World Bank Report: ದಕ್ಷಿಣ ಏಷ್ಯಾದ ಅತಿ ದುರ್ಬಲ ಆರ್ಥಿಕತೆ ಪಾಕಿಸ್ತಾನ; ವಿಶ್ವ ಬ್ಯಾಂಕ್ ವರದಿ

Global Economic Prospects Report; ಪಾಕಿಸ್ತಾನದ ವಿದೇಶಿ ವಿನಿಮಯ ಮೀಸಲು (forex reserves) 4.6 ಶತಕೋಟಿ ಡಾಲರ್​ಗೆ ಕುಸಿದ್ದು, ಕೇವಲ ಮೂರು ವಾರಗಳ ಕಾಲ ಅಗತ್ಯ ವಸ್ತುಗಳ ಆಮದಿಗೆ ಸಾಕಾಗುವಷ್ಟೇ ಇದೆ. ಹೀಗಾಗಿ ಆ ದೇಶಕ್ಕೆ ತಕ್ಷಣವೇ 33 ಶತಕೋಟಿ ಡಾಲರ್ ನೆರವಿನ ಅಗತ್ಯವಿದೆ ಎಂದು ವರದಿಯಾಗಿದೆ.

World Bank Report: ದಕ್ಷಿಣ ಏಷ್ಯಾದ ಅತಿ ದುರ್ಬಲ ಆರ್ಥಿಕತೆ ಪಾಕಿಸ್ತಾನ; ವಿಶ್ವ ಬ್ಯಾಂಕ್ ವರದಿ
ಪಾಕಿಸ್ತಾನ ಧ್ವಜ
Follow us
TV9 Web
| Updated By: Ganapathi Sharma

Updated on: Jan 18, 2023 | 1:21 PM

ನವದೆಹಲಿ: ಪಾಕಿಸ್ತಾನವು (Pakistan) ದಕ್ಷಿಣ ಏಷ್ಯಾದ (South Asia) ಅತಿ ದುರ್ಬಲ ಆರ್ಥಿಕತೆಯಾಗಿದೆ ಎಂದು ವಿಶ್ವ ಬ್ಯಾಂಕ್ (World Bank) ವರದಿ ತಿಳಿಸಿದೆ. ಇದರೊಂದಿಗೆ ಕಳೆದ ಕೆಲವು ತಿಂಗಳುಗಳಿಂದ ಬಡತನ, ಆಹಾರ ಬಿಕ್ಕಟ್ಟು, ಆರ್ಥಿಕ ಮುಗ್ಗಟ್ಟಿನಿಂದ ಚರ್ಚೆಯಲ್ಲಿದ್ದ ನೆರೆ ರಾಷ್ಟ್ರ ಮತ್ತೆ ಸುದ್ದಿಗೆ ಗ್ರಾಸವಾಗಿದೆ. ಪಾಕಿಸ್ತಾನದ ಆರ್ಥಿಕ ಬೆಳವಣಿಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ 2022ರ ಅಂದಾಜಿಗಿಂತಲೂ ಶೇ 2ರಷ್ಟು ಕುಸಿಯಲಿದೆ ಎಂದು ವಿಶ್ವ ಬ್ಯಾಂಕ್​ನ ‘ಜಾಗತಿಕ ಆರ್ಥಿಕ ನಿರೀಕ್ಷೆಗಳು (Global Economic Prospects)’ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಪಾಕಿಸ್ತಾನದ ಆರ್ಥಿಕ ಬೆಳವಣಿಗೆ ಕ್ಷೀಣಿಸುತ್ತಿರುವುದರ ಜತೆಗೆ ಪ್ರಾದೇಶಿಕ ಬೆಳವಣಿಗೆ ದರ ಕೂಡ ಕಡಿಮೆಯಾಗಿದೆ. ಕಳೆದ ವರ್ಷ ಸಂಭವಿಸಿದ್ದ ಪ್ರವಾಹ ಪಾಕಿಸ್ತಾನದ ಆರ್ಥಿಕ ಸ್ಥಿತಿ ತೀರಾ ಹದಗೆಡಲು ಕಾರಣ ಎಂದು ವರದಿ ತಿಳಿಸಿದೆ.

