AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಲಕ್ನೋದಲ್ಲಿ ಓರ್ವ ಸಾವು; 8 ತಿಂಗಳ ಮಗು ಸೇರಿ ಐವರಿಗೆ ಗಾಯ

ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಘಟನೆಯಲ್ಲಿ ಸಾವನ್ನಪ್ಪಿದವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

Crime News: ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಲಕ್ನೋದಲ್ಲಿ ಓರ್ವ ಸಾವು; 8 ತಿಂಗಳ ಮಗು ಸೇರಿ ಐವರಿಗೆ ಗಾಯ
ಸ್ಫೋಟ
TV9 Web
| Edited By: |

Updated on: Oct 04, 2022 | 2:07 PM

Share

ಲಕ್ನೋ: ಅಡುಗೆ ಮನೆಯಲ್ಲಿ ಗ್ಯಾಸ್ ಸಿಲಿಂಡರ್ (Gas Cylinder) ಸ್ಫೋಟಗೊಂಡು 8 ತಿಂಗಳ ಮಗು ಸೇರಿದಂತೆ ಕುಟುಂಬದ ಐವರಿಗೆ ಗಂಭೀರವಾದ ಸುಟ್ಟ ಗಾಯಗಳಾಗಿರುವ ಘಟನೆ ಲಕ್ನೋದಲ್ಲಿ (Lucknow) ನಡೆದಿದೆ. ಈ ದುರ್ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಲಕ್ನೋದ ‘ಬಕ್ಷಿ ಕಾ ತಲಾಬ್’ (ಬಿಕೆಟಿ) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಸಂಜೆ ಈ ಘಟನೆ ನಡೆದಿದೆ.

ಗಾಯಗೊಂಡವರಲ್ಲಿ 8 ತಿಂಗಳ ಗಂಡು ಮಗು ಮತ್ತು ಇಬ್ಬರು ಮಹಿಳೆಯರು ಸೇರಿದ್ದಾರೆ. ಸಾವನ್ನಪ್ಪಿದ ವ್ಯಕ್ತಿಯನ್ನು 30 ವರ್ಷದ ಜುಬೈರ್ ಎಂದು ಗುರುತಿಸಲಾಗಿದೆ. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸಲ್ಮಾನ್ (25), ಸೈಫ್ (17), ಸಮರ್ (8 ತಿಂಗಳು), ಶಬ್ನಮ್ (35) ಮತ್ತು ಜಾಕಿರಾ (50) ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಕೆಜಿಎಂಯು ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Breaking News: ಅಲಿಗಢದ ಮಾಂಸದ ಕಾರ್ಖಾನೆಯಲ್ಲಿ ಅಮೋನಿಯಾ ಗ್ಯಾಸ್ ಸೋರಿಕೆ; ಓರ್ವ ಮಹಿಳೆ ಸಾವು, 65 ಜನರು ಅಸ್ವಸ್ಥ

ಈ ಘಟನೆ ಕುರಿತು ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ರಕ್ಷಿಸಿದ್ದಾರೆ. ಗ್ಯಾಸ್ ಸಿಲಿಂಡರ್ ಸ್ಫೋಟದಿಂದಾಗಿ ಅಕ್ಕಪಕ್ಕದ ಮನೆಗಳಿಗೂ ಹಾನಿಯಾಗಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಈ ಘಟನೆಯಲ್ಲಿ ಸಾವನ್ನಪ್ಪಿದವರ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದೇ ರೀತಿ ಈ ವರ್ಷ ಜುಲೈನಲ್ಲಿ ಪಂಜಾಬ್‌ನ ಫಜಿಲ್ಕಾ ಜಿಲ್ಲೆಯ ಜಲಾಲಾಬಾದ್ ಪ್ರದೇಶದಲ್ಲಿ ಮದುವೆ ಸಮಾರಂಭದ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ವರು ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದರು. ಮೇ ತಿಂಗಳಲ್ಲಿ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಸಿಲಿಂಡರ್ ಸ್ಫೋಟದಿಂದಾಗಿ ಮನೆಯ ಗೋಡೆ ಕುಸಿದು 4 ಜನರು ಸಾವನ್ನಪ್ಪಿದ್ದರು. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಪೋಟ: ಇಬ್ಬರಿಗೆ ಗಂಭೀರ ಗಾಯ, ಓರ್ವನ ಸ್ಥಿತಿ ಚಿಂತಾಜನಕ

ಈ ವರ್ಷದ ಮಾರ್ಚ್‌ನಲ್ಲಿ ರಾಷ್ಟ್ರ ರಾಜಧಾನಿಯ ರಂಜೀತ್ ನಗರ ಪ್ರದೇಶದಲ್ಲಿ ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಗಾಯಗೊಂಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್​​ ಲಕ್ಷ್ಮೀ!
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