ವಾರಂಟ್ ಹೊರಡಿಸಲಾಗಿರುವುದು ತಿಳಿದುಬಂದಿದೆ. ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿ ಗುತ್ತಿಗೆ ಪಡೆದ ಆರೋಪ ಈ 8 ಮಂದಿ ವಿರುದ್ಧ ಕೇಳಿಬಂದಿದೆ.

ಅದಾನಿ ಸೇರಿ 8 ಮಂದಿ ವಿರುದ್ಧ ಅಮೆರಿಕದಲ್ಲಿ ವಂಚನೆ ಆರೋಪ ದಾಖಲು; ಗೌತಮ್, ಸಾಗರ್ ಅದಾನಿ ವಿರುದ್ಧ ಅರೆಸ್ಟ್ ವಾರಂಟ್
ಗೌತಮ್ ಅದಾನಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 21, 2024 | 11:19 AM

ನ್ಯೂಯಾರ್ಕ್, ನವೆಂಬರ್ 21: ಅದಾನಿ ಗ್ರೂಪ್​ಗೆ ಹಿಂಡನ್ಬರ್ಗ್ ಬಳಿಕ ಮತ್ತೊಂದು ಗಂಡಂತಾರ ಎದುರಾಗಿದೆ. ಗೌತಮ್ ಅದಾನಿ ಸೇರಿದಂತೆ ಎಂಟು ಮಂದಿ ವಿರುದ್ಧ ಅಮೆರಿಕದಲ್ಲಿ ವಂಚನೆಯ ಆರೋಪಗಳು ದಾಖಲಾಗಿವೆ. ಸೌರಶಕ್ತಿ ಗುತ್ತಿಗೆಗಳನ್ನು (solar energy contract) ಪಡೆಯಲು ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದ ಆರೋಪ ಪ್ರಮುಖವಾಗಿ ಕೇಳಿಬಂದಿದೆ. ಕೆನಡಾದ ಪೆನ್ಷನ್ ಫಂಡ್ ಆದ ಸಿಡಿಪಿಕ್ಯೂನ ಮಾಜಿ ಎಂಡಿ, ಹಾಗು ಅಜುರೆ ಪವರ್ ಸಂಸ್ಥೆಯ ಮಾಜಿ ಎಕ್ಸಿಕ್ಯೂಟಿವ್ ಆದ ಸೈರಿಲ್ ಕೆಬನೆಸ್ ಅವರೂ ಆರೋಪಿತರಲ್ಲಿ ಸೇರಿದ್ದಾರೆ. ಗೌತಮ್ ಅದಾನಿ, ಸೈರಿಲ್ ಕೆಬನೆಸ್ ಅವರಲ್ಲದೆ, ಸಾಗರ್ ಅದಾನಿ, ವಿನೀತ್ ಜೈನ್, ರಂಜಿತ್ ಗುಪ್ತ, ಸೌರಭ್ ಅಗರ್ವಾಲ್, ದೀಪಕ್ ಮಲ್ಹೋತ್ರಾ, ರೂಪೇಶ್ ಅಗರ್ವಾಲ್ ಅವರು ಈ ಪ್ರಕರಣದಲ್ಲಿ ತಳುಕುಹಾಕಿಕೊಂಡಿರುವ ಇತರ ವ್ಯಕ್ತಿಗಳು.

ಗೌತಮ್ ಅದಾನಿ ವಿರುದ್ಧ ಅರೆಸ್ಟ್ ವಾರಂಟ್

ಅಮೆರಿಕದ ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಎಸ್​ಇಸಿ ನ್ಯೂಯಾರ್ಕ್​ನ ಡಿಸ್ಟ್ರಿಕ್ಟ್ ಕೋರ್ಟ್​ನಲ್ಲಿ ಗೌತಮ್ ಅದಾನಿ, ಸಾಗರ್ ಅದಾನಿ ಮತ್ತು ಸಿರಿಲ್ ಕೆಬನೆಸ್ ವಿರುದ್ಧ ಸಿವಿಲ್ ಚಾರ್ಜ್ ಹಾಕಿದೆ. ಗೌತಮ್ ಅದಾನಿ ಮತ್ತು ಸಾಗರ್ ಅದಾನಿ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಲಾಗಿರುವುದು ರಾಯ್ಟರ್ಸ್ ಸುದ್ದಿಸಂಸ್ಥೆಯ ವರದಿಯಿಂದ ತಿಳಿದುಬಂದಿದೆ.

