ಜೊಮಾಟೊದಲ್ಲಿ ಫುಡ್ ಆರ್ಡರ್ ಮತ್ತಷ್ಟು ದುಬಾರಿ; ಪ್ಲಾಟ್​ಫಾರ್ಮ್ ಶುಲ್ಕ ಶೇ 19ರಷ್ಟು ಏರಿಕೆ

Zomato raises platform fees by 19pc from Rs 12.50 to Rs 14.90: ಒಂದು ವರ್ಷದ ಅಂತರದಲ್ಲಿ ಎರಡನೇ ಬಾರಿ ಜೊಮಾಟೊ ಪ್ಲಾಟ್​ಫಾರ್ಮ್ ಫೀ ಏರಿಕೆ ಆಗಿದೆ. 12.50 ರೂನಿಂದ 14.90 ರೂಗೆ ಪ್ಲಾಟ್​ಫಾರ್ಮ್ ಶುಲ್ಕವನ್ನು ಹೆಚ್ಚಿಸಲಾಗಿದೆ. ಗ್ರಾಹಕರ ಯಾವುದೇ ಮೊತ್ತದ ಪ್ರತೀ ಆರ್ಡರ್​ಗೂ ಇದೇ ಪ್ಲಾಟ್​ಫಾರ್ಮ್ ಫೀ ಅನ್ವಯ ಆಗುತ್ತದೆ. ಸ್ವಿಗ್ಗಿಯ ಪ್ಲಾಟ್​ಫಾರ್ಮ್ ಫೀ 14.99 ರೂ ಇದ್ದರೆ, ಮ್ಯಾಜಿಕ್​ಪಿನ್​ನ ಪ್ಲಾಟ್​ಫಾರ್ಮ್ ಫೀ 14.20 ರೂ ಇದೆ.

ಜೊಮಾಟೊದಲ್ಲಿ ಫುಡ್ ಆರ್ಡರ್ ಮತ್ತಷ್ಟು ದುಬಾರಿ; ಪ್ಲಾಟ್​ಫಾರ್ಮ್ ಶುಲ್ಕ ಶೇ 19ರಷ್ಟು ಏರಿಕೆ
ಜೊಮಾಟೊ

Updated on: Mar 20, 2026 | 8:22 PM

ನವದೆಹಲಿ, ಮಾರ್ಚ್ 20: ಫುಡ್ ಡೆಲಿವರಿ ಕಂಪನಿಯಾದ ಜೊಮಾಟೊ ತನ್ನ ಪ್ಲಾಟ್​​ಫಾರ್ಮ್ ಶುಲ್ಕವನ್ನು (Zomato platform fee) ಏರಿಸಿದೆ. 12.50 ರೂ ಇದ್ದ ಜೊಮಾಟೊ ಪ್ಲಾಟ್​ಫಾರ್ಮ್ ಫೀ ಅನ್ನು 14.90 ರೂಗೆ ಏರಿಸಲಾಗಿದೆ. ಒಬ್ಬ ಗ್ರಾಹಕ ನೀಡುವ ಪ್ರತೀ ಆರ್ಡರ್​ಗೆ ಪ್ಲಾಟ್​ಫಾರ್ಮ್ ಫೀ ಅನ್ವಯ ಆಗುತ್ತದೆ. ಇದರಲ್ಲಿ 2.40 ರೂ ಅಥವಾ ಶೇ. 19.2ರಷ್ಟು ಶುಲ್ಕ ಏರಿಕೆ ಆಗಿದೆ.

ಒಂದು ವರ್ಷದೊಳಗೆ ಜೊಮಾಟೊ ಎರಡನೇ ಬಾರಿ ತನ್ನ ಪ್ಲಾಟ್​ಫಾರ್ಮ್ ಫೀ ಏರಿಸಿರುವುದು. 2025ರ ಸೆಪ್ಟೆಂಬರ್ ತಿಂಗಳಲ್ಲಿ ಹೆಚ್ಚಳ ಮಾಡಲಾಗಿತ್ತು. ಈ ಪ್ಲಾಟ್​ಫಾರ್ಮ್ ಫೀ ಮೇಲೆ ಜಿಎಸ್​ಟಿ ಕೂಡ ಅನ್ವಯ ಆಗುತ್ತದೆ. ಎಲ್​ಪಿಜಿ ಬೆಲೆ ಏರಿಕೆಯ ಬಿಸಿಯಲ್ಲಿರುವ ಗ್ರಾಹಕರಿಗೆ ಈಗ ಫುಡ್ ಡೆಲಿವರಿ ಪ್ಲಾಟ್​ಫಾರ್ಮ್​ನಲ್ಲೂ ದರ ಏರಿಕೆಯ ಶಾಕ್ ಸಿಗಲಿದೆ.

