ಜಗತ್ತಿನೆಲ್ಲೆಡೆಯ ಸುದ್ದಿ ಕ್ಷಣಾರ್ಧದಲ್ಲಿ ಹರಿದು ಬಂದು ಅಂಗೈ ಸೇರುವಾಗ ಯಾವುದರತ್ತ ಕಣ್ಣು ಹಾಯಿಸಬೇಕು ಎಂಬ ಗೊಂದಲ ಸಹಜ.. ಎಷ್ಟೋ ಬಾರಿ ಸುದ್ದಿಯ ಹೆಸರಿನಲ್ಲಿ ಅಸಂಗತ ಸಂಗತಿಗಳೂ ತೇಲಿ ಬರುತ್ತವೆ. ಅವುಗಳನ್ನು ಸೋಸುವುದೇ ಹರಸಾಹಸ. ನಮ್ಮ ಓದುಗರನ್ನು ಇಂತಹ ಗೊಂದಲಗಳಿಂದ ಪಾರು ಮಾಡಲೆಂದೇ ಪ್ರತಿನಿತ್ಯ Live Blog ಮೂಲಕ ಆಯಾ ಕ್ಷಣದ ಮುಖ್ಯಾಂಶಗಳನ್ನು ನೀಡುವ ಪ್ರಯತ್ನ ಮಾಡುತ್ತಿದ್ದೇವೆ. ಇದು ನಿಮಗಿಷ್ಟವಾಗಿದೆ ಎನ್ನುವ ನಂಬಿಕೆ ನಮ್ಮದು.. ಬನ್ನಿ ಇಂದಿನ ಸುದ್ದಿಯ ಹರಿವನ್ನು ನೋಡೋಣ.
xಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಸಕಲ ಸಿದ್ಧತೆಗಳು ನಡೆದಿದ್ದು, ಕೊರೊನಾ ಸಾಂಕ್ರಾಮಿಕ ರೋಗದಿಂದ ಎಂದಿಗಿಂತಾ ಸರಳವಾಗಿ ಪದಗ್ರಹಣ ಸಮಾರಂಭ ನಡೆಯಲಿದೆ. ಜೊತೆಗೆ ಉಪಾಧ್ಯಕ್ಷರಾಗಿ ಕಮಲಾ ಹ್ಯಾರಿಸ್ ಕೂಡ ಇಂದು ಪ್ರಮಾಣ ಸ್ವೀಕರಿಸಲಿದ್ದಾರೆ.