AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಥನಾಲ್ ತಯಾರಿಕೆಗೆ ನಮ್ಮ ಜೋಳ ಬಳಸಿ: ಭಾರತಕ್ಕೆ ಬೇಡಿಕೆ ಇಟ್ಟ ಅಮೆರಿಕ

India Us trade talks: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಏರ್ಪಡಲು ಇಂದು ಎರಡೂ ದೇಶಗಳ ತಂಡಗಳಿಂದ ಮಾತುಕತೆ ಪುನಾರಂಭಗೊಂಡಿದೆ. ಈ ಮಧ್ಯೆ ಅಮೆರಿಕವು ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ. ರಷ್ಯಾದಿಂದ ತೈಲ ಆಮದು ಕಡಿಮೆ ಮಾಡಬೇಕು. ಡಿಫೆನ್ಸ್ ಉತ್ಪನ್ನಗಳನ್ನು ಕಡಿಮೆ ಮಾಡಬೇಕು ಎಂದಿದೆ. ಅಮೆರಿಕದಿಂದ ಜೋಳ ಖರೀದಿಸಿ ಎಥನಾಲ್ ತಯಾರಿಸಿ ಎನ್ನುವ ಬೇಡಿಕೆಯನ್ನೂ ಇಡಲಾಗಿದೆ.

ಇಥನಾಲ್ ತಯಾರಿಕೆಗೆ ನಮ್ಮ ಜೋಳ ಬಳಸಿ: ಭಾರತಕ್ಕೆ ಬೇಡಿಕೆ ಇಟ್ಟ ಅಮೆರಿಕ
ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 16, 2025 | 1:00 PM

Share

ನವದೆಹಲಿ, ಸೆಪ್ಟೆಂಬರ್ 16: ಭಾರತದೊಂದಿಗೆ ವ್ಯಾಪಾರ ಒಪ್ಪಂದ (US India trade deal) ಮಾಡಿಕೊಳ್ಳಲು ಅಮೆರಿಕ ಎರಡು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿರುವುದು ತಿಳಿದುಬಂದಿದೆ. ಇವತ್ತು ಎರಡೂ ದೇಶಗಳ ತಂಡಗಳ ನಡುವೆ ಹೊಸ ಸುತ್ತಿನ ಮಾತುಕತೆ ನಡೆಯುತ್ತಿರುವ ಹೊತ್ತಲ್ಲೇ ಅಮೆರಿಕದ ಪ್ರಮುಖ ಬೇಡಿಕೆಗಳ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬರುತ್ತಿವೆ. ರಷ್ಯಾದೊಂದಿಗೆ ಭಾರತ ವ್ಯಾಪಾರ ಮೊಟಕುಗೊಳಿಸಬೇಕು ಎಂಬುದು ಒಂದು ಪ್ರಮುಖ ಬೇಡಿಕೆಯಾಗಿದೆ. ಹಾಗೆಯೇ, ಇಥನಾಲ್ ಉತ್ಪಾದನೆಗೆ ಅಮೆರಿಕದಿಂದ ಜೋಳ ಖರೀದಿಸಬೇಕು ಎಂಬುದು ಮತ್ತೊಂದು ಪ್ರಮುಖ ಬೇಡಿಕೆ. ಅಮೆರಿಕ ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳಲ್ಲಿ ಇವೆರಡು ಸೇರಿವೆ.

ರಷ್ಯಾದಿಂದ ತೈಲ ಖರೀದಿಸಲಾಗುತ್ತಿದೆ ಎನ್ನುವ ಕಾರಣಕ್ಕೆ ಟ್ರಂಪ್ ಅವರು ಭಾರತದ ಮೇಲೆ ಹೆಚ್ಚುವರಿಯಾಗಿ ಶೇ. 25ರಷ್ಟು ಟ್ಯಾರಿಫ್ ಪ್ರಕಟಿಸಿದ್ದಾರೆ. ಇನ್ನು, ಭಾರತ ಹಾಗು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ಏರ್ಪಡದೇ ಇರುವ ಕಾರಣಕ್ಕೆ ಶೇ. 25ರಷ್ಟು ಮೂಲ ತೆರಿಗೆಯನ್ನು ಅಮೆರಿಕ ಹಾಕಿದೆ. ವ್ಯಾಪಾರ ಒಪ್ಪಂದ ಏರ್ಪಡದೇ ಇರಲು ಕೃಷಿ ಹಾಗೂ ಸಂಬಂಧಿತ ವಲಯಗಳೇ ಕಾರಣ ಎಂಬುದು ಗಮನಾರ್ಹ.

