Adani Group: ಈಗ ಅದಾನಿ ಸಮೂಹ ಕಂಪನಿಗಳ ಷೇರು ಖರೀದಿಸುವುದು ಉತ್ತಮವೇ? ಚಾಟ್​ ಜಿಪಿಟಿ ಕೊಟ್ಟ ಉತ್ತರ ಹೀಗಿದೆ ನೋಡಿ!

ಒಟ್ಟಾರೆಯಾಗಿ ಕಳೆದ ಎರಡು ದಿನಗಳಲ್ಲಿ ಅದಾನಿ ಸಮೂಹದ ಕಂಪನಿಗಳು ಷೇರು ಮಾರುಕಟ್ಟೆಯಲ್ಲಿ 2.3 ಲಕ್ಷ ಕೋಟಿ ರೂ. ಕಳೆದುಕೊಂಡಿವೆ. ಇದು ಹೂಡಿಕೆದಾರರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ, ಚಾಟ್​​ ಜಿಪಿಟಿ ಬಳಿ ಅದಾನಿ ಸಮೂಹದ ಕಂಪನಿಗಳ ಷೇರು ಖರೀದಿ ಬಗ್ಗೆ ಪ್ರಶ್ನೆ ಕೇಳಲಾಗಿದೆ.

Adani Group: ಈಗ ಅದಾನಿ ಸಮೂಹ ಕಂಪನಿಗಳ ಷೇರು ಖರೀದಿಸುವುದು ಉತ್ತಮವೇ? ಚಾಟ್​ ಜಿಪಿಟಿ ಕೊಟ್ಟ ಉತ್ತರ ಹೀಗಿದೆ ನೋಡಿ!
ಸಾಂದರ್ಭಿಕ ಚಿತ್ರ (ಕೃಪೆ; ರಾಯಿಟರ್ಸ್)Image Credit source: Reuters
Follow us
Ganapathi Sharma
|

Updated on: Jan 27, 2023 | 3:26 PM

ಅಮೆರಿಕದ ಹಿಂಡನ್​ಬರ್ಗ್ ರಿಸರ್ಚ್​ (Hindenburg Research) ಮಾಡಿರುವ ಆರೋಪಗಳಿಂದಾಗಿ ಅದಾನಿ ಸಮೂಹ(Adani Group) ಕಂಪನಿಗಳ ಷೇರು ಮೌಲ್ಯ ಭಾರೀ ಕುಸಿತ ಕಾಣುತ್ತಿದೆ. ಅದಾನಿ ಟೋಟಲ್ ಗ್ಯಾಸ್, ಅದಾನಿ ಟ್ರಾನ್ಸ್​​ಮಿಷನ್, ಅದಾನಿ ಗ್ರೀನ್​ ಎನರ್ಜಿ, ಅದಾನಿ ಪೋರ್ಟ್ಸ್ ಆ್ಯಂಡ್ ಸ್ಪೆಷಲ್ ಎಕನಾಮಿಕ್ ಝೋನ್, ಅದಾನಿ ವಿಲ್ಮರ್, ಅದಾನಿ ಪವರ್, ಅದಾನಿ ಎಂಟರ್​ಪ್ರೈಸಸ್ ಹಾಗೂ ಇತರ ಕಂಪನಿಗಳ ಷೇರು ಮೌಲ್ಯದಲ್ಲಿ ಗಣನೀಯ ಕುಸಿತವಾಗಿದೆ. ಪರಿಸ್ಥಿತಿ ಹೀಗಿರುವಾಗ, ಅದಾನಿ ಸಮೂಹದ ಕಂಪನಿಗಳ ಷೇರುಗಳನ್ನು ಈಗ ಖರೀದಿಸುವುದು ಉತ್ತಮವೇ ಅಥವಾ ಈಗ ಖರೀದಿಸುವುದು ಬೇಡವೇ ಎಂಬ ಪ್ರಶ್ನೆ ಹೂಡಿಕೆದಾರರಲ್ಲಿ ಉದ್ಭವಿಸುವುದು ಸಹಜ. ಹೂಡಿಕೆ ತಜ್ಞರೂ ಇದಕ್ಕೆ ವಿವಿಧ ರೀತಿಯ ಉತ್ತರಗಳನ್ನು ನೀಡುತ್ತಿದ್ದಾರೆ.

