AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WhatsApp: ಗ್ರೂಪ್​ಗಳಲ್ಲಿ ಸದ್ದಿಲ್ಲದೆ ವಾಟ್ಸ್​ಆ್ಯಪ್ ಪರಿಚಯಿಸಿದೆ ವಿಶೇಷ ಫೀಚರ್: ತಕ್ಷಣವೇ ಅಪ್ಡೇಟ್ ಮಾಡಿ

ಡ್ರಾಯಿಂಗ್ ಎಡಿಟರ್‌ ಮೂಲಕ ಹೊಸ ಸೌಲಭ್ಯಗಳನ್ನು ಕಲ್ಪಿಸಲು ವಾಟ್ಸ್​ಆ್ಯಪ್ ಮುಂದಾಗಿದೆ. ಈ ಡ್ರಾಯಿಂಗ್ ಎಡಿಟರ್ ಅಡಿಯಲ್ಲಿ ಮೂರು ಹೊಸ ಫೀಚರ್​ಗಳನ್ನು ಕಂಪನಿ ಪರಿಚಯಿಸುತ್ತಿದೆ. ಮೊದಲನೆಯದಾಗಿ ವಾಟ್ಸ್​ಆ್ಯಪ್​ನಲ್ಲಿ ಪಠ್ಯದ ಶೈಲಿ ಸಂಪೂರ್ಣ ಬದಲಾವಣೆ ಆಗಲಿದೆ. ಇದು ಟೆಕ್ಸ್ಟ್ ಎಡಿಟರ್ ಫೀಚರ್ಸ್‌ ಆಗಿದ್ದು ಕೀಬೋರ್ಡ್ ಮೇಲೆ ಪ್ರದರ್ಶಿಸಲಾದ ಫಾಂಟ್ ಆಯ್ಕೆಗಳಲ್ಲಿ ಒಂದನ್ನು ಟ್ಯಾಪ್ ಮಾಡುವ ಮೂಲಕ ವಿವಿಧ ಫಾಂಟ್‌ಗಳನ್ನು ತ್ವರಿತವಾಗಿ ಬದಲಾಯಿಸುವ ಆಯ್ಕೆಯನ್ನು ಬಳಕೆದಾರರಿಗೆ ನೀಡಲಾಗುತ್ತದೆ. ಎರಡನೆಯದಾಗಿ ಪಠ್ಯ ಜೋಡಣೆ ಎಂಬ ಆಯ್ಕೆ ನೀಡುತ್ತಿದ್ದು ಇದರ ಸಹಾಯದಿಂದ ಬಳಕೆದಾರರು ಪಠ್ಯವನ್ನು ಎಡ, ಮಧ್ಯ ಅಥವಾ ಬಲಕ್ಕೆ ಸುಲಭವಾಗಿ ಇರಿಸಲು ಸಾಧ್ಯವಾಗುತ್ತದೆ.

WhatsApp: ಗ್ರೂಪ್​ಗಳಲ್ಲಿ ಸದ್ದಿಲ್ಲದೆ ವಾಟ್ಸ್​ಆ್ಯಪ್ ಪರಿಚಯಿಸಿದೆ ವಿಶೇಷ ಫೀಚರ್: ತಕ್ಷಣವೇ ಅಪ್ಡೇಟ್ ಮಾಡಿ
ವಾಟ್ಸ್​ಆ್ಯಪ್
Vinay Bhat
| Edited By: |

