ಕೊವಿಡ್-19 ಸಂಬಂಧಿತ ಸಾವು ಇಳಿಮುಖ, ಹೊಸ ಪ್ರಕರಣಗಳು ಏರುಮುಖ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗುರುವಾರ ಸಾಯಂಕಾಲ ಲಭ್ಯವಾಗಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ

  • Arun Belly
  • Published On - 22:48 PM, 29 Oct 2020

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗುರುವಾರ ಸಾಯಂಕಾಲ ಲಭ್ಯವಾಗಿರುವ ಮಾಹಿತಿಯ ಪ್ರಕಾರ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 45 ಜನ ಸಾವನ್ನಪ್ಪಿದ್ದಾರೆ ಮತ್ತು ಹೊಸದಾಗಿ 4,025 ಜನರಲ್ಲಿ ಸೋಂಕು ದೃಢಪಟ್ಟಿದೆ.

ರಾಜ್ಯದಲ್ಲಿ ಕೊವಿಡ್-19 ವ್ಯಾಧಿಯಿಂದ ಇದುವರೆಗೆ 11,091 ಜನ ಬಲಿಯಾಗಿದ್ದು ಸೋಂಕಿತರ ಸಂಖ್ಯೆ 8,16,809 ತಲುಪಿದೆ. ಅವರಲ್ಲಿ 7,41,219 ಜನ ಗುಣಮುಖರಾಗಿದ್ದಾರೆ ಮತ್ತು 64,480 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾಗೆಯೇ, ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಸೋಂಕಿಗೆ 19 ಜನ ಮರಣಿಸಿದ್ದಾರೆ ಮತ್ತು 2,175 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇಂದಿನವರೆಗೆ ನಗರದಲ್ಲಿ ಕೊರೊನಾಗೆ 3,820 ಜನ ಬಲಿಯಾಗಿದ್ದು ಸೋಂಕಿತರ ಸಂಖ್ಯೆ 3,33,037ಕ್ಕೇರಿದೆ.

ಸೋಂಕಿತರ ಪೈಕಿ 2,87,678 ಜನ ಗುಣಮುಖರಾಗಿದ್ದಾರೆ ಮತ್ತು ಮಿಕ್ಕಿದ 41,538 ಸೋಂಕಿತರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆಯೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದೊರೆತಿರುವ ಮಾಹಿತಿ ತಿಳಿಸುತ್ತದೆ.