ಓರ್ವ ಮುಸ್ಲಿಂ ಯುವಕ ತನ್ನ ಸೈಕಲ್ ಮೇಲೆ ‘ಜೈ ಭೀಮ್’ ಸ್ಟಿಕ್ಕರ್ ಅಂಟಿಸಿದ್ದ. ಇದನ್ನು ಕಂಡ ನಾಯಕ ಸಮುದಾಯದ ಯುವಕ ಸ್ಟಿಕ್ಕರ್ ತೆಗೆಯುವಂತೆ ಒತ್ತಾಯಿಸಿದ್ದಾನೆ. ಈ ವೇಳೆ ಎರಡು ಸಮುದಾಯದ ಯುವಕರ ನಡುವೆ ಮಾತಿನ ಚಕಮಕಿ ಶುರುವಾಗಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.
545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಸಿಲುಕಿ ಅರೆಸ್ಟ್ ಆಗಿರುವ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಸೇರಿದಂತೆ ಐವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕಲಬುರಗಿ ಮೂರನೇ ಜೆಎಂಎಫ್ಸಿ ನ್ಯಾಯಾಲಯ ತಿರಸ್ಕರಿಸಿ ಆದೇಶಿಸಿದೆ.
ಅತ್ತಿಗೆರೆ ಗ್ರಾಮದಲ್ಲಿ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ದಲಿತ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಇನ್ನೊಂದೆಡೆ ಮಳೆಯ ಆರ್ಭಟಕ್ಕೆ ಸ್ಮಶಾನವೇ ಕೊಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
CH Pratap Reddy: ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿರುವ ಸಿ.ಹೆಚ್. ಪ್ರತಾಪ್ ರೆಡ್ಡಿ ಕಾನೂನು ಸುವ್ಯವಸ್ಥೆಯಲ್ಲಿನ ಸಮಸ್ಯೆಗಳು, ಡ್ರಗ್ಸ್ ಹಾವಳಿ, ಪೂಜಾ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ಬಳಕೆ ವಿವಾದ, ನಗರದಲ್ಲಿ ಟ್ರಾಫಿಕ್ ಅವ್ಯವಸ್ಥೆ-ಸಾಲು ಸಾಲು ಸವಾಲು ಪರಿಹರಿಸಲು ಹೊಸ ಕಮಿಷನರ್ ಯಾವ ರೀತಿಯ ತಂತ್ರ ಹೆಣೆಯುತ್ತಾರೆ?
ನೀರು ಕುಡಿಯಲೆಂದು ಕೃಷಿ ಹೊಂಡಕ್ಕೆ ಇಳಿದ ಮೂವರು ಬಾಲಕಿಯರು ನೀರು ಪಾಲಾದ ಘಟನೆ ಗದಗದಲ್ಲಿ ನಡೆದಿದೆ. ಅದರಂತೆ ಮದುವೆಯ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕದ ಛಾಯೆ ಆವರಿಸಿದೆ.
ಕೊಲೆ ಮಾಡಿ ತಲೆಮರೆಸಿಕೊಳ್ಳಲು ಯತ್ನಿಸಿದ್ದ ಅಭಿಷೇಕ್ನನ್ನು ಬಂಧಿಸಿಲಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಮಳವಳ್ಳಿ ಕಡೆಯಿಂದ ಮದ್ದೂರು ಕಡೆಗೆ ತೆರಳುವ ವೇಳೆ ಪಾಂಡವಪುರ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸರ ವಾಹನ ನಿಯಂತ್ರಣ ತಪ್ಪಿ ಮಳವಳ್ಳಿ-ಮದ್ದೂರು ಹೆದ್ದಾರಿ ಬದಿ ಇರುವ ನಾಲೆಗೆ ನುಗ್ಗಿ ಅವಘಡ ಸಂಭವಿಸಿದೆ. ಸದ್ಯ ಸ್ಥಳೀಯರು ಇಬ್ಬರು ಪೊಲೀಸರನ್ನು ರಕ್ಷಿಸಿ, ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿದ್ದಾರೆ.
ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ 3ನೇ ಸೆಮ್ನಲ್ಲಿ ಓದುತ್ತಿದ್ದ ಸಂದೀಪ್ಗೆ ಮೇ 13ರಂದು 3ನೇ ಸೆಮಿಸ್ಟರ್ ಪರೀಕ್ಷೆ ಮುಗಿದಿತ್ತು. ವಿದ್ಯಾರ್ಥಿ ಸಂದೀಪ್ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಶಿವಮೊಗ್ಗದ ವಿನೋಬ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
20 ಲಕ್ಷ ಮೌಲ್ಯದ ಡ್ರಗ್ಸ್, 3.23 ಕೆಜಿ ವೀಡ್ ಆಯಿಲ್, 1.62 ಕೆಜಿ ಗಾಂಜ, 1 ಎಲೆಕ್ಟ್ರಾನಿಕ್ ತಕ್ಕಡಿ, 5 ಮೊಬೈಕ್ ಫೋನ್ಗಳು ವಶಕ್ಕೆ ಪಡೆಯಲಾಗಿದೆ. ಪೊಷಕರು ಪಾಕೆಟ್ ಮನಿಗಾಗಿ ಕೊಡುತ್ತಿದ್ದ ಹಣದಲ್ಲಿ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದರು.