ಒಟ್ಟಾರೆಯಾಗಿ ಕಳೆದ ಎರಡು ದಿನಗಳಲ್ಲಿ ಅದಾನಿ ಸಮೂಹದ ಕಂಪನಿಗಳು ಷೇರು ಮಾರುಕಟ್ಟೆಯಲ್ಲಿ 2.3 ಲಕ್ಷ ಕೋಟಿ ರೂ. ಕಳೆದುಕೊಂಡಿವೆ. ಇದು ಹೂಡಿಕೆದಾರರಲ್ಲಿ ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ, ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿರುವ ಕೃತಕ ಬುದ್ಧಿಮತ್ತೆ ಆಧಾರಿತ ಚಾಟ್​ಬಾಟ್ ತಂತ್ರಾಂಶ ಚಾಟ್​​ ಜಿಪಿಟಿ ಬಳಿ ಅದಾನಿ ಸಮೂಹದ ಕಂಪನಿಗಳ ಷೇರು ಖರೀದಿ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಅದಾನಿ ಸಮೂಹದ ಕಂಪನಿಗಳ ಷೇರುಗಳನ್ನು ಈಗ ಖರೀದಿಸುವುದು ಉತ್ತಮವೇ ಎಂದು ಪ್ರಶ್ನಿಸಲಾಗಿದೆ. ಅದಕ್ಕೆ ಚಾಟ್​​ ಜಿಪಿಟಿ ನೀಡಿರುವ ಉತ್ತರ ಇಲ್ಲಿದೆ.

ಇದನ್ನೂ ಓದಿ: ChatGPT: ಏನಿದು ಚಾಟ್​ ಜಿಪಿಟಿ, ಹೇಗೆ ಕೆಲಸ ಮಾಡುತ್ತೆ? ಇತಿ, ಮಿತಿಗಳ ಬಗ್ಗೆ ಇಲ್ಲಿದೆ ವಿವರ

‘ಕ್ಷಮಿಸಿ. ಹಣಕಾಸು ಅಥವಾ ಹೂಡಿಕೆ ಸಲಹೆ ನೀಡಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಹೂಡಿಕೆಗೆ ಸಂಬಂಧಿಸಿದ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ನೀವಾಗಿಯೇ ಅಧ್ಯಯನ ನಡೆಸುವುದು ಹಾಗೂ ಹಣಕಾಸು ಸಲಹೆಗಾರರ ಬಳಿ ಸಮಾಲೋಚನೆ ನಡೆಸುವುದು ಉತ್ತಮ’ ಎಂದು ಚಾಟ್​​ ಜಿಪಿಟಿ ಉತ್ತರಿಸಿದೆ.

ಓಪನ್ ಎಐ ಎಂಬ ಕೃತಕಬುದ್ಧಿಮತ್ತೆ ಕಂಪನಿ ಚಾಟ್​​ ಜಿಪಿಟಿಯನ್ನು ಅಭಿವೃದ್ಧಿಪಡಿಸಿದ್ದು, ಸಾರ್ವಜನಿಕರಿಗೆ ಲಭ್ಯವಾಗಿರುವಂತೆ ಮಾಡಿರುವುದಾಗಿ 2022ರ ಡಿಸೆಂಬರ್ ಆರಂಭದಲ್ಲಿ ತಿಳಿಸಿತ್ತು. ಕೃತಕ ಬುದ್ಧಿಮತ್ತೆ ಆಧಾರಿತ ಈ ಚಾಟಿಂಗ್ ತಾಣ ಬಳಕೆದಾರರು ಏನೇ ಕೇಳಿದರೂ ಬರಹ ರೂಪದಲ್ಲಿ ಉತ್ತರ ನೀಡುತ್ತದೆ. ಕಳೆದ ಕೆಲವು ದಿನಗಳಿಂದ ಟೆಕ್ ವಲಯದಲ್ಲಿ ಇದು ಭಾರೀ ಸುದ್ದಿಗೆ ಗ್ರಾಸವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