AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pfizer CEO: ದಾವೋಸ್​; ಕೋವಿಡ್ ಲಸಿಕೆ ಕುರಿತ ಪ್ರಶ್ನೆಗೆ ಉತ್ತರಿಸದೆ ಓಡಿ ಹೋದ ಫೈಜರ್ ಸಿಇಒ

ಲಸಿಕೆಯು ಕೋವಿಡ್ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡದಂತೆ ತಡೆಯುವುದಿಲ್ಲ ಎಂಬ ಮಾಹಿತಿಯನ್ನು ಮುಚ್ಚಿಟ್ಟಿದ್ದೇಕೆ ಎಂದು ಪತ್ರಕರ್ತ ಪ್ರಶ್ನಿಸುತ್ತಾರೆ. ಇದಕ್ಕೆ ಉತ್ತರಿಸದ ಫೈಜರ್ ಸಿಇಒ, ‘ಧನ್ಯವಾದಗಳು, ಶುಭ ದಿನ’ ಎಂದಷ್ಟೇ ಹೇಳಿ ಮುಂದಕ್ಕೆ ತೆರಳುತ್ತಾರೆ. ಆದರೆ, ಪಟ್ಟು ಬಿಡದೆ ಅವರನ್ನು ಹಿಂಬಾಲಿಸಿದ ಪತ್ರಕರ್ತ ಮತ್ತೆ ಮತ್ತೆ ಪ್ರಶ್ನೆ ಕೇಳಿದ್ದಾರೆ.

Pfizer CEO: ದಾವೋಸ್​; ಕೋವಿಡ್ ಲಸಿಕೆ ಕುರಿತ ಪ್ರಶ್ನೆಗೆ ಉತ್ತರಿಸದೆ ಓಡಿ ಹೋದ ಫೈಜರ್ ಸಿಇಒ
ಕೋವಿಡ್ ಲಸಿಕೆ (ಸಾಂದರ್ಭಿಕ ಚಿತ್ರ)
Ganapathi Sharma
|

Updated on:Jan 20, 2023 | 5:27 PM

Share

ದಾವೋಸ್: ಫೈಜರ್ (Pfizer) ಕೋವಿಡ್ ಲಸಿಕೆಗೆ (Covid vaccine) ಸಂಬಂಧಿಸಿದಂತೆ ಪತ್ರಕರ್ತರು ಕೇಳಿದ ಕೆಲವು ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಂಪನಿಯ ಸಿಇಒ ಆಲ್ಬರ್ಟ್ ಬೌರ್ಲಾ (Albert Bourla) ಮೌನವಾಗಿ ಓಡಿಹೋದ ಘಟನೆ ಸ್ವಿಜರ್ಲೆಂಡ್​​ನ ದಾವೋಸ್​​ನಲ್ಲಿ (Davos) ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ ಸಭೆಯ ಸಂದರ್ಭದಲ್ಲಿ ನಡೆದಿದೆ. ಆಲ್ಬರ್ಟ್ ಬೌರ್ಲಾ ಅವರಿಗೆ ಫೈಜರ್ ಲಸಿಕೆಗೆ ಸಂಬಂಧಿಸಿ ಪತ್ರಕರ್ತರಿಂದ ಅನೇಕ ಪ್ರಶ್ನೆಗಳು ಎದುರಾದವು. ಲಸಿಕೆಯ ಪರಿಣಾಮಕಾರಿತ್ವ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪ್ರಶ್ನೆಗಳು ಅವರತ್ತ ತೂರಿಬಂದವು. ಇದೇ ವೇಳೆ ಕೆಲವು ಪ್ರಶ್ನೆಗಳಿಗೆ ಉತ್ತರಿಸದೇ ಅವರು ವೇಗವಾಗಿ ಹೆಜ್ಜೆ ಹಾಕಿ ನಿರ್ಗಮಿಸಿದ ವಿಡಿಯೊ ತುಣುಕುಗಳು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಪತ್ರಕರ್ತರೊಬ್ಬರು ಆಲ್ಬರ್ಟ್ ಬೌರ್ಲಾ ಅವರಿಗೆ ಇರಿಸುಮುರುಸು ಉಂಟುಮಾಡುವ ರೀತಿಯಲ್ಲಿ ಪ್ರಶ್ನೆಗಳನ್ನು ಕೇಳುತ್ತಿರುವುದು ವಿಡಿಯೊದಲ್ಲಿದೆ. ಇದಕ್ಕೆ ಉತ್ತರಿಸದೆ ಬೌರ್ಲಾ ವೇಗನೆ ಹೆಜ್ಜೆ ಹಾಕಿದ್ದಾರೆ.

