ನೆರೆಹಾನಿ ಅಧ್ಯಯನಕ್ಕೆ ಆಗಮಿಸಿದ ಕೇಂದ್ರ ತಂಡ, ಸಿಎಮ್​ರೊಂದಿಗೆ ಭೇಟಿ

  • TV9 Web Team
  • Published On - 17:49 PM, 7 Sep 2020

ರಾಜ್ಯದಲ್ಲಿ ನೆರೆಯಿಂದಾಗಿ ಉಂಟಾಗಿರುವ ಹಾನಿಯನ್ನು ಅಧ್ಯಯನಕ್ಕೆ ಮಾಡಲು ಕೇಂದ್ರ ತಂಡವೊಂದು ರಾಜ್ಯಕ್ಕೆ ಆಗಮಿಸಿದ್ದು ನೆರೆಪೀಡಿತ ಪ್ರದೇಶಗಳಿಗೆ ತೆರಳುವ ಮುನ್ನ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಇತರ ಕೆಲ ಸಚಿವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಸಮಾಲೋಚನೆ ನಡೆಸಿತು.

ಕೇಂದ್ರ ಗೃಹ ಇಲಾಖೆ ಜಂಟಿ ಕಾರ್ಯದರ್ಶಿ ಕೆ.ವಿ.ಪ್ರತಾಪ್ ನೇತೃತ್ವದ ಅಧ್ಯಯನ ತಂಡ ನಾಳೆಯಿಂದ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿಲಿದೆ. ಬೆಳಗಾವಿ. ಕೊಡಗು, ಬಾಗಲಕೋಟೆ, ಮತ್ತ್ತು ವಿಜಯಪುರ ಜಿಲ್ಲೆಗಳಿಗೆ ತಂಡ ಭೇಟಿ ನೀಡಲಿದೆ.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸಚಿವರಾದ ರಮೇಶ್ ಜಾರಕಿಹೊಳಿ, ಗೋಪಾಲಯ್ಯ, ಆರ್ ಅಶೋಕ, ಬಿ.ಸಿ.ಪಾಟೀಲ್, ಜೆ.ಸಿ. ಮಾಧುಸ್ವಾಮಿ ಸಭೆಯಲ್ಲಿ ಉಪಸ್ಥಿತರಿದ್ದರು