AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPI Inflation: ಸಗಟು ಹಣದುಬ್ಬರ ಜನವರಿಯಲ್ಲಿ 24 ತಿಂಗಳ ಕನಿಷ್ಠಕ್ಕೆ ಇಳಿಕೆ

ಸಗಟು ದರ ಸೂಚ್ಯಂಕ ಆಧಾರಿತ ಹಣದುಬ್ಬರ ಅಥವಾ ಹೋಲ್​ಸೇಲ್ ಪ್ರೈಸ್​ ಇಂಡೆಕ್ಸ್ ಇನ್​ಫ್ಲೇಷನ್ ಜನವರಿಯಲ್ಲಿ 24 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದ್ದು, ಶೇ 4.73 ಆಗಿದೆ.

WPI Inflation: ಸಗಟು ಹಣದುಬ್ಬರ ಜನವರಿಯಲ್ಲಿ 24 ತಿಂಗಳ ಕನಿಷ್ಠಕ್ಕೆ ಇಳಿಕೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Feb 14, 2023 | 3:05 PM

Share

ನವದೆಹಲಿ: ಸಗಟು ದರ ಸೂಚ್ಯಂಕ ಆಧಾರಿತ ಹಣದುಬ್ಬರ (WPI Inflation) ಅಥವಾ ಹೋಲ್​ಸೇಲ್ ಪ್ರೈಸ್​ ಇಂಡೆಕ್ಸ್ ಇನ್​ಫ್ಲೇಷನ್ ಜನವರಿಯಲ್ಲಿ 24 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದ್ದು, ಶೇ 4.73 ಆಗಿದೆ. ಉತ್ಪಾದನಾ ವಸ್ತುಗಳು, ಇಂಧನ ಹಾಗೂ ವಿದ್ಯುತ್ ದರ ಇಳಿಕೆಯ ಪರಿಣಾಮ ಹಣದುಬ್ಬರ ಇಳಿಕೆಯಾಗಿದೆ. 2022ರ ಡಿಸೆಂಬರ್​​ನಲ್ಲಿ ಸಗಟು ದರ ಸೂಚ್ಯಂಕ ಆಧಾರಿತ ಹಣದುಬ್ಬರ ಶೇ 4.95 ಇತ್ತು. 2022ರ ಜನವರಿಯಲ್ಲಿ ಶೇ 13.68 ಇತ್ತು. ಆದಾಗ್ಯೂ, ಆಹಾರ ವಸ್ತುಗಳ ಮೇಲಿನ ಹಣದುಬ್ಬರ ಜನವರಿಯಲ್ಲಿ ಶೇ 2.38ಕ್ಕೆ ಏರಿಕೆಯಾಗಿದೆ. 2022ರ ಡಿಸೆಂಬರ್​​ನಲ್ಲಿ ಅದು ಶೇ (-) 1.25 ಇತ್ತು.

‘ಖನಿಜ ತೈಲಗಳು, ರಾಸಾಯನಿಕಗಳು, ರಾಸಾಯನಿಕ ಉತ್ಪನ್ನಗಳು, ಜವಳಿ, ಕಚ್ಚಾ ಪೆಟ್ರೋಲಿಯಂ, ನೈಸರ್ಗಿಕ ಅನಿಲ, ಆಹಾರೋತ್ಪನ್ನಗಳ ಬೆಲೆಯಲ್ಲಿ ಇಳಿಕೆಯಾಗಿರುವ ಕಾರಣ ಸಗಟು ದರ ಸೂಚ್ಯಂಕ ಆಧಾರಿತ ಹಣದುಬ್ಬರದಲ್ಲಿ ಇಳಿಕೆಯಾಗಿದೆ’ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ತಿಳಿಸಿದೆ.

