52ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಪ್ರಮುಖ ನಿರ್ಧಾರಗಳೇನು? ಸಿರಿಧ್ಯಾನದ ಮೇಲಿನ ಸರಕು-ಸೇವೆ ತೆರಿಗೆ ಇಳಿಸಿದ ಕೇಂದ್ರ

ಇಂದು ದೆಹಲಿಯಲ್ಲಿ ನಡೆದ 52ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಸಭೆಯ ನಂತರ ಸರಕು ಮತ್ತು ಸೇವಾ ತೆರಿಗೆ ಮಂಡಳಿಯು ಪುಡಿಮಾಡಿದ ಸಿರಿಧ್ಯಾನದ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್‌ಟಿ) 5% ಕ್ಕೆ ಇಳಿಸಲು ನಿರ್ಧಾರಿಸಲಾಗಿದೆ.

52ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಪ್ರಮುಖ ನಿರ್ಧಾರಗಳೇನು? ಸಿರಿಧ್ಯಾನದ ಮೇಲಿನ ಸರಕು-ಸೇವೆ ತೆರಿಗೆ ಇಳಿಸಿದ ಕೇಂದ್ರ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
| Updated By: ಡಾ. ಭಾಸ್ಕರ ಹೆಗಡೆ

Updated on:Oct 07, 2023 | 5:08 PM

ದೆಹಲಿ, ಅ.7: ಇಂದು ದೆಹಲಿಯಲ್ಲಿ ನಡೆದ 52ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ (52nd GST Council Meeting) ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.  ಸರಕು ಮತ್ತು ಸೇವಾ ತೆರಿಗೆ ಮಂಡಳಿಯು ಪುಡಿಮಾಡಿದ ಸಿರಿಧ್ಯಾನದ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್‌ಟಿ) 5% ಕ್ಕೆ ಇಳಿಸಲು ನಿರ್ಧಾರಿಸಲಾಗಿದೆ. ಈ ಹಿಂದೆ ಇವುಗಳ ಮೇಲೆ ಶೇಕಾಡ 18ರಷ್ಟು ತೆರಿಗೆ ಇತ್ತು. ಇದೀಗ ಶೇಕಾಡ 18 ರಿಂದ ಶೇಕಾಡ 5 ಕ್ಕೆ ಇಳಿಸಲಾಗಿದೆ. ಇದು ಮಾತ್ರವಲ್ಲದೆ, ಶೇಕಾಡ 70 ಅಥವಾ ಅದಕ್ಕಿಂತ ಹೆಚ್ಚಿನ ಸಂಯೋಜನೆ ಹೊಂದಿರುವ ಸಿರಿಧ್ಯಾನಕ್ಕೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ ಮತ್ತು ಸಿರಿಧ್ಯಾನದ ಬ್ರಾಂಡ್ ಉತ್ಪನ್ನಗಳಿಗೆ ಶೇಕಾಡ 5ರಷ್ಟು ಜಿಎಸ್ಟಿ ವಿಧಿಸಲಾಗುತ್ತದೆ ಎಂದು ಈ ಸಭೆಯಲ್ಲಿ ಘೋಷಣೆ ಮಾಡಲಾಗಿದೆ. ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳನ್ನು ಈ ಸಭೆಯ ಅಧ್ಯಕ್ಷತೆ ವಹಿಸಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್​​ ಅವರು ಮಾಧ್ಯಮ ಗೋಷ್ಠಿಯಲ್ಲಿ ಘೋಷಿಸಿದ್ದಾರೆ.

ಜಿಎಸ್‌ಟಿ ಕೌನ್ಸಿಲ್​​ ಕಬ್ಬಿನ ಉಪ-ಉತ್ಪನ್ನವಾದ ಮತ್ತು ಆಲ್ಕೋಹಾಲ್ ಉತ್ಪಾದನೆಗೆ ಕಚ್ಚಾ ವಸ್ತುವಾಗಿ ಬಳಸಲಾಗುವ ಕಾಕಂಬಿ ( molasses) ಮೇಲಿನ ತೆರಿಗೆ ದರವನ್ನು 18 ರಿಂದ ಶೇಕಡಾ 5ಕ್ಕೆ ಇಳಿಸಲಾಗಿದೆ ಎಂದು ಹೇಳಿದೆ. ಜಿಎಸ್‌ಟಿ ಕೌನ್ಸಿಲ್‌ನ ಸದಸ್ಯರಾಗಿರುವ ಛತ್ತೀಸ್‌ಗಢದ ಉಪಮುಖ್ಯಮಂತ್ರಿ ಟಿಎಸ್ ಸಿಂಗ್ ಡಿಯೋ ಅವರು ಕಾಕಂಬಿ ಮೇಲಿನ ತೆರಿಗೆ ವಿನಾಯಿತಿ ಕೈಗಾರಿಕಾ ಕ್ಷೇತ್ರಕ್ಕೆ  ನೀಡಿರುವ ಬಲ ಎಂದು ಹೇಳಿದ್ದಾರೆ.

