World Savings Day 2024: ಭಾರತದಲ್ಲಿ ವಿಶ್ವ ಉಳಿತಾಯ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ

ಪ್ರತಿಯೊಬ್ಬ ವ್ಯಕ್ತಿಯೂ ತಾನು ದುಡಿದ ಹಣದಲ್ಲಿ ಸ್ವಲ್ಪ ಹಣವನ್ನು ಭವಿಷ್ಯಕ್ಕಾಗಿ ಎತ್ತಿಡುತ್ತಾನೆ. ಮುಂದಿನ ಭವಿಷ್ಯದ ದೃಷ್ಟಿಯಿಂದ ಉಳಿತಾಯವು ಅತ್ಯಗತ್ಯ. ಹೀಗಾಗಿ ಉಳಿತಾಯ ಮಾಡುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಾಗತಿಕ ಮಟ್ಟದಲ್ಲಿ ವಿಶ್ವ ಉಳಿತಾಯ ದಿನವನ್ನು ಅಕ್ಟೋಬರ್ 31ರಂದು ಆಚರಿಸಲಾಗುತ್ತದೆ. ಆದರೆ ಭಾರತದಲ್ಲಿ ಅಕ್ಟೋಬರ್ 30ರಂದು ವಿಶ್ವ ಉಳಿತಾಯ ದಿನವಾಗಿ ಆಚರಿಸುತ್ತ ಬರಲಾಗುತ್ತಿದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವ ಸೇರಿದಂತೆ ಇನ್ನಿತ್ತರ ಮಾಹಿತಿ ಇಲ್ಲಿದೆ.

World Savings Day 2024: ಭಾರತದಲ್ಲಿ ವಿಶ್ವ ಉಳಿತಾಯ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 30, 2024 | 9:56 AM

ಹಣ ಗಳಿಸುವುದು ಎಷ್ಟು ಕಷ್ಟವೋ, ಅದನ್ನು ಉಳಿಸುವುದು ಇನ್ನೂ ಕಷ್ಟಕರ. ಆದರೆ ಭವಿಷ್ಯದ ದೃಷ್ಟಿಯಿಂದ ಇಂದಿನಿಂದಲೇ ಉಳಿತಾಯದತ್ತ ಗಮನ ಹರಿಸಬೇಕು. ಉಳಿತಾಯದ ಹಣವು ಕಷ್ಟದ ದಿನಗಳಲ್ಲಿ ಸಹಾಯಕ್ಕೆ ಬರುತ್ತದೆ. ಕೈಯಲ್ಲಿ ಒಂದೇ ಒಂದು ರೂಪಾಯಿ ಇಲ್ಲದೇ ಹೋದಲ್ಲಿ ಕಷ್ಟದ ಸಂದರ್ಭವನ್ನು ಎದುರಿಸಲು ಒದ್ದಾಡಬೇಕಾಗುತ್ತದೆ. ಹೀಗಾಗಿ ಪ್ರತಿ ವರ್ಷ ಅಕ್ಟೋಬರ್ 31 ರಂದು ವಿಶ್ವ ಉಳಿತಾಯ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಭಾರತದಲ್ಲಿ ಮಾತ್ರ ಅಕ್ಟೋಬರ್ 30 ರಂದು ಈ ದಿನವನ್ನು ಆಚರಿಸಲಾಗುತ್ತಿದೆ. ಈ ವಿಶ್ವ ಉಳಿತಾಯ ದಿನವನ್ನು ವಿಶ್ವ ಮಿತವ್ಯಯ ದಿನವೆಂದು ಕರೆಯಲಾಗುತ್ತದೆ.

ವಿಶ್ವ ಉಳಿತಾಯ ದಿನದ ಇತಿಹಾಸ

1924ರಲ್ಲಿ ಮೊದಲ ಇಂಟರ್‌ನ್ಯಾಷನಲ್‌ ಥ್ರಿಫ್ಟ್‌ ಕಾಂಗ್ರೆಸ್‌ ಮೊದಲ ಬಾರಿಗೆ ವಿಶ್ವ ಉಳಿತಾಯ ದಿನ(ವಿಶ್ವ ಮಿತವ್ಯಯ ದಿನ)ವನ್ನು ಘೋಷಿಸಿತ್ತು. ಇಟಲಿಯ ಮಿಲನ್‌ನಲ್ಲಿ ಈ ದಿನವನ್ನು ಮೊದಲ ಬಾರಿಗೆ ಘೋಷಿಸಲಾಯಿತು. ಇಟಲಿಯ ಪ್ರೊಫೆಸರ್‌ ಫಿಲಿಪ್ಪೊ ರವಿಝಾ ಅವರು ಅಕ್ಟೋಬರ್‌ 31 ಅನ್ನು ವಿಶ್ವ ಉಳಿತಾಯ ದಿನವೆಂದು ಘೋಷಿಸಿದರು. ವಿಶ್ವ ಯುದ್ಧದ ಬಳಿಕ ಜನರಲ್ಲಿ ಹಣ ಉಳಿತಾಯದ ಅರಿವು ಹೆಚ್ಚಿಸುವ ಸಲುವಾಗಿ ಈ ದಿನಾಚರಣೆ ಆರಂಭಿಲಾಯಿತು.

ಭಾರತದಲ್ಲಿ ಅಕ್ಟೋಬರ್ 30 ರಂದೇ ಈ ದಿನವನ್ನು ಆಚರಿಸುವುದು ಏಕೆ?