ಧಾನ್ಯಗಳ ದರ ಆಧಾರಿತ ಹಣದುಬ್ಬರ 2023ರ ಜನವರಿಯಲ್ಲಿ ಶೇ 2.41 ಇದ್ದರೆ, ತರಕಾರಿ ಹಣದುಬ್ಬರ ಶೇ (-) 26.48 ಇತ್ತು. ತೈಲ ಬೀಜಗಳ ಹಣದುಬ್ಬರ ಶೇ (-) 4.22 ಇತ್ತು. ಇಂಧನ ಮತ್ತು ವಿದ್ಯುತ್ ಹಣದುಬ್ಬರ ಶೇ 15.15ಕ್ಕೆ ಇಳಿಕೆಯಾಗಿದೆ. ಇದು ಡಿಸೆಂಬರ್​​​ನಲ್ಲಿ ಶೇ 18.09ರಷ್ಟಿತ್ತು. ಉತ್ಪಾದನಾ ವಸ್ತುಗಳ ಹಣದುಬ್ಬರ ಶೇ 3.37ರಿಂದ ಶೇ 2.99ಕ್ಕೆ ಇಳಿಕೆಯಾಗಿದೆ.

ಇದನ್ನೂ ಓದಿ: Retail Inflation: ಮತ್ತೆ ನಿಯಂತ್ರಣ ತಪ್ಪಿದ ಚಿಲ್ಲರೆ ಹಣದುಬ್ಬರ; 3 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆ

ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಸೋಮವಾರವಷ್ಟೇ 2023ರ ಜನವರಿ ತಿಂಗಳ ಚಿಲ್ಲರೆ ಹಣದುಬ್ಬರ ಪ್ರಮಾಣದ ಮಾಹಿತಿ ನೀಡಿತ್ತು. ಚಿಲ್ಲರೆ ಹಣದುಬ್ಬರ ಪ್ರಮಾಣದ ಮೂರು ತಿಂಗಳ ಗರಿಷ್ಠ ಮಟ್ಟದಲ್ಲಿ, ಅಂದರೆ ಶೇ 6.52 ದಾಖಲಾಗಿತ್ತು. 2022ರ ಡಿಸೆಂಬರ್​ ತಿಂಗಳಿನಲ್ಲಿ ಚಿಲ್ಲರೆ ಹಣದುಬ್ಬರ ಆರ್​​ಬಿಐ ಸಹನೆಯ ಮಿತಿಯ (ಶೇ 6) ಒಳಗೆಯೇ ಇತ್ತು. ಡಿಸೆಂಬರ್​​ನಲ್ಲಿ ಗ್ರಾಹಕ ದರ ಸೂಚ್ಯಂಕ ಆಧಾರಿತ (CPI) ಚಿಲ್ಲರೆ ಹಣದುಬ್ಬರ ಪ್ರಮಾಣ ಒಂದು ವರ್ಷದ ಕನಿಷ್ಠ ಮಟ್ಟಕ್ಕೆ, ಅಂದರೆ ಶೇಕಡಾ 5.72ಕ್ಕೆ ಇಳಿಕೆಯಾಗಿತ್ತು. ಆದರೆ ಜನವರಿಯಲ್ಲಿ ಮತ್ತೆ ಏರಿಕೆಯಾಗಿದೆ. ಚಿಲ್ಲರೆ ಹಣದುಬ್ಬರವನ್ನು ಶೇ 2ರಿಂದ 4ರ ಒಳಗೆ ಇರುವಂತೆ ನೋಡಿಕೊಳ್ಳುವುದು ಆರ್​​ಬಿಐ ಗುರಿಯಾಗಿದೆ. ಹೀಗಾಗಿ ಮತ್ತೊಮ್ಮೆ ಆರ್​ಬಿಐ ರೆಪೊ ದರ ಹೆಚ್ಚಿಸುವ ಆತಂಕ ಎದುರಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ
ಬಿಹಾರ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿರುದ್ಧ ರಾಹುಲ್ ಜಾಥಾ