ಇನ್ನು ದಿನ ಬಳಕೆ ಅಂದರೆ ಕುಡಿಯಲು ಉಪಯೋಗಿಸುವ ಆಲ್ಕೋಹಾಲ್​​ಗಳಿಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ದೆಹಲಿ ಮತ್ತು ಗೋವಾ ರಾಜ್ಯಗಳಲ್ಲಿ ನಡೆಸಲಾಗುವ ಆನ್‌ಲೈನ್ ಗೇಮಿಂಗ್ ಕಂಪನಿಗಳು ಜಿಎಸ್‌ಟಿ ಪಾವತಿಯಲ್ಲಿ ವಂಚನೆ ಮಾಡಿದೆ ಎಂದು ಈ ಸಭೆಯಲ್ಲಿ ಪ್ರಸ್ತಾಪಿಸಲಾಗಿತ್ತು. ಈ ಕಂಪನಿಗಳ ಮೇಲಿನ ಶುಲ್ಕಗಳ (ತೆರಿಗೆ ಬೇಡಿಕೆ ಸೂಚನೆ) ಬಗ್ಗೆ ಹಿಂದಿನಿಂದ ಸಭೆಯಲ್ಲೇ ಚರ್ಚೆ ನಡೆದಿದೆ ಎಂದು ಟಿಎಸ್ ಸಿಂಗ್ ಡಿಯೋ ಹೇಳಿದ್ದಾರೆ.

51ನೇ ಜಿಎಸ್‌ಟಿ ಕೌನ್ಸಿಲ್​ನಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ ಇಂದು ಕೆಲವು ತಿದ್ದುಪಡಿಗಳನ್ನು ಮಾಡಲು ಸಭೆ ನಿರ್ಧರಿಸಿದೆ. ಜಿಎಸ್‌ಟಿ ಕೌನ್ಸಿಲ್​​ನ ಅಧ್ಯಕ್ಷರು ಮತ್ತು ಸದಸ್ಯರ ಅಧಿಕಾರಾವಧಿಯನ್ನು ಈ ಹಿಂದೆ 65 ರಿಂದ 67 ವರ್ಷಕ್ಕೆ ಸಿಮೀತಗೊಳಿಸಲಾಗಿತ್ತು. ಆದರೆ ಇದೀಗ 67ರಿಂದ 70 ವರ್ಷಗಳವರೆಗೆ ಮುಂದುವರಿಸಲಾಗುವುದು ಎಂದು ಈ ಸಭೆಯಲ್ಲಿ ನಿರ್ಧಾರಿಸಲಾಗಿದೆ.

ಇದನ್ನೂ ಓದಿ: ಆನ್ಲೈನ್ ಗೇಮಿಂಗ್, ಜೂಜುಗಳಿಗೆ ಜಿಎಸ್​ಟಿ ವಿಧಿಸಲು ಸಪ್ಲೈ ವ್ಯಾಲ್ಯೂ ಹೇಗೆ? ಇಂದು ಜಿಎಸ್​ಟಿ ಕೌನ್ಸಿಲ್ ಸಭೆಯಲ್ಲಿ ನಿರ್ಧಾರ

52 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯು ದೆಹಲಿಯ ಸುಷ್ಮಾ ಸ್ವರಾಜ್ ಭವನದಲ್ಲಿ ನಡೆಯಿತು. ಸಚಿವೆ ನಿರ್ಮಲ ಸೀತಾರಾಮನ್ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ಕೇಂದ್ರ ಹಣಕಾಸು ರಾಜ್ಯ ಸಚಿವರು, ರಾಜ್ಯಗಳ ಹಣಕಾಸು ಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶದ ಶಾಸಕರು ಮತ್ತು ಕೇಂದ್ರ ಸರ್ಕಾರ ಮತ್ತು ರಾಜ್ಯಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಆಗಸ್ಟ್‌ನಲ್ಲಿ ನಡೆದ 51ನೇ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಆನ್‌ಲೈನ್ ಗೇಮಿಂಗ್, ಕ್ಯಾಸಿನೊ ಮತ್ತು ಕುದುರೆ ರೇಸಿಂಗ್‌ಗಳ ಮೇಲೆ ಶೇಕಡಾ 28ರಷ್ಟು ತೆರಿಗೆಯನ್ನು ವಿಧಿಸಲು ನಿರ್ಧರಿಸಲಾಯಿತು ಮತ್ತು ಅದನ್ನು ಕಾರ್ಯಗತಗೊಳಿಸುವ ವಿಧಾನಗಳ ಬಗ್ಗೆ ಚರ್ಚಿಸಲಾಯಿತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:30 pm, Sat, 7 October 23

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!