Delhi: ಮಹಿಳೆಗೆ ಮಾಸಿಕ 1,000 ರೂ ಧನಸಹಾಯ; ಶಿಕ್ಷಣ ಕ್ಷೇತ್ರಕ್ಕೆ ಶೇ. 21ಕ್ಕಿಂತ ಹೆಚ್ಚು ಹಣ; ದೆಹಲಿ ಸರ್ಕಾರದ ಬಜೆಟ್ ಧಮಾಕ

Delhi budget 2024-25: ದೆಹಲಿಯ 18 ವರ್ಷ ಹಾಗೂ ಮೇಲ್ಪಟ್ಟ ವಯಸ್ಸಿನ ಎಲ್ಲಾ ಮಹಿಳೆಗೂ ತಿಂಗಳಿಗೆ 1,000 ರೂ ಸಹಾಯಧನ ಕೊಡುವುದಾಗಿ ದೆಹಲಿ ಬಜೆಟ್​ನಲ್ಲಿ ಘೋಷಿಸಲಾಗಿದೆ. ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆ ಅಡಿಯಲ್ಲಿ ಏಪ್ರಿಲ್ 1ರಿಂದ ಫಲಾನುಭವಿ ಮಹಿಳೆಯರಿಗೆ ಹಣ ರವಾನೆಯಾಗಲಿದೆ. ಹಣಕಾಸು ಸಚಿವೆ ಆತಿಶಿ ತಮ್ಮ ಚೊಚ್ಚಲ ಬಜೆಟ್​ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಶೇ. 21ಕ್ಕಿಂತ ಹೆಚ್ಚು ಹಣ ನೀಡಿದ್ದಾರೆ.

Delhi: ಮಹಿಳೆಗೆ ಮಾಸಿಕ 1,000 ರೂ ಧನಸಹಾಯ; ಶಿಕ್ಷಣ ಕ್ಷೇತ್ರಕ್ಕೆ ಶೇ. 21ಕ್ಕಿಂತ ಹೆಚ್ಚು ಹಣ; ದೆಹಲಿ ಸರ್ಕಾರದ ಬಜೆಟ್ ಧಮಾಕ
ದೆಹಲಿ ಹಣಕಾಸು ಸಚಿವೆ ಆತಿಶಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 04, 2024 | 3:23 PM

ನವದೆಹಲಿ, ಮಾರ್ಚ್ 4: ದೆಹಲಿ ಸರ್ಕಾರ ಇವತ್ತು ಪ್ರಸ್ತುತಪಡಿಸಿದ ಬಜೆಟ್​ನಲ್ಲಿ ಶಿಕ್ಷಣ ಮತ್ತು ಮಹಿಳೆಯರ ಮೇಲೆ ಒತ್ತುಕೊಡಲಾಗಿದೆ. ಹಣಕಾಸು ಸಚಿವೆ ಆತಿಶಿ (Atishi) ಅವರು ಇಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದಾರೆ. 76,000 ಕೋಟಿ ರೂ ಗಾತ್ರದ ಬಜೆಟ್​ನಲ್ಲಿ ಶೇ. 21ಕ್ಕೂ ಹೆಚ್ಚು ಹಣವನ್ನು ಶಿಕ್ಷಣಕ್ಕೆ ನೀಡಲಾಗಿದೆ. ಇದರ ಜೊತೆಗೆ, ಬಜೆಟ್​ನಲ್ಲಿ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಯನ್ನು (Mukhyamantri Mahila Samman Yojana) ಘೋಷಿಸಲಾಗಿದೆ. ಈ ಯೋಜನೆಯಲ್ಲಿ 18 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಎಲ್ಲಾ ಮಹಿಳೆಯರಿಗೂ ತಿಂಗಳಿಗೆ 1,000 ರೂ ನೀಡಲಾಗುತ್ತದೆ. ಏಪ್ರಿಲ್ 1ರಿಂದ ಇದು ಜಾರಿಗೆ ಬರಲಿದೆ.

‘ಕೇಜ್ರಿವಾಲ್ ಸರ್ಕಾರ 18 ವರ್ಷ ಹಾಗೂ ಅದಕ್ಕೂ ಮೇಲ್ಪಟ್ಟ ವಯಸ್ಸಿನ ಪ್ರತಿಯೊಬ್ಬ ಮಹಿಳೆಗೂ ಮಾಸಿಕ 1,000 ರೂ ನೀಡುತ್ತದೆ. ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಈ ಕೊಡುಗೆ ಸಿಗುತ್ತದೆ,’ ಎಂದು ಆತಿಶಿ ತಮ್ಮ ಚೊಚ್ಚಲ ಬಜೆಟ್​ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸಂಸದರು, ಶಾಸಕರು ಲಂಚ ಪಡೆದರೆ ಯಾವುದೇ ರಕ್ಷಣೆ ಇಲ್ಲ: 1998ರ ತೀರ್ಪು ರದ್ದು ಮಾಡಿದ ಸುಪ್ರೀಂ

