AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Videocon CEO Arrested: ಚಂದಾ ಕೊಚ್ಚರ್‌ ಬೆನ್ನಲ್ಲೇ ವಿಡಿಯೊಕಾನ್ ಸಿಇಒ ವೇಣುಗೋಪಾಲ್ ಧೂತ್ ಬಂಧಿಸಿದ ಸಿಬಿಐ

Venugopal Dhoot Arrested; ವಂಚನೆ ಪ್ರಕರಣಕ್ಕೆ ಸಂಬಂಧಿಸಿ ವಿಡಿಯೊಕಾನ್ ಗ್ರೂಪ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೇಣುಗೋಪಾಲ್ ಧೂತ್ ಅವರನ್ನು ಸಿಬಿಐ ಸೋಮವಾರ ಬಂಧಿಸಿದೆ.

Videocon CEO Arrested: ಚಂದಾ ಕೊಚ್ಚರ್‌ ಬೆನ್ನಲ್ಲೇ ವಿಡಿಯೊಕಾನ್ ಸಿಇಒ ವೇಣುಗೋಪಾಲ್ ಧೂತ್ ಬಂಧಿಸಿದ ಸಿಬಿಐ
ವೇಣುಗೋಪಾಲ್ ಧೂತ್Image Credit source: Twitter
TV9 Web
| Edited By: |

Updated on:Dec 26, 2022 | 7:35 PM

Share

ನವದೆಹಲಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ವಿಡಿಯೊಕಾನ್ ಗ್ರೂಪ್ (Videocon Group) ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೇಣುಗೋಪಾಲ್ ಧೂತ್ (Venugopal Dhoot) ಅವರನ್ನು ಸಿಬಿಐ (CBI) ಸೋಮವಾರ ಬಂಧಿಸಿದೆ. ಐಸಿಐಸಿ ಬ್ಯಾಂಕ್​​ನ (ICICI Bank) ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಮತ್ತು ವ್ಯವಸ್ಥಾಪಕ ನಿರ್ದೆಶಕಿ ಚಂದಾ ಕೊಚ್ಚರ್ (Chanda Kochhar) ಹಾಗೂ ಅವರ ಪತಿ ದೀಪಕ್ ಕೊಚ್ಚರ್​ ಅವರನ್ನು ಬಂಧಿಸಿದ ಕೆಲವೇ ದಿನಗಳಲ್ಲಿ ಧೂತ್ ಬಂಧನವಾಗಿದೆ. 2009ರ ಜೂನ್​ನಿಂದ 2011ರ ಅಕ್ಟೋಬರ್​ ಅವಧಿಯಲ್ಲಿ ವಿಡಿಯೊಕಾನ್ ಗ್ರೂಪ್ ಮತ್ತು ಅದರ ಅಂಗಸಂಸ್ಥೆಗಳಿಗೆ ಐಸಿಐಸಿ ಬ್ಯಾಂಕ್​ನಿಂದ ಅಕ್ರಮವಾಗಿ ಸುಮಾರು 3,000 ಕೋಟಿ ರೂ. ಸಾಲ ನೀಡಲಾಗಿತ್ತು ಎಂಬ ಆರೋಪ ದಾಖಲಾಗಿದ್ದು, ಆ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿ ಚಂದಾ ಕೊಚ್ಚರ್ ಮತ್ತು ಅವರ ಪತಿಯನ್ನು ಶುಕ್ರವಾರ ರಾತ್ರಿ ಬಂಧಿಸಲಾಗಿತ್ತು. ಅವರಿಬ್ಬರೂ ಸದ್ಯ ಸಿಬಿಐ ವಶದಲ್ಲಿದ್ದಾರೆ.

ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಚಂದಾ ಕೊಚ್ಚರ್, ಅವರ ಪತಿ ಮತ್ತು ವಿಡಿಯೋಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿ 2018ರಲ್ಲಿ ತನಿಖೆ ಆರಂಭವಾಗಿತ್ತು. ಅದೇ ಸಂದರ್ಭದಲ್ಲಿ ಚಂದಾ ಕೊಚ್ಚರ್ ಅವರು ತಮ್ಮ ಸ್ಥಾನದಿಂದ ಕೆಳಗಿಳಿದಿದ್ದರು. 2019ರಲ್ಲಿ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಆಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದರು.

ಇದನ್ನೂ ಓದಿ: Chanda Kochhar: ಐಸಿಐಸಿಐ ಬ್ಯಾಂಕ್‌ ಮಾಜಿ ಸಿಇಒ ಚಂದಾ ಕೊಚ್ಚರ್‌ ದಂಪತಿ ಮೂರು ದಿನ ಸಿಬಿಐ ವಶಕ್ಕೆ

2012 ರಲ್ಲಿ ಐಸಿಐಸಿಐ ಬ್ಯಾಂಕ್‌ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ ರೂಪಾಯಿ ಸಾಲ ಪಡೆದಿತ್ತು ಎನ್ನಲಾಗಿದೆ. ಇದಾದ ಕೆಲ ತಿಂಗಳ ನಂತರ ವೇಣುಗೋಪಾಲ್ ಧೂತ್ ಅವರು ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ ಎಂಬ ಆರೋಪವಿದೆ. ಈ ವಿಚಾರವಾಗಿ ತನಿಖೆ ಪ್ರಗತಿಯಲ್ಲಿದೆ. ಸದ್ಯ ಕೊಚ್ಚರ್ ದಂಪತಿ ಸಿಬಿಐ ವಶದಲ್ಲಿದ್ದಾರೆ.

ಚಂದಾ ಕೊಚ್ಚರ್ ಮತ್ತೆ ಮೂರು ದಿನ ಸಿಬಿಐ ವಶಕ್ಕೆ

ಚಂದಾ ಕೊಚ್ಚರ್ ಮತ್ತು ಅವರ ಪತಿಯನ್ನು ಮುಂಬೈ ಸಿಬಿಐ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರನ್ನು ಮತ್ತೆ ಮೂರು ದಿನಗಳ ಕಾಲ ಸಿಬಿಐ ವಶಕ್ಕೊಪ್ಪಿಸಿದೆ. ಈ ಹಿಂದೆ ಶುಕ್ರವಾರ ಅವರನ್ನು ನ್ಯಾಯಾಲಯವು 3 ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿತ್ತು. ಇದೀಗ ದಂಪತಿ ಮತ್ತೆ ಸಿಬಿಐ ವಶವಾಗಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:50 am, Mon, 26 December 22

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್