WhatsApp New Feature: ಮೆಟಾದಿಂದ ಮಹತ್ವದ ನಿರ್ಧಾರ: ಇನ್ಮುಂದೆ ವಾಟ್ಸ್​ಆ್ಯಪ್​ನಲ್ಲಿ ಇರಲ್ಲ ಸ್ಕ್ಯಾಮ್ ಕರೆಗಳ ಕಿರಿ ಕಿರಿ

ವಾಟ್ಸ್​ಆ್ಯಪ್ ಸದ್ಯದಲ್ಲೇ ತನ್ನ ಬಳಕೆದಾರರಿಗೆ ಅಪರಿಚಿತ ಸಂಖ್ಯೆಗಳಿಂದ ಬರುವ ಕರೆಯನ್ನು ಮ್ಯೂಟ್‌ ಮಾಡುವ ಸೌಲಭ್ಯವನ್ನು ನೀಡಲಿದೆ. ಈ ಫೀಚರ್‌ ಆಯ್ದ ಬೀಟಾ ಟೆಸ್ಟರ್‌ಗಳಿಗೆ ಮಾತ್ರ ಲಭ್ಯವಿದೆ. ಕೆಲವೆ ದಿನಗಳಲ್ಲಿ ಆಂಡ್ರಾಯ್ಡ್‌ ಬಳಕೆದಾರರಿಗೆ ಸಿಗಲಿದೆ. ಇದರ ಮೂಲಕ ನಿಮ್ಮ ಫೋನ್‌ಗಳಿಗೆ ವಾಟ್ಸ್​ಆ್ಯಪ್ ಮೂಲಕ ಬರುವ ಅಪರಿಚಿತ ಕರೆಗಳನ್ನು ಸೈಲೆನ್ಸ್‌ ಮಾಡಬಹುದು.

WhatsApp New Feature: ಮೆಟಾದಿಂದ ಮಹತ್ವದ ನಿರ್ಧಾರ: ಇನ್ಮುಂದೆ ವಾಟ್ಸ್​ಆ್ಯಪ್​ನಲ್ಲಿ ಇರಲ್ಲ ಸ್ಕ್ಯಾಮ್ ಕರೆಗಳ ಕಿರಿ ಕಿರಿ
WhatsApp New Feature
Edited By:

Updated on: Oct 07, 2026 | 10:56 PM

ಮುಖ್ಯಾಂಶಗಳು

  • ಮೆಟಾದಿಂದ ಮಹತ್ವದ ನಿರ್ಧಾರ
  • ವಾಟ್ಸ್​ಆ್ಯಪ್​ನಲ್ಲಿ ಇರಲ್ಲ ಸ್ಕ್ಯಾಮ್ ಕರೆಗಳ ಕಿರಿ ಕಿರಿ
  • ವಾಟ್ಸ್​ಆ್ಯಪ್ ಕರೆಯನ್ನು ಮ್ಯೂಟ್‌ ಮಾಡುವ ಸೌಲಭ್ಯ ನೀಡಲಿದೆ