1984ರಲ್ಲಿ ಭಾರತದಲ್ಲಿ ಇಂದಿರಾ ಗಾಂಧಿ ಹತ್ಯೆಯಾಯಿತು. ಆ ಬಳಿಕ ವಿಶ್ವ ಉಳಿತಾಯ ದಿನವನ್ನು ಅಕ್ಟೋಬರ್‌ 31ರ ಬದಲು ಅಕ್ಟೋಬರ್‌ 30ಕ್ಕೆ ಆಚರಿಸಲಾಗುತ್ತಿದೆ. ಹೀಗಾಗಿ ಅಕ್ಟೋಬರ್ ತಿಂಗಳ ಕೊನೆಯ ಎರಡು ದಿನಗಳನ್ನು ಉಳಿತಾಯ ದಿನವನ್ನಾಗಿ ಆಚರಿಸುತ್ತ ಬರಲಾಗುತ್ತಿದೆ.

ಇದನ್ನೂ ಓದಿ: 70 ವರ್ಷ ವಯಸ್ಸು ದಾಟಿದ ಜನರಿಗೆ ಆಯುಷ್ಮಾನ್ ಭಾರತ್ ಸ್ಕೀಮ್; ಇಂದು ಚಾಲನೆ ನೀಡಿದ ಪ್ರಧಾನಿ

ವಿಶ್ವ ಉಳಿತಾಯ ದಿನದ ಮಹತ್ವ ಹಾಗೂ ಆಚರಣೆ

ಬ್ಯಾಂಕ್‌ನಲ್ಲಿ ಹಣ ಉಳಿತಾಯ ಮಾಡುವುದು. ಈ ಮೂಲಕ ದೇಶದಲ್ಲಿ ಹಣಕಾಸು ವ್ಯವಸ್ಥೆ ಸರಿಯಾಗಿ ಇರುವಂತೆ ನೋಡಿಕೊಳ್ಳುವುದು. ಅದಲ್ಲದೇ, ಬ್ಯಾಂಕ್‌ನಲ್ಲಿ ಉಳಿತಾಯ ಮಾಡಿದರೆ ಆ ಹಣದ ಸರಿಯಾದ ಬಳಕೆಯಾಗುತ್ತದೆ. ಜನರು ಹಣ ಉಳಿತಾಯ ಮಾಡುವಂತೆ ಮತ್ತು ಬ್ಯಾಂಕ್‌ಗಳ ಕುರಿತು ತಮ್ಮ ಭರವಸೆ ಹೆಚ್ಚಿಸಿಕೊಳ್ಳುವಂತೆ ಮಾಡುವ ಉದ್ದೇಶದಿಂದ ಈ ದಿನವು ಮಹತ್ವದ್ದಾಗಿದೆ. ಈ ದಿನದಂದು ಶಾಲೆಗಳಲ್ಲಿ, ಆಫೀಸ್‌ಗಳಲ್ಲಿ, ಅಸೋಸಿಯೇಷನ್‌ಗಳಲ್ಲಿ ಜನರು ಹಣ ಉಳಿತಾಯದ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ತಿಂಗಳ ಸಂಬಳದಲ್ಲಿ ಹಣ ಉಳಿಸಲು ಇಲ್ಲಿದೆ ಸಿಂಪಲ್ ಟಿಪ್ಸ್

* ನಿಮ್ಮ ಹಣಕಾಸಿನ ಗುರಿಗಳು ಸ್ಪಷ್ಟವಾಗಿರಲಿ. ಯಾವ ಉದ್ದೇಶಕ್ಕೆ ನೀವು ಉಳಿತಾಯ ಮಾಡಲು ಬಯಸುತ್ತೀರಿ ಎಂದು ತಿಳಿದಿರಲಿ.

* ಪ್ರತಿ ತಿಂಗಳು ಹಣ ಯಾವುದಕ್ಕೆಲ್ಲಾ ಖರ್ಚಾಯಿತು ಎನ್ನುವ ಮಾಸಿಕ ಬಜೆಟ್ ತಯಾರಿಸಿ.

* ವೆಚ್ಚದ ಮೇಲೆ ಹಿಡಿತ ಸಾಧಿಸುವ ಮೂಲಕ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ, ತಿಂಗಳ ಖರ್ಚಿನ ಬಗ್ಗೆ ಬರೆದು ಇಡುವುದು ಉತ್ತಮ.

* ವಸ್ತುಗಳನ್ನು ಖರೀದಿ ಮಾಡುವಾಗ ಡಿಸ್ಕೌಂಟ್ಸ್, ಕೂಪನ್ಸ್ ಹಾಗೂ ಕ್ಯಾಶ್ ಬ್ಯಾಕ್ ಆಫರ್ ಗಳನ್ನು ಬಗ್ಗೆ ಹೆಚ್ಚು ಗಮನ ಕೊಡಿ, ಇದರಿಂದ ಹಣವು ಉಳಿಯುತ್ತದೆ.

* ಪ್ರತಿ ತಿಂಗಳ ಸಂಬಳದ ಇಂತಿಷ್ಟು ಮೊತ್ತವು ವೇತನ ಖಾತೆಯಿಂದ ಉಳಿತಾಯ ಖಾತೆಗೆ ನೇರವಾಗಿ ವರ್ಗಾವಣೆ ಆಗುವಂತಿರಲಿ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