AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಈ ಬಾರಿಯೂ ಬಡ್ಡಿದರ ಯಥಾಸ್ಥಿತಿ; ಮುಂದಿನ ವರ್ಷ ದರ ಇಳಿಸುವ ಸುಳಿವು ನೀಡಿದ ಫೆಡರಲ್ ರಿಸರ್ವ್

US fed rates updates: ಅಮೆರಿಕದ ಫೆಡರಲ್ ರಿಸರ್ವ್ ಬ್ಯಾಂಕ್ ಸತತ 3ನೇ ಬಾರಿ ಬಡ್ಡಿದರ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದೆ. ಸದ್ಯ ಅಲ್ಲಿ ಬಡ್ಡಿದರ ಶೇ. 5.25ರಿಂದ ಶೇ. 5.50ರಷ್ಟಿದೆ. ಹಣದುಬ್ಬರ ಕಡಿಮೆ ಆಗುತ್ತಿರುವುದು ಹಾಗೂ ಆರ್ಥಿಕತೆ ಮಂದಗೊಳ್ಳುತ್ತಿರುವುದು ಬಡ್ಡಿದರ ಹೆಚ್ಚಸದೇ ಇಳಿಕೆ ಮಾಡುವ ಆಲೋಚನೆಯಲ್ಲಿ ಸೆಂಟ್ರಲ್ ಬ್ಯಾಂಕ್ ಇದೆ. ಕಳೆದ ವರ್ಷ ಶೇ. 7.11ರಷ್ಟಿದ್ದ ಹಣದುಬ್ಬರ ಈಗ ಶೇ. 3.14ಕ್ಕೆ ಇಳಿದಿದೆ. ಮುಂದಿನ ದಿನಗಳಲ್ಲಿ ಈ ಇಳಿಕೆ ಇನ್ನಷ್ಟು ಮುಂದುವರಿಯಬಹುದು.

ಅಮೆರಿಕದಲ್ಲಿ ಈ ಬಾರಿಯೂ ಬಡ್ಡಿದರ ಯಥಾಸ್ಥಿತಿ; ಮುಂದಿನ ವರ್ಷ ದರ ಇಳಿಸುವ ಸುಳಿವು ನೀಡಿದ ಫೆಡರಲ್ ರಿಸರ್ವ್
ಅಮೆರಿಕ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 14, 2023 | 11:21 AM

Share

ವಾಷಿಂಗ್ಟನ್, ಡಿಸೆಂಬರ್ 14: ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರ ಯಥಾಸ್ಥಿತಿ (US Federal Reserve Rates) ಮುಂದುವರಿಸಲು ನಿರ್ಧರಿಸಿದೆ. ಸತತ ಮೂರನೇ ಬಾರಿ ಅಮೆರಿಕದ ಸೆಂಟ್ರಲ್ ಬ್ಯಾಂಕ್ ಬಡ್ಡಿಹೆಚ್ಚಳ ಮಾಡುತ್ತಿಲ್ಲ. ಸದ್ಯ ಅಮೆರಿಕದಲ್ಲಿ ಬಡ್ಡಿ ದರ ಶೇ. 5.25ರಿಂದ ಶೇ. 5.50 ಶ್ರೇಣಿಯಲ್ಲಿ ಇದೆ. ಫೆಡರಲ್ ರಿಸರ್ವ್ ಬ್ಯಾಂಕ್​ನ ಈ ವರ್ಷದ ಕೊನೆಯ ನೀತಿ ಸಭೆ ಬಳಿಕ ಪತ್ರಿಕಾ ಗೋಷ್ಠಿ ಉದ್ದೇಶಿಸಿ ಮಾತನಾಡಿದ ಛೇರ್ಮನ್ ಜಿರೋಮ್ ಪೋವೆಲ್ ಅವರು ಅಮೆರಿಕದಲ್ಲಿ ಸದ್ಯಕ್ಕೆ ಬಡ್ಡಿದರ ಹೆಚ್ಚಳ ಸಾಧ್ಯತೆ ಇರುವುದಿಲ್ಲ ಎನ್ನುವ ಸುಳಿವು ನೀಡಿದ್ದಾರೆ. ಅಷ್ಟೇ ಅಲ್ಲ, 2024ರಲ್ಲಿ ಬಡ್ಡಿದರವನ್ನು ಮೂರು ಬಾರಿ ಇಳಿಸುವ ಸುಳಿವನ್ನೂ ಅವರು ನೀಡಿದ್ದಾರೆ.

