ಸುತ್ತೂರು, ಮುಡುಕುತೊರೆ ಮಲ್ಲಿಕಾರ್ಜುನಸ್ವಾಮಿ ದೇಗುಲ ಜೀರ್ಣೋದ್ಧಾರಕ್ಕೆ CM ಯಡಿಯೂರಪ್ಪ ಚಾಲನೆ

ಸಿಎಂ ಬಿಎಸ್ ಯಡಿಯೂರಪ್ಪ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನ ಮುಡುಕುತೊರೆ ಮಲ್ಲಿಕಾರ್ಜುನಸ್ವಾಮಿ ದರ್ಶನ ಪಡೆದು ದೇಗುಲ ಸಂಕೀರ್ಣ, ಜೀರ್ಣೋದ್ಧಾರಕ್ಕೆ ಚಾಲನೆ ನೀಡಿದ್ದಾರೆ.

  • Ayesha Banu
  • Published On - 14:13 PM, 25 Nov 2020
ಮುಡುಕುತೊರೆ ಮಲ್ಲಿಕಾರ್ಜುನಸ್ವಾಮಿ ದರ್ಶನ ಪಡೆದ ಸಿಎಂ

ಮೈಸೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಮುಡುಕುತೊರೆ ಮಲ್ಲಿಕಾರ್ಜುನಸ್ವಾಮಿ ದರ್ಶನ ಪಡೆದು ದೇಗುಲ ಸಂಕೀರ್ಣ, ಜೀರ್ಣೋದ್ಧಾರಕ್ಕೆ ಚಾಲನೆ ನೀಡಿದ್ದಾರೆ. ಈ ವೇಳೆ ಡಿಸಿಎಂ ಗೋವಿಂದ ಕಾರಜೋಳ, ಸಚಿವ ಸೋಮಶೇಖರ್, ಸುತ್ತೂರು ಸ್ವಾಮೀಜಿ ಸೇರಿದಂತರ ಹಲವರು ಉಪಸ್ಥಿತರಿದ್ರು.

ಇನ್ನು ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಮಠಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿದ್ದು ಸುತ್ತೂರು ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಸುತ್ತೂರು ಮಠದ ಬಳಿ ವಿವಿಧ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿದ್ರು. ಅತಿಥಿ ಗೃಹ, ಗ್ರಾಮದೇವತೆ ದೊಡ್ಡಮ್ಮತಾಯಿ ದೇವಸ್ಥಾನಕ್ಕೆ ಸಿಎಂ ಶಿಲಾನ್ಯಾಸ ನೆರವೇರಿಸಿದ್ದಾರೆ. ಜನಪದ ಕಲಾತಂಡಗಳು ಸಿಎಂಗೆ ಸ್ವಾಗತಿಸಿದವು.