ಸೋಲಾರ್ ಎನರ್ಜಿ ಗುತ್ತಿಗೆ ಪಡೆಯಲು ಲಂಚ ನೀಡಿದ ಆರೋಪ

ಅದಾನಿ ಗ್ರೀನ್ ಎನರ್ಜಿ ಮತ್ತು ಅಜುರೆ ಪವರ್ ಸಂಸ್ಥೆಗಳು ಭಾರತದಲ್ಲಿ ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ದರದಲ್ಲಿ ಸೌರಶಕ್ತಿ ಗುತ್ತಿಗೆಗಳನ್ನು ಪಡೆಯಲು ಭಾರತೀಯ ಅಧಿಕಾರಿಗಳಿಗೆ 250 ಮಿಲಿಯನ್ ಡಾಲರ್​ಗೂ ಅಧಿಕ ಮೊತ್ತದಷ್ಟು ಲಂಚ ನೀಡಲಾಗಿದೆ ಎಂಬುದು ಆರೋಪ. 2020-24ರ ಅವಧಿಯಲ್ಲಿ ಲಂಚಗಳನ್ನು ನೀಡಿದ ಅಥವಾ ನೀಡಲು ಯೋಜಿಸಿದ ಘಟನೆಗಳು ನಡೆದಿವೆ ಎಂದು ಹೇಳಲಾಗಿದೆ.

ಇದನ್ನೂ ಓದಿ: 24 ಗಂಟೆಯಲ್ಲಿ 5 ಲಕ್ಷಕ್ಕೂ ಅಧಿಕ ಜನರಿಂದ ವಿಮಾನ ಪ್ರಯಾಣ; ಭಾರತದಲ್ಲಿ ಹೊಸ ದಾಖಲೆ

ಆದರೆ, ಅಮೆರಿಕದಲ್ಲಿ ಪ್ರಕರಣ ದಾಖಲು ಇನ್ನೊಂದು ಪ್ರಮುಖ ಕಾರಣ ಇದೆ. ಅದಾನಿ ಗ್ರೀನ್ ಎನರ್ಜಿ ಸಂಸ್ಥೆ ಅಮೆರಿಕದ ಹೂಡಿಕೆದಾರರಿಂದ 3 ಬಿಲಿಯನ್ ಡಾಲರ್​ಗೂ ಅಧಿಕ ಮೊತ್ತದಷ್ಟು ಸಾಲ ಹಾಗೂ ಬಾಂಡ್​ಗಳನ್ನು ಪಡೆದಿದೆ. ಭಾರತದಲ್ಲಿ ಲಂಚ ನೀಡಿ ಗುತ್ತಿಗೆ ಪಡೆದ ವಿಚಾರವನ್ನು ಹೂಡಿಕೆದಾರರಿಂದ ಮುಚ್ಚಿಟ್ಟು ಅವರನ್ನು ವಂಚಿಸಲಾಗಿದೆ. ಹೂಡಿಕೆದಾರರ ಹಿತದೃಷ್ಟಿಯಿಂದ ಈ ಪ್ರಕರಣವನ್ನು ದಾಖಲಿಸಲಾಗಿದೆ ಎಂಬುದು ಪ್ರಾಸಿಕ್ಯೂಟರ್​​ಗಳ ವಾದವಾಗಿದೆ.

ಹಾಗೆಯೇ, ಅಜುರೆ ಪವರ್ ಅಮೆರಿಕದ ಷೇರುಮಾರುಕಟ್ಟೆಯಲ್ಲಿ ಲಿಸ್ಟ್ ಆಗಿರುವ ಕಂಪನಿಯಾಗಿತ್ತು. ಹೀಗಾಗಿ, ಅಜುರೆ ಪವರ್​ನ ಅಂದಿನ ಎಕ್ಸಿಕ್ಯೂಟಿವ್ ಆಗಿದ್ದ ಸಿರಿಲ್ ಕೆಬನೆಸ್ ಅವರ ವಿರುದ್ಧವೂ ಅಮೆರಿಕದಲ್ಲಿ ಪ್ರಾಸಿಕ್ಯೂಶನ್ ಪ್ರಕ್ರಿಯೆ ಚಾಲುಗೊಂಡಿದೆ. ಅದ್ಯ ಅಜುರೆ ಪವರ್ ಅನ್ನು ನ್ಯೂಯಾರ್ಕ್ ಸ್ಟಾಕ್ ಎಕ್ಸ್​ಚೇಂಜ್​ನಿಂದ ಡೀಲಿಸ್ಟ್ ಮಾಡಲಾಗಿದೆ.

ಎಸ್​ಇಸಿಯ ಎನ್​ಫೋರ್ಸ್​ಮೆಂಟ್ ವಿಭಾಗಕ್ಕೆ ಭಾರತ ಮೂಲದವರೇ ಆದ ಸಂಜಯ್ ವಾಧವ ಅವರೇ ಮುಖ್ಯಸ್ತರಾಗಿದ್ದಾರೆ. ವಾಧವಾ ಮಾಡಿರುವ ಆರೋಪದ ಪ್ರಕಾರ, ಅದಾನಿ ಗ್ರೀನ್ ಎನರ್ಜಿ ಸಂಸ್ಥೆ ಬಾಂಡ್​ಗಳ ಮೂಲಕ ಅಮೆರಿಕನ್ ಹೂಡಿಕೆದಾರರಿಂದ ಸಾಲ ಪಡೆದಿತ್ತು. ಈ ವೇಳೆ ತನ್ನ ಸಂಸ್ಥೆಯಲ್ಲಿ ಲಂಚ ವಿರೋಧಿ ಕಾನೂನು ವ್ಯವಸ್ಥೆ ಇರುವುದಾಗಿ ಹೂಡಿಕೆದಾರರಿಗೆ ಸುಳ್ಳು ಹೇಳಿತ್ತು ಎಂದಿದ್ದಾರೆ.