ಬಾಲ್ಯದಿಂದಲೇ ಸಾಲು ಸಾಲು ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಯಲಹಂಕ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಸ್ತೆ ಅಪಘಾತದಲ್ಲಿ ತನ್ನ ಪ್ರಿಯಕರ ಸಾವನ್ನಪ್ಪಿದ ಆಘಾತದಲ್ಲೇ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡು ಸಾವಿನಲ್ಲೂ ಒಂದಾಗಿದ್ದಾಳೆ. ತುಮಕೂರಿನಲ್ಲಿ ಇಂಥ ಮನಕಲಕುವ ಘಟನೆ ನಡೆದಿದೆ.
ಬಾಗಲಕೋಟೆಯಲ್ಲಿ ನಡೆದ ವಕೀಲೆ ಮೇಲೆ ಹಲ್ಲೆ ಪ್ರಕರಣ ಸಂಬಂಧ ವಕೀಲರು ಒಗ್ಗಟ್ಟು ಪ್ರದರ್ಶಿಸಿದ್ದು, ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಬೆಂಕಿಯಲ್ಲಿ ಬೆಂದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ವೃದ್ಧ ಸಾವನ್ನಪ್ಪಿದ್ದಾರೆ. 1 ಎಕರೆ ಜಮೀನಿಗಾಗಿ ನಡೆದಿದ್ದ ಜಗಳದ ಪ್ರಕರಣ ಇದಾಗಿದೆ.
ಪ್ರಿಯಕರನ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದ್ದ ಸುಷ್ಮಾ, ಅಂದಿನಿಂದ ಧುನುಷ್ ಸಾವಿನ ಯೋಚನೆಯಲ್ಲಿಯೇ ದುಃಖಿಸುತ್ತಿದ್ದಳು. ಧನುಷ್ ಸಾವಿನಿಂದ ನೊಂದು ನಿನ್ನೆ ಯುವತಿ ಸುಷ್ಮಾಳು ಆತ್ನಹತ್ಯೆ ಮಾಡಿಕೊಂಡಿದ್ದಾಳೆ.
ಇಬ್ಬರಿಗೂ ತಲೆಖಾನ್ ಮೂಲದ ಒಂದೇ ಮಹಿಳೆ ಜೊತೆ ಅನೈತಿಕ ಸಂಬಂಧವಿತ್ತು. ಇದೇ ಕಾರಣಕ್ಕೆ ಬಸವರಾಜ್ನನ್ನು ಕೊಲ್ಲಬೇಕು ಅಂತ ಜಗದೀಶ್, ಜಗದೀಶ್ನನ್ನ ಕೊಲ್ಲಬೇಕು ಅಂತ ಮೃತ ಬಸವರಾಜ್ ಪ್ಲಾನ್ ಮಾಡಿದ್ದರು.
ರಸ್ತೆ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿ ಮೇಲೆ ಲಾರಿ ಹರಿದ ಪರಿಣಾಮ, ಲಾರಿ ಚಕ್ರದಡಿ ಸಿಲುಕಿ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಘಟನೆ ಬಳಿಕ ಸ್ಥಳಕ್ಕೆ ಆಗಮಿಸಿದ ಬೆಸ್ಕಾಂನ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ ಮೃತದೇಹ ಅಂಬೇಡ್ಕರ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಮೃತರ ಕುಟುಂಬಸ್ಥರ ಪತ್ತೆಗಾಗಿ ಹೆಬ್ಬಾಳ ಪೊಲೀಸರು ಮುಂದಾಗಿದ್ದಾರೆ.
ಬೆಂಕಿ ಹೊತ್ತಿಕೊಂಡ ಸ್ಥಳಕ್ಕೆ 7 ಅಗ್ನಿಶಾಮಕ ವಾಹನಗಳು ಆಗಮಿಸಿ, ಬೆಂಕಿ ಆರಿಸುವ ಪ್ರಯತ್ನ ಮಾಡಿದವು. ಆದರೆ, ಅಷ್ಟರಲ್ಲಾಗಲೇ 20ಕ್ಕೂ ಹೆಚ್ಚು ಹಸುಗಳು ಸಜೀವ ದಹನವಾಗಿದ್ದವು
ಬಿಬಿಎಂಪಿ ಕಸದ ಲಾರಿ ಹರಿದು ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಥಣಿಸಂದ್ರ ರೈಲ್ವೇ ಮೇಲ್ಸೇತುವೆ ಬಳಿ ನಡೆದಿದೆ. ಚಿಕ್ಕಜಾಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ 2ತಿಂಗಳಲ್ಲಿ ಕಸದ ಲಾರಿ ನಾಲ್ಕು ಮಂದಿಯನ್ನು ಬಲಿ ಪಡೆದುಕೊಂಡಿದೆ.