‘ದರ ಇಳಿಕೆ ಮಾಡುವ ಸಾಧ್ಯತೆ ಇದೆ ಎಂದು ಕೆಲ ಆರ್ಥಿಕ ತಜ್ಞರು ಅಂದಾಜಿಸಿದ್ದಾರೆ. ನಮ್ಮ ಪ್ರಕಾರ ಈಗಾಗಲೇ ಸಾಕಷ್ಟು ದರ ಹೆಚ್ಚಳ ಮಾಡಿದ್ದೇವೆ. ದರ ಹೆಚ್ಚಿಸುವ ಯಾವ ಸನ್ನಿವೇಶವೂ ಈಗ ಇಲ್ಲ,’ ಎಂದು ಜಿರೋಮ್ ಪೋವೆಲ್ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿ ಫಾಕ್ಸ್​ಕಾನ್​ನ ಪ್ರಧಾನ ಕಾರ್ಯಕ್ಷೇತ್ರ ಕರ್ನಾಟಕವಾಗುತ್ತಾ? ಹೆಚ್ಚುವರಿ ಹೂಡಿಕೆ ಮಾಡುತ್ತಿದೆ ಐಫೋನ್ ತಯಾರಕ

ಹಣದುಬ್ಬರ ಕಡಿಮೆ ಆಗುತ್ತಾ ಇದೆ. ಜೊತೆಗೆ ಆರ್ಥಿಕತೆ ಮಂದಗತಿಯಲ್ಲಿ ಸಾಗುತ್ತಿರುವಂತಿದೆ. ಈಗ ಬಡ್ಡಿದರವನ್ನು ಇಳಿಸಲು ತಡ ಮಾಡುವುದಿಲ್ಲ ಎಂದು ಹೇಳುವ ಮೂಲಕ ಸೆಂಟ್ರಲ್ ಬ್ಯಾಂಕ್ ಮುಖ್ಯಸ್ಥರು ಸದ್ಯೋಭವಿಷ್ಯದಲ್ಲಿ ಅಮೆರಿಕದಲ್ಲಿ ಬಡ್ಡಿದರ ಇಳಿಕೆ ಆಗುವ ಸುಳಿವು ಕೊಟ್ಟಿದ್ದಾರೆ.

ವರದಿಗಳ ಪ್ರಕಾರ 2024ರಲ್ಲಿ ಅಮೆರಿಕದಲ್ಲಿ ಬಡ್ಡಿ ದರ ಹೆಚ್ಚುವ ಸಾಧ್ಯತೆ ಇಲ್ಲ. ಅಷ್ಟೇ ಅಲ್ಲ, ಮೂರು ಬಾರಿ ದರ ಇಳಿಕೆ ಆಗಬಹುದು. ಒಟ್ಟು 75 ಬೇಸಿಸ್ ಪಾಯಿಂಟ್​ಗಳಷ್ಟು ಬಡ್ಡಿ ದರ ಕಡಿಮೆ ಮಾಡಬಹುದು ಎಂದು ಅಲ್ಲಿಯ ಆರ್ಥಿಕ ತಜ್ಞರು ನಿರೀಕ್ಷಿಸಿದ್ದಾರೆ.

ಇದನ್ನೂ ಓದಿ: NPS vs OPS: ಹಳೆಯ ಪೆನ್ಷನ್ ಸ್ಕೀಮ್​ಗೆ ಮರಳುವ ಯೋಜನೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ; ಏನಿದು ಹೊಸ ಪಿಂಚಣಿ ಸ್ಕೀಮ್?

ಅಮೆರಿಕದಲ್ಲಿ ಕಳೆದ ವರ್ಷ ಹಣದುಬ್ಬರ ಬಹಳ ವಿಪರೀತಕ್ಕೆ ಹೋಗಿತ್ತು. 40 ವರ್ಷದಲ್ಲೇ ಗರಿಷ್ಠ ಮಟ್ಟಕ್ಕೆ ಹೋಗಿತ್ತು. ಈ ಕಾರಣಕ್ಕೆ ಫೆಡರಲ್ ರಿಸರ್ವ್ ತನ್ನ ಬಡ್ಡಿದರವನ್ನು ಸತತವಾಗಿ ಏರಿಸಿತ್ತು. ಇದರಿಂದ, ವರ್ಷದ ಹಿಂದೆ ಶೇ. 7.11ರಷ್ಟಿದ್ದ ಹಣದುಬ್ಬರ ಈಗ ಶೇ. 3.14ಕ್ಕೆ ಬಂದು ನಿಂತಿದೆ. ಶೇ. 2ರ ದರಕ್ಕೆ ಹಣದುಬ್ಬರ ಕಟ್ಟಿಹಾಕುವ ಗುರಿಯನ್ನು ಸೆಂಟ್ರಲ್ ಬ್ಯಾಂಕ್ ಹೊಂದಿದೆ. ಮುಂದಿನ ದಿನಗಳಲ್ಲಿ ಹಣದುಬ್ಬರ ಇನ್ನಷ್ಟು ಇಳಿಕೆ ಆಗುವ ನಿರೀಕ್ಷೆ ಇದೆ. ಈ ಕಾರಣಕ್ಕೆ ಬಡ್ಡಿದರವನ್ನು ಕಡಿಮೆ ಮಾಡುವ ಸಾಧ್ಯತೆ ಇಲ್ಲ ಎಂದು ಬಹಳ ಜನರು ಮೊದಲೇ ನಿರೀಕ್ಷಿಸಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್