ಲಸಿಕೆಯು ಕೋವಿಡ್ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡದಂತೆ ತಡೆಯುವುದಿಲ್ಲ ಎಂಬ ಮಾಹಿತಿಯನ್ನು ಮುಚ್ಚಿಟ್ಟಿದ್ದೇಕೆ ಎಂದು ಪತ್ರಕರ್ತ ಪ್ರಶ್ನಿಸುತ್ತಾರೆ. ಇದಕ್ಕೆ ಉತ್ತರಿಸದ ಫೈಜರ್ ಸಿಇಒ, ‘ಧನ್ಯವಾದಗಳು, ಶುಭ ದಿನ’ ಎಂದಷ್ಟೇ ಹೇಳಿ ಮುಂದಕ್ಕೆ ತೆರಳುತ್ತಾರೆ. ಆದರೆ, ಪಟ್ಟು ಬಿಡದೆ ಅವರನ್ನು ಹಿಂಬಾಲಿಸಿದ ಪತ್ರಕರ್ತ ಮತ್ತೆ ಮತ್ತೆ ಪ್ರಶ್ನೆ ಕೇಳಿದ್ದಾರೆ.

ಇದನ್ನೂ ಓದಿ: World Economic Forum: ಜಾಗತಿಕ ಪರಿಸ್ಥಿತಿ ಹದಗೆಟ್ಟ ಸಂದರ್ಭದಲ್ಲಿ ಮೋದಿ ನಾಯಕತ್ವ ನಿರ್ಣಾಯಕ; ವಿಶ್ವ ಆರ್ಥಿಕ ವೇದಿಕೆ

‘ಆರಂಭದಲ್ಲಿ ಲಸಿಕೆಯು ಶೇ 100ರಷ್ಟು ಪರಿಣಾಮಕಾರಿ ಎಂದು ಹೇಳಿದ್ದೀರಿ. ನಂತರ ಶೇ 90, 80, 70ರಷ್ಟು ಪರಿಣಾಮಕಾರಿ ಎಂದು ಹೇಳಿದ್ದೀರಿ. ಆದರೆ, ಲಸಿಕೆಯು ಸೋಂಕು ಹರಡುವಿಕೆಯನ್ನು ತಡೆಯುವುದಿಲ್ಲ ಎಂಬುದು ನಮಗೆ ಈಗ ಗೊತ್ತಾಗಿದೆ. ಇದನ್ನು ನೀವು ಮುಚ್ಚಿಟ್ಟಿದ್ದೇಕೆ’ ಎಂದು ಪತ್ರಕರ್ತ ಪ್ರಶ್ನಿಸುತ್ತಿರುವುದು ವಿಡಿಯೊದಲ್ಲಿದೆ. ಹೀಗೆ ಪ್ರಶ್ನೆ ಕೇಳುತ್ತಾ ಸುಮಾರು ದೂರದ ವರೆಗೆ ಪತ್ರಕರ್ತರು ಫೈಜರ್ ಸಿಇಒ ಅನ್ನು ಹಿಂಬಾಲಿಸುತ್ತಾರೆ.

ಪ್ರತಿಪಕ್ಷದವರನ್ನು ತರಾಟೆಗೆ ತೆಗೆದುಕೊಂಡ ರಾಜೀವ್ ಚಂದ್ರಶೇಖರ್

ಫೈಜರ್ ಸಿಇಒ ಪ್ರಶ್ನೆಗಳಿಗೆ ಉತ್ತರಿಸದೇ ತೆರಳುತ್ತಿರುವ ವಿಡಿಯೊವನ್ನು ಟ್ವೀಟ್ ಮಾಡಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಪ್ರತಿಪಕ್ಷದವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪರಿಹಾರದ ಷರತ್ತುಗಳನ್ನು ವಿಧಿಸುವ ಮೂಲಕ ಭಾರತ ಸರ್ಕಾರವನ್ನು ವಂಚಿಸಲು ಫೈಜರ್ ಯತ್ನಿಸಿತ್ತು. ಆದರೆ, ಕಾಂಗ್ರೆಸ್ ನಾಯಕರಾದ ಪಿ. ಚಿದಂಬರಂ, ರಾಹುಲ್ ಗಾಂಧಿ, ಜೈರಾಮ್ ರಮೇಶ್ ಇತರರು ವಿದೇಶಿ ಲಸಿಕೆಗಳನ್ನು ಭಾರತಕ್ಕೆ ಆಮದು ಮಾಡಿಕೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ಹೇರಿದ್ದರು ಎಂದು ಅವರು ಉಲ್ಲೇಖಿಸಿದ್ದಾರೆ.

ದೇಶದಲ್ಲಿ ಕೇವಲ ಕೋವಿಶೀಲ್ಡ್, ಕೋವ್ಯಾಕ್ಸಿನ್ ಮತ್ತು ಸ್ಪುಟ್ನಿಕ್ ವಿ ಎಂಬ ಮೂರು ಲಸಿಕೆಗಳನ್ನು ಮಾತ್ರ ಲಭ್ಯವಾಗುವಂತೆ ಮಾಡಿರುವುದು ಜನರಲ್ಲಿ ಅಚ್ಚರಿಗೆ ಕಾರವಾಗಿದೆ. ಸ್ಪುಟ್ನಿಕ್ ಅನ್ನು ಆರಂಭದ ದಿನಗಳಲ್ಲಿ ಸಣ್ಣ ಪ್ರಮಾಣದಲ್ಲಿ ಆಮದು ಮಾಡಲಾಗಿದೆ ಎಂದು ಚಿದಂಬರಂ 2021ರ ಡಿಸೆಂಬರ್ 27ರಂದು ಟ್ವೀಟ್ ಮಾಡಿದ್ದರು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:03 pm, Fri, 20 January 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