ಬೆಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ
ಅಪ್ರಾಪ್ತೆ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ 21 ವರ್ಷದ ಆರೋಪಿಗೆ ನ್ಯಾಯಾಲಯ ಪೋಸ್ಕೋ ಕಾಯ್ದೆಯಡಿ 10 ವರ್ಷಗಳ ಕಠಿಣ ಸಜೆ, 10 ಸಾವಿರ ರೂ. ದಂಡ ವಿಧಿಸಿದೆ.
ಆನೇಕಲ್: ಅಪ್ರಾಪ್ತೆ (Minor) ಮೇಲೆ ಅತ್ಯಾಚಾರವೆಸಗಿದ್ದ (Rape) 21 ವರ್ಷದ ಆರೋಪಿಗೆ ನ್ಯಾಯಾಲಯ ಪೋಸ್ಕೋ ಕಾಯ್ದೆಯಡಿ 10 ವರ್ಷಗಳ ಕಠಿಣ ಸಜೆ, 10 ಸಾವಿರ ರೂ. ದಂಡ ವಿಧಿಸಿದೆ. ಅಲ್ಲದೇ ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದೆ. 2017ರಲ್ಲಿ 14 ವರ್ಷದ ಬಾಲಕಿ ಕುರಿಕಾಯಲು ತೆರಳಿದ್ದರು. ಈ ವೇಳೆ ಆರೋಪಿ ಅಜ್ಜಿಯೊಬ್ಬರು ರಸ್ತೆಯಲ್ಲಿ ಬಿದ್ದಿದ್ದಾರೆ ಅಂತ ಆನೇಕಲ್ ತಾಲೂಕಿನ ಜಿಗಣಿ ಹೊರವಲಯಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯೊಂದರಲ್ಲಿ ಗ್ರಾಮ ಲೆಕ್ಕಾಧಿಕಾರಿ ಆತ್ಮಹತ್ಯೆ
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಗರದ ಮನೆಯೊಂದರಲ್ಲಿ ಗ್ರಾಮ ಲೆಕ್ಕಾಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯನಗರ ಜಿಲ್ಲೆಯ, ಕೊಟ್ಟೂರು ತಾಲೂಕಿನ ಹೊಸಕೊಡಿಹಳ್ಳಿ ಗ್ರಾಮ ಮೂಲದ ಆಲಿಯಾ ಅಂಜುಮ್ ನಾಡ (22) ಮೃತ ದುರ್ದೈವಿ. ಆಲಿಯಾ ಅವರನ್ನು ಕೆಲ ದಿನಗಳ ಹಿಂದಷ್ಟೇ ಸರ್ಜಾಪುರ ತಾಲೂಕು ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆ ಮುಂಭಾಗದಲ್ಲಿ ಇರುವ ಶ್ರೀನಿವಾಸ ಬಿಲ್ಡಿಂಗ್ನಲ್ಲಿ ಅಣ್ಣ ತಂಗಿ ವಾಸವಾಗಿದ್ದರು. ಇಂದು (ಮಾ.26) ಆಲಿಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಆನೇಕಲ್ ಠಾಣೆಯ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿಯ ಬರ್ಬರ ಕೊಲೆ; ನಾಲ್ವರಿಂದ ಅತ್ಯಾಚಾರ ಶಂಕೆ
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, 20ಕ್ಕೂ ಹೆಚ್ಚು ಜನರಿಗೆ ಗಾಯ
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ವಿಜಯಪುರ ತಾಲೂಕಿನ ತಿಡಗುಂದಿ ಬಳಿಯ ರಾಷ್ಟ್ರೀಯ ಹೆದ್ದಾರಿ (NH-50) ಯಲ್ಲಿ ನಡೆದಿದೆ. ಗಾಯಾಳುಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ ಚಡಚಣದಿಂದ ಬಾಗಲಕೋಟೆ ಜಿಲ್ಲೆಯ ಇಳಕಲ್‌ಗೆ ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