Updated on:Oct 08, 2026 | 3:21 PM

Share

ಮೆಟಾ (Meta) ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ಕಳೆದ ವರ್ಷದಂತೆ ಈ ವರ್ಷ ಕೂಡ ಅನೇಕ ನೂತನ ಆಯ್ಕೆಗಳನ್ನು ಪರಿಚಯಿಸಲು ಶುರು ಮಾಡಿಕೊಂಡಿದೆ. ದಿನದಿಂದ ದಿನಕ್ಕೆ ಬಳಕೆದಾರರ ಸಂಖ್ಯೆಯನ್ನು ಹೆಚ್ಚಿಸುತ್ತಿರುವ ವಾಟ್ಸ್​ಆ್ಯಪ್ (WhatsApp) ಅನ್ನು ಇಂದು ಕೇವಲ ಭಾರತದಲ್ಲೇ ಸುಮಾರು 550 ಮಿಲಿಯನ್ ಜನರು ಉಪಯೋಗಿಸುತ್ತಿದ್ದಾರೆ. 2023 ವರ್ಷದ ಮೊದಲ ತಿಂಗಳಲ್ಲೇ ಕೆಲ ಅಪ್ಡೇಟ್​ಗಳನ್ನು ನೀಡಿರುವ ವಾಟ್ಸ್​ಆ್ಯಪ್​ನಲ್ಲಿ ಮುಂದಿನ ತಿಂಗಳು ಕೂಡ 4 ರಿಂದ 5 ಹೊಸ ಫೀಚರ್​ಗಳು ಬರಲಿಕ್ಕಿವೆ. ಇದರ ನಡುವೆ ತಿಂಗಳ ಅಂತ್ಯದಲ್ಲಿ ಐಒಎಸ್ (iOS) ಬಳಕೆದಾರರಿಗೆ ಸದ್ದಿಲ್ಲದೆ ವಿಶೇಷ ಆಯ್ಕೆಯೊಂದು ನೀಡಿದೆ. ಈ ಹೊಸ ಅಪ್ಡೇಟ್​ಗೆ ಇನ್‌ ಆ್ಯಪ್‌ ಬ್ಯಾನರ್‌ ಎಂದು ಹೆಸರಿಸಲಾಗಿದ್ದು ಇದರ ಮೂಲಕ ಅನೌನ್ಸ್‌ಮೆಂಟ್‌ ಗ್ರೂಪ್‌ನಲ್ಲಿರುವ ಸಂದೇಶಗಳಿಗೆ ಎಮೋಜಿ ರಿಯಾಕ್ಷನ್‌ ಮಾಡಲು ಸಾಧ್ಯವಾಗುತ್ತಿದೆ.

ಈಗಾಗಲೇ ಅನೌನ್ಸ್‌ಮೆಂಟ್‌ ಗ್ರೂಪ್‌ನಲ್ಲಿ ಬಂದ ಮೆಸೇಜ್​ಗಳಿಗೆ ಎಮೋಜಿ ಮೂಲಕ ರಿಯಾಕ್ಷನ್ ಮಾಡುವ ಆಯ್ಕೆ ಐಒಎಸ್ ಬಳಕೆದಾರರಿಗೆ ಲಭ್ಯವಾಗುತ್ತಿದೆ. ಸದ್ಯದಲ್ಲೇ ಇದು ಆಂಡ್ರಾಯ್ಡ್ ಬಳಕೆದಾರರಿಗೂ ಸಿಗಲಿದೆಯಂತೆ. ಇದರ ಜೊತೆಗೆ ಐಒಎಸ್‌ ಆವೃತ್ತಿಯಲ್ಲಿ ಗ್ರೂಪ್ ಅಡ್ಮಿನ್‌ಗಳಿಗೆ ಕೆಲವು ಹೊಸ ಶಾರ್ಟ್‌ಕಟ್‌ಗಳನ್ನು ಹೊರತಂದಿದೆ ಎಂದು ವರದಿಯಾಗಿದೆ. ಇದರಿಂದ ಗ್ರೂಪ್‌ ಅಡ್ಮಿನ್‌ಗಳು ಮತ್ತು ಗ್ರೂಪ್‌ನಲ್ಲಿ ಭಾಗವಹಿಸುವವರ ಜೊತೆ ಖಾಸಗಿಯಾಗಿ ಸಂವಹನ ನಡೆಸಲು ಸಾಧ್ಯವಾಗಲಿದೆ. ಸರ್ಚ್ ಬೈ ಡೇಟ್‌ ಎಂಬ ಫೀಚರ್ಸ್‌ ಕೂಡ ಬರುತ್ತಿದ್ದು ಇದರ ಮೂಲಕ ಬಳಕೆದಾರರು ಹಳೆಯ ಚಾಟ್‌ ಅನ್ನು ದಿನಾಂಕದ ಮೂಲಕ ಸರ್ಚ್‌ ಮಾಡಬಹುದು.