ಹಣಕಾಸು ಸಚಿವೆ ಆತಿಶಿ ತಮ್ಮ 76,000 ಕೋಟಿ ರೂ ದಾಖಲೆಯ ಬಜೆಟ್​ನಲ್ಲಿ 16,396 ಕೋಟಿ ರೂವನ್ನು ಶಿಕ್ಷಣ ವಲಯಕ್ಕೆ ಕೊಟ್ಟಿದ್ದಾರೆ. 8,685 ಕೋಟಿ ರೂ ಅನ್ನು ಆರೋಗ್ಯ ಕ್ಷೇತ್ರಕ್ಕೆ ಕೊಟ್ಟಿದ್ದಾರೆ. ಕೇಜ್ರಿವಾಲ್ ಸರ್ಕಾರದ ಟ್ರೇಡ್ಮಾರ್ಕ್ ಎನಿಸಿರುವ ಮೊಹಲ್ಲಾ ಕ್ಲಿನಿಕ್​ಗಳಿಗೆ 212 ಕೋಟಿ ರೂ ಕೊಡಲಾಗಿದೆ.

ಮಹಿಳೆಯರಿಗೆ ಮಾಸಿಕ 1,000 ರೂ ನೀಡುವುದು ಈ ಬಾರಿಯ ಬಜೆಟ್​ನ ಮುಖ್ಯ ಅಂಶವಾಗಿದೆ. ಹಾಗೆಯೇ, ವಿದ್ಯುತ್ ಬಿಲ್ ಸಬ್ಸಿಡಿ ಮುಂದುವರಿಯುತ್ತಿದೆ. 2023ರಲ್ಲಿ 3.41 ಕೋಟಿ ಗ್ರಾಹಕರಿಗೆ ಶೂನ್ಯ ವಿದ್ಯುತ್ ಬಿಲ್ ನೀಡಲಾಗಿತ್ತು. ಅದು ಮುಂದುವರಿಯಲಿದೆ ಎಂದು ಆತಿಶಿ ಸ್ಪಷ್ಟಪಡಿಸಿದ್ದಾರೆ.

ದೆಹಲಿ ಸರ್ಕಾರದ ಬಜೆಟ್ 2024-24

ಒಟ್ಟು ಬಜೆಟ್ ಗಾತ್ರ: 76,000 ಕೋಟಿ ರೂ

  • ಶಿಕ್ಷಣಕ್ಕೆ: 16,400 ಕೋಟಿ ರೂ
  • ಆರೋಗ್ಯ ಕ್ಷೇತ್ರ: 8,685 ಕೋಟಿ ರೂ
  • ದೆಹಲಿ ಜಲ ಮಂಡಳಿ: 7,195 ಕೋಟಿ ರೂ
  • ಸಾಮಾಜಿಕ ಕಲ್ಯಾಣ ಇಲಾಖೆ, ಎಸ್​ಸಿ ಎಸ್​ಟಿ ಒಬಿಸಿ ಕಲ್ಯಾಣ ಇಲಾಖೆ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳಿಗೆ 6,216 ಕೋಟಿ ರೂ ಕೊಡಲಾಗಿದೆ.
  • ಸಾರ್ವಜನಿಕ ಸಾರಿಗೆ: 5,702 ಕೋಟಿ ರೂ

ಇದನ್ನೂ ಓದಿ: ಉದ್ಯೋಗಿಗಳಿಗೆ ಸಂಬಳ ಕೊಡಲು ಹಣ ಇಲ್ಲ; ಫಂಡಿಂಗ್ ಪಡೆಯಲೂ ಬಿಡುತ್ತಿಲ್ಲ: ಹೂಡಿಕೆದಾರರ ಮೇಲೆ ಬೈಜುಸ್ ಮಾಲೀಕರ ಅಸಮಾಧಾನ

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಸರ್ಕಾರ ದೆಹಲಿಯಲ್ಲಿ ಪ್ರಸ್ತುತಪಡಿಸಿರುವ 10ನೇ ಬಜೆಟ್ ಇದಾಗಿದೆ. 2014ಕ್ಕೆ ಹೋಲಿಸಿದರೆ ಬಜೆಟ್ ಗಾತ್ರ ಎರಡಕ್ಕೂ ಹೆಚ್ಚು ಪಟ್ಟು ಹೆಚ್ಚಾಗಿದೆ. ಮನೀಶ್ ಸಿಸೋಡಿಯಾ 7ಕ್ಕೂ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ಹೊಂದಿದ್ದಾರೆ. ಅಬಕಾರಿ ಅವ್ಯವಹಾರ ಪ್ರಕರಣದಲ್ಲಿ ಅವರು ಬಂಧಿತರಾಗಿ ಜೈಲಿನಲ್ಲಿರುವುದರಿಂದ ಕಳೆದ ವರ್ಷದ ಬಜೆಟ್ ಅನ್ನು ಕೈಲಾಶ್ ಗೆಹ್ಲೋಟ್ ಮಂಡಿಸಿದ್ದರು. ಈ ಬಾರಿ ಆತಿಶಿ ಅವರನ್ನು ಹಣಕಾಸು ಸಚಿವೆಯನ್ನಾಗಿ ಮಾಡಿದ್ದು, ಅವರಿಗೆ ಇದು ಮೊದಲ ಬಜೆಟ್ ಮಂಡನೆ ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್