AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WITT Global Summit 2025: ಅತಿ ಹೆಚ್ಚು ಬೇಡಿಕೆಯಿರುವ ಖನಿಜ ಸಂಪತ್ತು ದೇಶದಲ್ಲಿದೆ, ಪತ್ತೆ ಹಚ್ಚಿ ಹೊರತೆಗೆಯುವ ಪ್ರಯತ್ನವಾಗಲಿ : ಅನಿಲ್ ಅಗರ್ವಾಲ್

ಟಿವಿ9 ನೆಟ್‌ವರ್ಕ್‌ನ ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’ (What India Thinks Today) ಜಾಗತಿಕ ಶೃಂಗಸಭೆಯ ಮೂರನೇ ಆವೃತ್ತಿ ನಿನ್ನೆ ಇಂದು ಎರಡು ದಿನಗಳ ಕಾಲ ನಡೆಯುತ್ತಿದೆ. ಎರಡನೇ ದಿನದ ಕಾರ್ಯಕ್ರಮದಲ್ಲಿ ವೇದಾಂತ ರಿಸೋರ್ಸಸ್ ಲಿಮಿಟೆಡ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಅನಿಲ್ ಅಗರ್ವಾಲ್ ಭಾಗವಹಿಸಿದ್ದು, 'ಜಗತ್ತಿನಲ್ಲಿ ಅತಿ ಹೆಚ್ಚು ಬೇಡಿಕೆಯಿರುವ ಖನಿಜಗಳು ದೇಶದಲ್ಲಿವೆ. ಅದನ್ನು ಹೊರತೆಗೆಯುವ ಬಗ್ಗೆ ವಿವರಿಸಿದ್ದು, ಈ ಕುರಿತಾದ ಮಾಹಿತಿ ಇಲ್ಲಿದೆ.

WITT Global Summit 2025: ಅತಿ ಹೆಚ್ಚು ಬೇಡಿಕೆಯಿರುವ ಖನಿಜ ಸಂಪತ್ತು ದೇಶದಲ್ಲಿದೆ, ಪತ್ತೆ ಹಚ್ಚಿ ಹೊರತೆಗೆಯುವ ಪ್ರಯತ್ನವಾಗಲಿ : ಅನಿಲ್ ಅಗರ್ವಾಲ್
ಅನಿಲ್ ಅಗರ್ವಾಲ್
ಸಾಯಿನಂದಾ
| Edited By: |

Updated on: Mar 29, 2025 | 6:05 PM

Share

ನವದೆಹಲಿ, ಮಾರ್ಚ್ 29: ಟಿವಿ9 ನೆಟ್‌ವರ್ಕ್‌ನ ಜಾಗತಿಕ ಶೃಂಗಸಭೆಯಾದ ವಾಟ್ ಇಂಡಿಯಾ ಥಿಂಕ್ಸ್ ಟುಡೇ 2025 (What India Thinks Today Global Summit 2025) ರ ಮೂರನೇ ಆವೃತ್ತಿಯ ಅದ್ದೂರಿ ಕಾರ್ಯಕ್ರಮವು ನಿನ್ನೆಯಿಂದ ಆರಂಭವಾಗಿದೆ. ಇಂದು ಎರಡನೇ ದಿನದ ಕಾರ್ಯಕ್ರಮ ನಡೆಯುತ್ತಿದ್ದು, ಅಭಿವೃದ್ಧಿ ಹೊಂದಿದ ಭಾರತದಲ್ಲಿ ಉದ್ಯಮಶೀಲತೆ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ವೇದಾಂತ ರಿಸೋರ್ಸಸ್ ಲಿಮಿಟೆಡ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷರಾದ ಅನಿಲ್ ಅಗರ್ವಾಲ್ ( Vedanta Chairman Anil Agarwal) ಅವರು, ದೇಶದಲ್ಲಿ ಸಾಕಷ್ಟು ತೈಲ, ಅನಿಲ ಮತ್ತು ಚಿನ್ನದ ನಿಕ್ಷೇಪಗಳಿವೆ. ಅವುಗಳನ್ನು ಪತ್ತೆ ಹಚ್ಚಿ ಹೊರತೆಗೆಯಬೇಕಾಗಿದೆ ಎಂದರು.