ಇಂದಿನ ದಿನಗಳಲ್ಲಿ ಜನರಿಗೆ ಕಿರಿ ಕಿರಿ ಉಂಟುಮಾಡುವಂತಹ ಸ್ಪ್ಯಾಮ್ (Spam) ಮತ್ತು ಸ್ಕ್ಯಾಮ್ (Scam) ಕರೆಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸುಳ್ಳು ಕರೆಗಳನ್ನು ನಂಬಿ ಇದರಿಂದ ಹಣ ಕಳೆದುಕೊಂಡವರು ಅನೇಕರಿದ್ದಾರೆ. ಕೇವಲ ಮೊಬೈಲ್ ಸಂಖ್ಯೆಗೆ ಮಾತ್ರವಲ್ಲದೆ ಈಗೀಗ ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್​ಆ್ಯಪ್​ನಲ್ಲೂ ಸ್ಕ್ಯಾಮ್ ಕರೆಗಳು ಬರುತ್ತಿದೆ. ವರ್ಕ್ ಫ್ರಮ್ ಹೋಮ್​ನಿಂದ ಲಕ್ಷ, ಲಕ್ಷ ಗಳಿಸಿ, ಉಚಿತ ಇಂಟರ್ನೆಟ್ ಸಂಪರ್ಕ ಸೇರಿದಂತೆ ಹಲವು ಸುಳ್ಳು ಮೆಸೇಜ್, ಕಾಲ್​ಗಳು ವಾಟ್ಸ್​ಆ್ಯಪ್​ನಲ್ಲಿ (WhatsApp) ಹರಿದಾಡುತ್ತಿದೆ. ಆದರೀಗ ಮೆಟಾ ಇದನ್ನು ತಡೆಯಲು ಹೊಸ ಫೀಚರ್ ಬಿಡುಗಡೆ ಮಾಡಲು ತಯಾರಿ ನಡೆಸಿದೆ. ಬಳಕೆದಾರರ ಪ್ರೈವಸಿ ವಿಚಾರದಲ್ಲಿ ಕಟ್ಟುನಿಟ್ಟಾಗಿರುವ ವಾಟ್ಸ್​ಆ್ಯಪ್ ಉಪಯುಕ್ತವಾದ ಆಯ್ಕೆಯೊಂದನ್ನು ನೀಡಲು ಮುಂದಾಗಿದೆ.

ವಾಟ್ಸ್​ಆ್ಯಪ್ ಸದ್ಯದಲ್ಲೇ ತನ್ನ ಬಳಕೆದಾರರಿಗೆ ಅಪರಿಚಿತ ಸಂಖ್ಯೆಗಳಿಂದ ಬರುವ ಕರೆಯನ್ನು ಮ್ಯೂಟ್‌ ಮಾಡುವ ಸೌಲಭ್ಯವನ್ನು ನೀಡಲಿದೆ. ಈ ಫೀಚರ್‌ ಆಯ್ದ ಬೀಟಾ ಟೆಸ್ಟರ್‌ಗಳಿಗೆ ಮಾತ್ರ ಲಭ್ಯವಿದೆ. ಕೆಲವೆ ದಿನಗಳಲ್ಲಿ ಆಂಡ್ರಾಯ್ಡ್‌ ಬಳಕೆದಾರರಿಗೆ ಸಿಗಲಿದೆ. ಇದರ ಮೂಲಕ ನಿಮ್ಮ ಫೋನ್‌ಗಳಿಗೆ ವಾಟ್ಸ್​ಆ್ಯಪ್ ಮೂಲಕ ಬರುವ ಅಪರಿಚಿತ ಕರೆಗಳನ್ನು ಸೈಲೆನ್ಸ್‌ ಮಾಡಬಹುದು. WABetaInfo ತಾಣದಲ್ಲಿ ಪ್ರಕಟವಾದ ಮಾಹಿತಿ ಪ್ರಕಾರ ಈ ಫೀಚರ್‌ ವಾಟ್ಸ್​ಆ್ಯಪ್ ಆಂಡ್ರಾಯ್ಡ್‌ 2.23.10.7 ಅಪ್‌ಡೇಟ್‌ನಲ್ಲಿ ದೊರಕಲಿದೆ. ಇದಕ್ಕಾಗಿ ಸೆಟ್ಟಿಂಗ್‌> ಪ್ರೈವೇಸಿ ಮೆನುಗೆ ಹೋಗಿ ಕ್ಲಿಕ್‌ ಮಾಡಬೇಕು. ಇದರಿಂದ ಸ್ಪ್ಯಾಮ್‌ ಕರೆಗಳನ್ನು ನಿಯಂತ್ರಿಸಲು ವಾಟ್ಸ್​ಆ್ಯಪ್ ಬಳಕೆದಾರರಿಗೆ ಸಾಧ್ಯವಾಗಲಿದೆ.