ಟೆಕ್ಸ್ಟ್ ಎಡಿಟರ್ ಫೀಚರ್ಸ್‌:

ಡ್ರಾಯಿಂಗ್ ಎಡಿಟರ್‌ ಮೂಲಕ ಹೊಸ ಸೌಲಭ್ಯಗಳನ್ನು ಕಲ್ಪಿಸಲು ವಾಟ್ಸ್​ಆ್ಯಪ್ ಮುಂದಾಗಿದೆ. ಈ ಡ್ರಾಯಿಂಗ್ ಎಡಿಟರ್ ಅಡಿಯಲ್ಲಿ ಮೂರು ಹೊಸ ಫೀಚರ್​ಗಳನ್ನು ಕಂಪನಿ ಪರಿಚಯಿಸುತ್ತಿದೆ. ಮೊದಲನೆಯದಾಗಿ ವಾಟ್ಸ್​ಆ್ಯಪ್​ನಲ್ಲಿ ಪಠ್ಯದ ಶೈಲಿ ಸಂಪೂರ್ಣ ಬದಲಾವಣೆ ಆಗಲಿದೆ. ಇದು ಟೆಕ್ಸ್ಟ್ ಎಡಿಟರ್ ಫೀಚರ್ಸ್‌ ಆಗಿದ್ದು ಕೀಬೋರ್ಡ್ ಮೇಲೆ ಪ್ರದರ್ಶಿಸಲಾದ ಫಾಂಟ್ ಆಯ್ಕೆಗಳಲ್ಲಿ ಒಂದನ್ನು ಟ್ಯಾಪ್ ಮಾಡುವ ಮೂಲಕ ವಿವಿಧ ಫಾಂಟ್‌ಗಳನ್ನು ತ್ವರಿತವಾಗಿ ಬದಲಾಯಿಸುವ ಆಯ್ಕೆಯನ್ನು ಬಳಕೆದಾರರಿಗೆ ನೀಡಲಾಗುತ್ತದೆ. ಎರಡನೆಯದಾಗಿ ಪಠ್ಯ ಜೋಡಣೆ ಎಂಬ ಆಯ್ಕೆ ನೀಡುತ್ತಿದ್ದು ಇದರ ಸಹಾಯದಿಂದ ಬಳಕೆದಾರರು ಪಠ್ಯವನ್ನು ಎಡ, ಮಧ್ಯ ಅಥವಾ ಬಲಕ್ಕೆ ಸುಲಭವಾಗಿ ಇರಿಸಲು ಸಾಧ್ಯವಾಗುತ್ತದೆ.

ಕೊನೆಯದಾಗಿ ಪಠ್ಯದ ಹಿನ್ನೆಲೆ ಬಣ್ಣ ಬದಲಾವಣೆ ಮಾಡುವ ಆಯ್ಕೆ. ಇದು ಬಳಕೆದಾರರಿಗೆ ಸುಲಭವಾಗಿ ಪಠ್ಯದ ಹಿನ್ನೆಲೆ ಬಣ್ಣವನ್ನು ಬದಲಾಯಿಸುವಲ್ಲಿ ಸಹಕಾರ ನೀಡುವುದರ ಜೊತೆಗೆ ಪಠ್ಯವನ್ನು ಪ್ರತ್ಯೇಕಿಸಲು ಸುಲಭವಾಗಿ ಸಹಾಯ ಮಾಡಲಿದೆ. ಈಗಾಗಲೇ ಈ ಎಲ್ಲ ಆಯ್ಕೆ ಬೀಟಾ ಬಳಕೆದಾರರಿಗೆ ಲಭ್ಯವಿದೆ. ಸದ್ಯದಲ್ಲೇ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಲಭ್ಯವಾಗಲಿದೆ ಎಂದು ಹೇಳಲಾಗಿದೆ.

Published On - 12:53 pm, Mon, 30 January 23

Follow Us
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!
ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!