ಇದನ್ನೂ ಓದಿ: ಭಾರತದ ಮೊದಲ ಮೊಬೈಲ್ ಕರೆ ಯಾರು ಮಾಡಿದ್ದು, ಯಾವ ಹ್ಯಾಂಡ್​ಸೆಟ್, ಆಗ ನಿಮಿಷಕ್ಕೆ ಎಷ್ಟು ದುಡ್ಡಿತ್ತು, ಇಲ್ಲಿದೆ ಡೀಟೇಲ್ಸ್

ಬಾಂಡ್ ಯೋಜನೆ ಕೈಬಿಟ್ಟ ಅದಾನಿ

ಅಮೆರಿಕಲ್ಲಿ ಕೋರ್ಟ್​ನಲ್ಲಿ ಗೌತಮ್ ಅದಾನಿ ಮತ್ತಿತರರ ವಿರುದ್ಧ ಆರೋಪಗಳು ದಾಖಲಾದ ಬೆನ್ನಲ್ಲೇ ಅದಾನಿ ಗ್ರೀನ್ ಎನರ್ಜಿ ಸಂಸ್ಥೆ ತನ್ನ 600 ಮಿಲಿಯನ್ ಯುಎಸ್ ಡಾಲರ್ ಬಾಂಡ್​ಗಳ ವಿತರಣೆಯ ಯೋಜನೆಯನ್ನು ಕೈಬಿಟ್ಟಿದೆ. ಈ ಬಾಂಡ್​ಗಳಿಗೆ ಸಾಕಷ್ಟು ಹೂಡಿಕೆದಾರರು ಅರ್ಜಿ ಹಾಕಿದ್ದರು. ಕೋರ್ಟ್​ನಲ್ಲಿ ಪ್ರಕರಣ ಬರುತ್ತಲ್ಲೇ ಸಂಸ್ಥೆ ತನ್ನ ನಡೆಯನ್ನು ಹಿಂಪಡೆದುಕೊಂಡಿದೆ.

ಇದೇ ವೇಳೆ, ಅದಾನಿ ಗ್ರೂಪ್​ನ ಬಹುತೇಕ ಎಲ್ಲಾ ಸ್ಟಾಕ್​ಗಳೂ ಇಂದು ಗುರುವಾರ ನೆಲಕಚ್ಚಿವೆ. ಹಿಂಡನ್ಬರ್ಗ್ ವೇಳೆಯಲ್ಲಿ ಅದಾನಿ ಗ್ರೂಪ್​ಗೆ ಆಗಿದ್ದ ಹಿನ್ನಡೆ ಈಗ ಮರುಕಳಿಸುತ್ತಿರುವಂತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಸಿಎಂ ಇವತ್ತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್​ರನ್ನು ಭೇಟಿಯಾಗಲಿದ್ದಾರೆ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಕೇವಲ 27 ದಿನಗಳಲ್ಲೇ ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಗುಂಪು ಕಟ್ಟಿಕೊಂಡು ಬರಲ್ಲ, ಸಿಂಗಲ್ ಸಿಂಹ ರೀತಿ ಬರ್ತೀನಿ; ಚೈತ್ರಾ ಕುಂದಾಪುರ
ಗುಂಪು ಕಟ್ಟಿಕೊಂಡು ಬರಲ್ಲ, ಸಿಂಗಲ್ ಸಿಂಹ ರೀತಿ ಬರ್ತೀನಿ; ಚೈತ್ರಾ ಕುಂದಾಪುರ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಶುಭವಾಗಲಿದೆ
Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಶುಭವಾಗಲಿದೆ
ಕೆಲಸಕ್ಕೆ ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ!
ಕೆಲಸಕ್ಕೆ ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ!
ಪೋಷಕರೇ ಎಚ್ಚರ! ಆಟವಾಡುವಾಗ ಗೇಟ್ ಬಿದ್ದು ಒಂದೂವರೆ ವರ್ಷದ ಮಗು ಸಾವು
ಪೋಷಕರೇ ಎಚ್ಚರ! ಆಟವಾಡುವಾಗ ಗೇಟ್ ಬಿದ್ದು ಒಂದೂವರೆ ವರ್ಷದ ಮಗು ಸಾವು