ಇದನ್ನೂ ಓದಿ: ನಮ್ಮಿಂದ ಅವರು ಒಂದು ಜೋಳವನ್ನೂ ಕೊಳ್ಳೋದಿಲ್ಲ: ಭಾರತದ ವ್ಯಾಪಾರ ನೀತಿಯನ್ನು ಟೀಕಿಸಿದ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ

ಭಾರತವು ಕೋಟ್ಯಂತರ ಜನರ ಬದುಕಿಗೆ ಆಸರೆಯಾಗಿರುವ ಕೃಷಿ, ಮೀನುಗಾರಿಕೆ, ಡೈರಿ ಸೆಕ್ಟರ್​ಗಳನ್ನು ಶತಾಯಗತಾಯ ರಕ್ಷಿಸಲು ಪಣತೊಟ್ಟಿದೆ. ಅತ್ತ, ಅಮೆರಿಕದಲ್ಲಿ ಈ ಕೃಷಿ ಉತ್ಪನ್ನಗಳು ಹೆಚ್ಚುವರಿಯಾಗಿದ್ದು, ಅವುಗಳನ್ನು ಸಾಗಹಾಕಲು ಭಾರತದಂತಹ ದೊಡ್ಡ ಮಾರುಕಟ್ಟೆ ಬೇಕಾಗಿದೆ. ಹೀಗಾಗಿ, ಈ ಸೆಕ್ಟರ್​ಗಳನ್ನು ಮುಕ್ತಗೊಳಿಸಬೇಕೆಂದು ಅಮೆರಿಕ ಮೊದಲಿಂದಲೂ ಒತ್ತಡ ಹಾಕುತ್ತಲೇ ಇದೆ.

ಭಾರತಕ್ಕೆ ರೈತ ಮತ್ತು ಧರ್ಮ ಸಂಕಟ

ಅಮೆರಿಕದಲ್ಲಿ ಕಾರ್ಪೊರೇಟ್ ಶೈಲಿಯಲ್ಲಿ ಕೃಷಿಗಾರಿಕೆ ನಡೆಯುತ್ತದೆ. ಸರ್ಕಾರ ಕೂಡ ಸಾಕಷ್ಟು ಉತ್ತೇಜನ ನೀಡುತ್ತದೆ. ಅಲ್ಲಿ ಹಸುಗಳಿಗೆ ರಕ್ತ ಇತ್ಯಾದಿ ಮಾಂಸಮಿಶ್ರಿತ ಆಹಾರವನ್ನು ನೀಡಲಾಗುತ್ತದೆ. ಭಾರತದಲ್ಲಿ ಹಾಲನ್ನು ಪರಿಶುದ್ಧ ಆಹಾರವಾಗಿ ಪರಿಗಣಿಸಲಾಗುತ್ತದೆ. ಅಮೆರಿಕದ ಈ ಹಾಲು ಹಾಗೂ ಹಾಲಿನ ಉತ್ಪನ್ನಗಳು ಭಾರತಕ್ಕೆ ಧರ್ಮ ಸಂಕಟ ತರುತ್ತವೆ. ಈ ಕಾರಣಕ್ಕೂ ಭಾರತವು ಅಮೆರಿಕದ ಡೈರಿ ಉತ್ಪನ್ನಗಳಿಗೆ ಅವಕಾಶ ಕೊಡಲು ಹಿಂದೇಟು ಹಾಕುತ್ತಿದೆ.

ಇದನ್ನೂ ಓದಿ: ಇಥನಾಲ್ ಬಂದ ನಂತರ ಸಕ್ಕರೆ ಕಾರ್ಖಾನೆಗಳಿಗೆ ಬಂತು ಜೀವ: ನಿತಿನ್ ಗಡ್ಕರಿ

ಅಮೆರಿಕದ ಕೃಷಿ ಉತ್ಪನ್ನಗಳು ಭಾರತದಕ್ಕಿಂತ ಕಡಿಮೆ ಬೆಲೆಯದ್ದಾಗಿದೆ. ಒಂದು ವೇಳೆ ಭಾರತದ ಮಾರುಕಟ್ಟೆಯಲ್ಲಿ ಅಮೆರಿಕದ ಈ ಉತ್ಪನ್ನಗಳನ್ನು ಮುಕ್ತವಾಗಿ ಬರಲು ಬಿಟ್ಟರೆ ಭಾರತೀಯ ಕೃಷಿಕರು, ರೈತರಿಗೆ ದೊಡ್ಡ ಹೊಡೆತ ಬೀಳುವ ಸಂಭವ ಇದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