ಇದನ್ನೂ ಓದಿ: ಆಫೀಸ್ ಕಾರ್ಡ್ ಬಳಕೆ, ಪ್ಯಾನ್ ಕಡ್ಡಾಯ, ಅಡ್ರೆಸ್ ಪ್ರೂಫ್ ಇತ್ಯಾದಿ ಗಮನಿಸಬೇಕಾದ ಹೊಸ ಕ್ರೆಡಿಟ್ ಕಾರ್ಡ್ ನಿಯಮಗಳು

ಎರಡನೇ ಅತಿದೊಡ್ಡ ಫುಡ್ ಡೆಲಿವರಿ ಆ್ಯಪ್ ಆಗಿರುವ ಸ್ವಿಗ್ಗಿಯಲ್ಲಿ ಪ್ಲಾಟ್​ಫಾರ್ಮ್ ಫೀ 14.99 ರೂ ಇದೆ. ಮೂರನೇ ಅತಿದೊಡ್ಡ ಫುಡ್ ಡೆಲಿವರಿ ಆ್ಯಪ್ ಆದ ಮ್ಯಾಜಿಕ್​ಪಿನ್​ನ ಪ್ಲಾಟ್​ಫಾರ್ಮ್ ಫೀ 14.20 ರೂ ಇದೆ. ಸ್ವಿಗ್ಗಿ ಮತ್ತು ಜೊಮಾಟೊ ಬಹುತೇಕ ಸಮಾನ ಪ್ಲಾಟ್​ಫಾರ್ಮ್ ಫೀ ಹೊಂದಿವೆ. ಮ್ಯಾಜಿಕ್​ಪಿನ್ ಸ್ವಲ್ಪ ಕಡಿಮೆ ಶುಲ್ಕವನ್ನು ವಿಧಿಸುತ್ತಿದೆ.

ಫುಡ್ ಡೆಲಿವರಿ ಪ್ಲಾಟ್​ಫಾರ್ಮ್​ಗಳು ಗ್ರಾಹಕರಿಗೆ ಯಾವೆಲ್ಲಾ ಶುಲ್ಕ ವಿಧಿಸುತ್ತವೆ?

  • ಪ್ಲಾಟ್​ಫಾರ್ಮ್ ಫೀ
  • ಡೆಲಿವರಿ ಪಾರ್ಟ್ನರ್ ಫೀ
  • ಜಿಎಸ್​ಟಿ
  • ರೆಸ್ಟೋರೆಂಟ್ ಪ್ಯಾಕಿಂಗ್ ಚಾರ್ಜಸ್

ಕೆಲ ಪ್ಲಾಟ್​ಫಾರ್ಮ್​ಗಳು ಬೇರೆ ಶುಲ್ಕ ಹಾಕಬಹುದು. ಉದಾಹರಣೆಗೆ, ಜೊಮಾಟೊ ಸಂಸ್ಥೆ ಫೀಡಿಂಗ್ ಇಂಡಿಯಾ ಸ್ಕೀಮ್​ಗೆ ಡೊನೇಶನ್ ಆಗಿ ಪ್ರತೀ ಆರ್ಡರ್​ಗೆ 4 ರೂ ಸಂಗ್ರಹಿಸುತ್ತದೆ. ಹಾಗೆಯೇ, ಸರ್ಜಿಂಗ್ ಪ್ರೈಸ್ ಅನ್ನೂ ವಿಧಿಸುತ್ತವೆ. ಮೇಲೆ ತಿಳಿಸಿದ ನಾಲ್ಕು ಶುಲ್ಕಗಳಲ್ಲಿ ಜಿಎಸ್​ಟಿಯು ಸರ್ಕಾರಕ್ಕೆ ಹೋಗುತ್ತದೆ. ರೆಸ್ಟೋರೆಂಟ್ ಪ್ಯಾಕಿಂಗ್ ಶುಲ್ಕವು ಆಯಾ ರೆಸ್ಟೋರೆಂಟ್​ಗೆ ಸಂದಾಯವಾಗುತ್ತದೆ.

ಇದನ್ನೂ ಓದಿ: ಪ್ರೀಮಿಯಮ್ ಪೆಟ್ರೋಲ್ ಬೆಲೆ 2 ರೂ ಹೆಚ್ಚಳ; ಮಾಮೂಲಿ ಪೆಟ್ರೋಲ್ ದರದಲ್ಲಿ ಇಲ್ಲ ಬದಲಾವಣೆ

ಇದರ ಜೊತೆಗೆ ಫುಡ್ ಡೆಲಿವರಿ ಆ್ಯಪ್​ಗಳು ತಮ್ಮ ರೆಸ್ಟೋರೆಂಟ್ ಪಾರ್ಟ್ನರ್​ಗಳಿಂದ ಕಮಿಷನ್ ಫೀಸ್ ಕೂಡ ಸಂಗ್ರಹಿಸುತ್ತವೆ. ಶೇ. 30ಕ್ಕಿಂತಲೂ ಹೆಚ್ಚಿನ ಕಮಿಷನ್ ಅನ್ನು ರೆಸ್ಟೋರೆಂಟ್​ಗಳು ನೀಡುತ್ತವೆ. ರೆಸ್ಟೋರೆಂಟ್​ಗೆ ಹೋಗಿ ನೀವು 250 ರೂ ಮೊತ್ತದ ತಿಂಡಿಯನ್ನು ಪ್ಯಾಕ್ ಮಾಡಿ ತರಲು ಆಗುವ ವೆಚ್ಚಕ್ಕೆ ಹೋಲಿಸಿದರೆ ಅದೇ ತಿಂಡಿಯನ್ನು ಆ್ಯಪ್ ಮೂಲಕ ತರಿಸಿಕೊಂಡರೆ 350 ರೂಗಿಂತಲೂ ಹೆಚ್ಚು ವೆಚ್ಚವಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us