ಪಾಕಿಸ್ತಾನದ ವಿದೇಶಿ ವಿನಿಮಯ ಮೀಸಲು (forex reserves) 4.6 ಶತಕೋಟಿ ಡಾಲರ್​ಗೆ ಕುಸಿದ್ದು, ಕೇವಲ ಮೂರು ವಾರಗಳ ಕಾಲ ಅಗತ್ಯ ವಸ್ತುಗಳ ಆಮದಿಗೆ ಸಾಕಾಗುವಷ್ಟೇ ಇದೆ. ಹೀಗಾಗಿ ಆ ದೇಶಕ್ಕೆ ತಕ್ಷಣವೇ 33 ಶತಕೋಟಿ ಡಾಲರ್ ನೆರವಿನ ಅಗತ್ಯವಿದೆ ಎಂದು ‘ಎಎನ್​ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.

ಪಾಕಿಸ್ತಾನವು ಆಹಾರ ಕೊರತೆಯನ್ನೂ ಎದುರಿಸುತ್ತಿದೆ. 1200 ಪಾಕಿಸ್ತಾನಿ ರೂಪಾಯಿಯ 20 ಕೆಜಿ ಹಿಟ್ಟಿನ ಬೆಲೆ 300 ಪಾಕಿಸ್ತಾನಿ ರೂಪಾಯಿಯಷ್ಟು ಹೆಚ್ಚಾಗಿದೆ. ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯೊಂದಿಗೆ ಮಾತುಕತೆ ವಿಳಂಬ ಮತ್ತಿತರ ಸಮಸ್ಯೆಗಳ ನಡುವೆ ಪಾಕಿಸ್ತಾನಿ ರೂಪಾಯಿಯು ಮೂರು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಭಾರತದೊಂದಿಗೆ 3 ಯುದ್ಧಗಳ ನಂತರ ಪಾಕಿಸ್ತಾನ ಪಾಠ ಕಲಿತಿದೆ: ಪಾಕ್ ಪ್ರಧಾನಿ ಶೆಹಬಾಜ್ ಷರೀಫ್

ತೀವ್ರ ಆರ್ಥಿಕ ಮುಗ್ಗಟ್ಟಿನಿಂದ ತತ್ತರಿಸಿರುವ ಪಾಕಿಸ್ತಾನ, ಇಂಧನ ಉಳಿಸುವ ಸಲುವಾಗಿ ಮಾರುಕಟ್ಟೆಗಳು, ಮಾಲ್‌ಗಳು ಮತ್ತು ಮದುವೆ ಮಂಟಪಗಳನ್ನು ಬೇಗನೆ ಮುಚ್ಚುವುದಾಗಿ ಇತ್ತೀಚೆಗಷ್ಟೇ ಘೋಷಿಸಿತ್ತು. ಈ ನಿರ್ಧಾರವು ಪಾಕಿಸ್ತಾನ ಸರ್ಕಾರದ ಇಂಧನ ಸಂರಕ್ಷಣಾ ಯೋಜನೆಯಡಿಯಲ್ಲಿ ಒಂದಾಗಿದೆ ಎನ್ನಲಾಗಿತ್ತು. ಇಂಧನವನ್ನು ಉಳಿಸಲು ಮತ್ತು ಆಮದು ಮಾಡಿಕೊಳ್ಳುವ ಇಂಧನದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ರಾಷ್ಟ್ರೀಯ ಇಂಧನ ಸಂರಕ್ಷಣಾ ಯೋಜನೆಗೆ ಪಾಕಿಸ್ತಾನದ ಸಂಪುಟದ ಸಚಿವರು ಅನುಮೋದನೆ ನೀಡಿದ್ದರು. ಪಾಕಿಸ್ತಾನದ ಮಾರುಕಟ್ಟೆಗಳು ಮತ್ತು ಮಾಲ್‌ಗಳು ಇನ್ನುಮುಂದೆ ರಾತ್ರಿ 8.30ಕ್ಕೆ ಮುಚ್ಚಲ್ಪಡುತ್ತವೆ. ಪಾಕಿಸ್ತಾನದಲ್ಲಿ ಮದುವೆ ಹಾಲ್‌ಗಳು ರಾತ್ರಿ 10 ಗಂಟೆಗೆ ಮುಚ್ಚಲ್ಪಡುತ್ತವೆ. ಈ ನಿರ್ಧಾರದಿಂದ ನಾವು 60 ಶತಕೋಟಿ ರೂ.ಗಳನ್ನು ಉಳಿಸಬಹುದಾಗಿದೆ ಎಂದು ಅಲ್ಲಿನ ಸಚಿವ ಖವಾಜಾ ಆಸಿಫ್ ತಿಳಿಸಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್