ವೇದಿಕೆಯಲ್ಲಿ ಮಾತನಾಡಿದ ಅನಿಲ್ ಅಗರ್ವಾಲ್, ವಿಶ್ವದ ಶೇಕಡಾ 60 ರಷ್ಟು ಖನಿಜಗಳು ದೇಶದಲ್ಲಿದೆ. ಆದರೆ ನಾವುಗಳು ತೈಲ, ಅನಿಲ, ಚಿನ್ನ ಮತ್ತು ಇತರ ಖನಿಜಗಳನ್ನು ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳುತ್ತೇವೆ. ದೇಶದಲ್ಲಿ ಗಣಿಗಾರಿಕೆ ಆರಂಭವಾದರೆ ಇತರ ದೇಶಗಳನ್ನು ಅವಲಂಬಿಸಬೇಕಾಗಿಲ್ಲ. ಪ್ರಾರಂಭದಲ್ಲೂ ಗಣಿಗಾರಿಕೆ ವ್ಯವಹಾರವನ್ನು ಪ್ರಾರಂಭಿಸಿದಾಗ, ಪರಿಸರವಾದಿಗಳು ಮತ್ತು ಅನೇಕ ಕಾರ್ಯಕರ್ತರು ಕಿರುಕುಳ ನೀಡಿದ್ದರು. ಆದರೆ ಇವತ್ತು ಅದೇ ಜನರು ನೀವು ತುಂಬಾ ಒಳ್ಳೆಯ ಕೆಲಸ ಮಾಡಿದ್ದೀರಿ ಎಂದು ಹೊಗಳುತ್ತಾರೆ ಎಂದು ಅವರು ತಿಳಿಸಿದರು.

ಭಾರತೀಯ ಪ್ರಾಣಿಶಾಸ್ತ್ರ ಸಮೀಕ್ಷೆಯಿಂದಾಗಿ ಗಣಿಗಾರಿಕೆಯ ಯಶಸ್ಸಿನ ಪ್ರಮಾಣ ಈಗ ಶೇ. 50 ರಿಂದ 70 ಕ್ಕೆ ಏರಿಕೆಯಾಗಿದೆ. ಈ ಭೂಮಿಯೊಳಗೆ ತಾಮ್ರ ಅಥವಾ ಚಿನ್ನವಿದೆ ಎಂದು ಭಾರತೀಯ ಪ್ರಾಣಿಶಾಸ್ತ್ರ ಸಮೀಕ್ಷೆ ಈಗಾಗಲೇ ಹೇಳುತ್ತದೆ. ಗಣಿಗಾರಿಕೆಗಾಗಿ ಉದ್ಯಮಿಗಳಿಗೆ ಸರ್ಕಾರ 5 ಕೋಟಿ ರೂ.ಗಳವರೆಗೆ ಸಾಲ ನೀಡುತ್ತದೆ. ಯಾರಾದರೂ ಈ ವ್ಯವಹಾರವನ್ನು ಪ್ರಾರಂಭಿಸಲು ಬಯಸಿದರೆ ಅವರು ಈ ಸಾಲ ತೆಗೆದುಕೊಂಡು ಡ್ರಿಲ್ಲಿಂಗ್ ಮೆಷಿನ್ ಮತ್ತು ಪರಿಶೋಧನಾ ಯಂತ್ರವನ್ನು ಖರೀದಿಸಿ ಕೆಲಸ ಆರಂಭಿಸಿ. ಒಬ್ಬ ವ್ಯಕ್ತಿಯನ್ನು ಶ್ರೀಮಂತನನ್ನಾಗಿ ಮಾಡುವ ಸಂಪತ್ತು ನೆಲದಡಿಯಲ್ಲಿ ಅಡಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ
Image
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
Image
ಬೇರೆ ಮಾಧ್ಯಮಗಳೂ ಇದನ್ನೇ ಅನುಸರಿಸುತ್ತವೆ; ಟಿವಿ9ಗೆ ಪ್ರಧಾನಿ ಮೋದಿ ಶ್ಲಾಘನೆ
Image
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
Image
ಭಾರತ ಜಾಗತಿಕ ದಕ್ಷಿಣದ ದೇಶಗಳ ಧ್ವನಿಯಾಗುತ್ತಿದೆ; WITT ಶೃಂಗಸಭೆಯಲ್ಲಿ ಮೋದಿ

ಇದನ್ನೂ ಓದಿ: ರಣವೀರ್ ಸಿಂಗ್ ನಟನೆಯ ಧುರಂಧರ್ ಚಿತ್ರದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಟಿ ಯಾಮಿ ಗೌತಮ್

ಹೊಟ್ಟೆ ತುಂಬಿಸಿಕೊಳ್ಳಲು ಕೃಷಿಯು ಮುಖ್ಯ. ಆದರೆ ನೀವು ಯಶಸ್ವಿಯಾಗಲು ಬಯಸಿದರೆ ಇದಕ್ಕೆ ಉತ್ತಮ ಮಾರ್ಗವೆಂದರೆ ಅದುವೇ ಈ ಗಣಿಗಾರಿಕೆ. ಅಮೆರಿಕದಲ್ಲಿ ಗರಿಷ್ಠ ಗಣಿಗಾರಿಕೆ ನಡೆಯುತ್ತದೆ, ಇದರಿಂದಲೇ ಅಮೆರಿಕ ವಿಶ್ವದ ಅತ್ಯಂತ ಶ್ರೀಮಂತ ದೇಶವಾಗಿ ಹೊರಹೊಮ್ಮಿದೆ ಎಂದು ಅವರು ತಿಳಿಸಿದರು.

WITT ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