ನಾಯಂಡಹಳ್ಳಿ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ

ಬೆಂಗಳೂರು: ನಾಯಂಡಹಳ್ಳಿ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ನಾಯಂಡಹಳ್ಳಿಯ ವಿಶ್ವಪ್ರಿಯಾ ಅಪಾರ್ಟ್ಮೆಂಟ್ ಮುಂಭಾಗದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಚಾಲಕ ಹಾಗೂ ಇತರರು ವಾಹನದ ಗಾಜು ಒಡೆದು ಹೊರಬಂದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾದರು. ಸದ್ಯ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಅನ್ನೋ ಮಾಹಿತಿ ಲಾಭ್ಯವಾಗಿದೆ.

ಕಾರಿನಲ್ಲಿ ಮೂವರು ಪ್ರಯಾಣ ಮಾಡ್ತಿದ್ರು ಎಂದು ತಿಳಿದುಬಂದಿದ್ದು ಈ ವೇಳೆ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಈ ನಡುವೆ, ಕಾರಿನ ಡೋರ್ ಸಂಪೂರ್ಣವಾಗಿ ಲಾಕ್ ಆಗಿದ್ದ ಹಿನ್ನೆಲೆಯಲ್ಲಿ ಪ್ರಯಾಣಿಕರು ಗಾಜು ಒಡೆದು ಕಾರಿನಿಂದ ತಪ್ಪಿಸಿಕೊಂಡಿದ್ದಾರೆ.

ಸ್ಥಳಕ್ಕೆ ಬಂದಿರುವ ಟ್ರಾಫಿಕ್ ಪೊಲೀಸರು ಟೌವ್ ವಾಹನದ ಸಹಾಯದಿಂದ ಕಾರನ್ನು ರಸ್ತೆಯ ಬದಿಯಲ್ಲಿ ನಿಲ್ಲಿಸಿದ್ದಾರೆ. ಕಾರಿನಲ್ಲಿ ತಾಯಿ, ಮಗ ಹಾಗೂ ಪತ್ನಿ ರಾಮನಗರಕ್ಕೆ ಪ್ರಯಾಣ ಮಾಡ್ತಿದ್ರು ಎಂಬ ಮಾಹಿತಿ ಸಿಕ್ಕಿದೆ.

Related Tags:

Related Posts :

Category:

error: Content is protected !!