10 ವರ್ಷ ಬಾಲಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ತಾಯಿ, ರೌಡಿ ಶೀಟರ್ ಹಾಗೂ ಆತನ ಪ್ರೇಯಸಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ 10 ವರ್ಷದ ಬಾಲಕನ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹತ್ವದ ತಿರುವು ಲಭ್ಯವಾಗಿದೆ. ತನ್ನ ತಾಯಿಯ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ತಾಯಿ, ರೌಡಿ ಶೀಟರ್ ಹಾಗೂ ಆತನ ಪ್ರೇಯಸಿ ಸೇರಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

10 ವರ್ಷ ಬಾಲಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ತಾಯಿ, ರೌಡಿ ಶೀಟರ್ ಹಾಗೂ ಆತನ ಪ್ರೇಯಸಿಯನ್ನು ಬಂಧಿಸಿದ ಪೊಲೀಸರು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: shivaprasad.hs

Updated on: Sep 10, 2021 | 1:24 PM

ಚಿತ್ರಹಿಂಸೆ ನೀಡಿ 10 ವರ್ಷದ ಬಾಲಕನ ಕೊಲೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ತಾಯಿ ಹಾಗೂ ರೌಡಿ ಶೀಟರ್ ಜೊತೆಗಿನ ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಚಿತ್ರಹಿಂಸೆ ನೀಡಿ ಬಾಲಕನನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನ ಮೈಕೋಲೇಔಟ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಾಲಕನ ತಾಯಿ, ರೌಡಿಶೀಟರ್ ಹಾಗೂ ಆತನ ಪ್ರೇಯಸಿ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಬಾಲಕನ ತಾಯಿಯೊಂದಿಗೆ ರೌಡಿಶೀಟರ್ ಅಕ್ರಮ ಸಂಬಂಧ ಹೊಂದಿದ್ದ. ಅದನ್ನು ಪ್ರಶ್ನಿಸಿದ್ದಕ್ಕೆ ಪೈಪ್​ನಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ತಾಯಿ, ರೌಡಿಶೀಟರ್, ಆತನ ಪ್ರೇಯಸಿ ಸೇರಿ ಬಾಲಕನ ಹತ್ಯೆ ನಡೆಸಿದ್ದು, ಶವವನ್ನು ರೌಡಿಶೀಟರ್ ಹಾಗೂ ಆತನ ಪ್ರೇಯಸಿ ಕಾರಿನಲ್ಲಿ ಕೊಂಡೊಯ್ದು ತಮಿಳುನಾಡಿನ ನಿರ್ಜನ ಪ್ರದೇಶದಲ್ಲಿ ಎಸೆದಿದ್ದರು. ಪುತ್ರನ ಹತ್ಯೆಯಾಗಿದ್ದರೂ ಬೆಂಗಳೂರಿನಲ್ಲಿ ತಾಯಿ ಆರಾಮವಾಗಿದ್ದಳು. ಫೆಬ್ರವರಿಯಲ್ಲಿ ಹತ್ಯೆಯಾಗಿದ್ದರಿಂದ ಯಾರಿಗೂ ಸುಳಿವು ಸಿಗುವುದಿಲ್ಲ ಎಂದು ಆಕೆ ಭಾವಿಸಿದ್ದಳು. ಮಗು ಕಾಣದ ಹಿನ್ನೆಲೆಯಲ್ಲಿ ಸಂಬಂಧಿಕರು ತಾಯಿಯನ್ನು ಪ್ರಶ್ನಿಸಿದಾಗ, ತಾನು ಒಳ್ಳೆಯವಳೆಂದು ಬಿಂಬಿಸಿಕೊಳ್ಳಲು ಮೈಕೋಲೇಔಟ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದಳು.

ಪೊಲೀಸರಿಗೆ ಅನುಮಾನ ಬಂದು ತಾಯಿಯನ್ನೇ ವಿಚಾರಣೆಗೆ ಒಳಪಡಿಸಿದಾಗ ಆಕೆ ತಪ್ಪೊಪ್ಪಿಕೊಂಡಿದ್ದಾಳೆ. ತಮಿಳುನಾಡಿನಲ್ಲಿ ಎಸೆದಿದ್ದ ಶವದ ಮರಣೋತ್ತರ ಪರೀಕ್ಷೆ ಮಾಡಿಸಿದ್ದ ಅಲ್ಲಿನ ಪೊಲೀಸರಿಗೆ ಬಾಲಕನ ಗುರುತು ಪತ್ತೆಯಾಗಿರಲಿಲ್ಲ. ಅವರು ಕೊಲೆ ಪ್ರಕರಣ​ವನ್ನು ದಾಖಲಿಸಿದ್ದರು. 7 ತಿಂಗಳ ನಂತರ ಬಾಲಕನ ತಾಯಿ ಮೈಕೋಲೇಔಟ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಳು. ಸದ್ಯ ಕೊಲೆ ಪ್ರಕರಣ​ ದಾಖಲಿಸಿ ಪೊಲೀಸರಿಂದ ತನಿಖೆ ನಡೆಸಲಾಗುತ್ತಿದ್ದು, ರೌಡಿಶೀಟರ್, ಪ್ರೇಯಸಿ​ ಹಾಗೂ ತಾಯಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ:

ಬೆಂಗಳೂರು: ಚಿತ್ರಹಿಂಸೆ ನೀಡಿ 10 ವರ್ಷ ಬಾಲಕನ ಹತ್ಯೆ; ತಾಯಿ ಹಾಗೂ ರೌಡಿ ಶೀಟರ್ ಬಂಧನ

ಅಫ್ಘಾನಿಸ್ತಾನದಲ್ಲಿ ಮಹಿಳೆಯರು ಮಂತ್ರಿಗಳಾಗುವಂತಿಲ್ಲ; ಮಕ್ಕಳು ಹೆರುವುದಷ್ಟೇ ಅವರ ಕೆಲಸ: ತಾಲಿಬಾನ್

(10 year old boy murder case got big twist and boy’s mother rowdy sheeter and his lover are arrested)

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