Amazon Great Summer Sale: ಅಮೆಜಾನ್ ಗ್ರೇಟ್ ಸಮ್ಮರ್ ಡೇಸ್ ಸೇಲ್: ಸ್ಮಾರ್ಟ್​ಫೋನ್​ಗಳ ಮೇಲೆ ಬಂಪರ್ ಆಫರ್

47 ಲಕ್ಷ ವಾಟ್ಸ್​ಆ್ಯಪ್ ಖಾತೆ ಬ್ಯಾನ್:

ವಾಟ್ಸ್​ಆ್ಯಪ್ ಮಾರ್ಚ್ ತಿಂಗಳಲ್ಲಿ ಬರೋಬ್ಬರಿ 47 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್​ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಮಾರ್ಚ್ 01-31ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್​ಆ್ಯಪ್​ (WhatsApp) ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 4,715,906 ವಾಟ್ಸ್​ಆ್ಯಪ್​ ಖಾತೆಗಳನ್ನು ಬ್ಯಾನ್ (Ban) ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಫೆಬ್ರವರಿ ತಿಂಗಳಲ್ಲಿ ಕೂಡ ಭಾರತದಲ್ಲಿ 46 ಲಕ್ಷಕ್ಕೂ ಅಧಿಕತ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸ್​ಆ್ಯಪ್ ಹೇಳಿತ್ತು. ಬ್ಯಾನ್‌ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ.

ವಿಡಿಯೋ ಮೆಸೇಜ್:

ಸದ್ಯದಲ್ಲೇ ವಾಟ್ಸ್​ಆ್ಯಪ್ ತನ್ನ ಬಳಕೆದಾರರಿಗೆ ವಿಡಿಯೋ ಮೆಸೇಜ್ ಫೀಚರ್ ಅನ್ನು ನೀಡಲಿದೆ. ವಾಟ್ಸ್​ಆ್ಯಪ್ ಕುರಿತ ಎಲ್ಲಾ ವಿಷಯಗಳನ್ನು ಹಂಚಿಕೊಳ್ಳುವ Wabetainfo ಈ ಬಗ್ಗೆ ವರದಿ ಮಾಡಿದ್ದು, ಬಳಕೆದಾರರು ತಮ್ಮ ಕಾಂಟೆಕ್ಟ್​ನಲ್ಲಿ 60 ಸೆಕೆಂಡುಗಳವರೆಗೆ ಶಾರ್ಟ್ ವಿಡಿಯೋಗಳನ್ನು ರೆಕಾರ್ಡ್ ಮಾಡಿ ಮತ್ತು ಹಂಚಿಕೊಳ್ಳುವ ಫೀಚರ್ ಅನ್ನು ಅಭಿವೃದ್ದಿ ಪಡಿಸುತ್ತಿದೆ ಎಂದು ಹೇಳಿದೆ. ಇದಕ್ಕೆ ವಿಡಿಯೋ ಮೆಸೇಜ್ ಎಂದು ಹೆಸರಿಡಲಾಗಿದೆ. ವಾಟ್ಸ್​ಆ್ಯಪ್​ನಲ್ಲಿ ವಿಡಿಯೋ ಶೇರ್ ಮಾಡುವುದು ಮತ್ತು ಈ ವಿಡಿಯೋ ಮೆಸೇಜ್​ ಬೇರೆ ಬೇರೆ ಆಗಿದೆ. ಹೊಸ ಆಯ್ಕೆಯ ಮೂಲಕ ಬಳಕೆದಾರರು ಒಬ್ಬರ ಚಾಟ್ ತೆರೆದು ರಿಯಲ್ ಟೈಮ್​ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ ಕಳುಹಿಸಬಹುದು.

Published On - 1:05 pm, Sat, 6 May 23

Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Loading...
Unable to load recommendations.
Follow Us