Hathras Accident: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಿನಿ ಟ್ರಕ್‌ಗೆ ಬಸ್ ಡಿಕ್ಕಿ; 12 ಜನ ಸಾವು, 16 ಮಂದಿಗೆ ಗಾಯ

ಉತ್ತರ ಪ್ರದೇಶ ರಾಜ್ಯದ ಹತ್ರಾಸ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಮಿನಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಗಾಯಗೊಂಡಿದ್ದಾರೆ. ಅಪಘಾತ ಬಹಳ ಭೀಕರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

Hathras Accident: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಿನಿ ಟ್ರಕ್‌ಗೆ ಬಸ್ ಡಿಕ್ಕಿ; 12 ಜನ ಸಾವು, 16 ಮಂದಿಗೆ ಗಾಯ
ಹತ್ರಾಸ್‌ನಲ್ಲಿ ಮಿನಿ ಟ್ರಕ್‌ಗೆ ಬಸ್ ಡಿಕ್ಕಿ
Follow us
ಸುಷ್ಮಾ ಚಕ್ರೆ
|

Updated on: Sep 06, 2024 | 9:09 PM

ಹತ್ರಾಸ್: ಇಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಿನಿ ಟ್ರಕ್‌ಗೆ ರಸ್ತೆಮಾರ್ಗದ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕರು ಹತ್ರಾಸ್‌ನಿಂದ ಆಗ್ರಾಕ್ಕೆ ತೆರಳುತ್ತಿದ್ದರು. ಮಿನಿ ಲಾರಿಯಲ್ಲಿದ್ದವರು ಊಟ ಮುಗಿಸಿ ಸೇವಾಲ ಗ್ರಾಮಕ್ಕೆ ಹಿಂತಿರುಗುತ್ತಿದ್ದರು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಪಘಾತದ ಬಗ್ಗೆ ತಿಳಿದು ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿಪುನ್ ಅಗರ್ವಾಲ್ ಅವರು, “ಆಗ್ರಾ-ಅಲಿಘರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಅನ್ನು ಓವರ್‌ಟೇಕ್ ಮಾಡಲು ಪ್ರಯತ್ನಿಸುವಾಗ ಬಸ್ ವ್ಯಾನ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಸರಣಿ ಅಪಘಾತ, ಮಗು ಸೇರಿದಂತೆ ಒಂದೇ ಕುಟುಂಬದ ಐವರು ಸಾವು

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಮಾಹಿತಿಯ ಪ್ರಕಾರ, ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಮಾಹಿತಿ ಪಡೆದ ಕೂಡಲೇ ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಆಸ್ಪತ್ರೆಗೆ ತಲುಪಿದರು. ಮೃತರನ್ನು ಮತ್ತು ಅಪಘಾತಕ್ಕೆ ಕಾರಣರಾದವರನ್ನು ಗುರುತಿಸುತ್ತಿದ್ದೇವೆ ಎಂದು ಹತ್ರಾಸ್ ಎಸ್ಪಿ ನಿಪುನ್ ಅಗರ್ವಾಲ್ ಹೇಳಿದ್ದಾರೆ. ಪ್ರಾಣ ಕಳೆದುಕೊಂಡವರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದು, ಈ ಘಟನೆಗೆ ಕಾರಣರಾದವರನ್ನು ಬಿಡುವುದಿಲ್ಲ. ಘಟನೆಯಲ್ಲಿ ಪ್ರಾಣ ಕಳೆದುಕೊಂಡವರಲ್ಲಿ ನಾಲ್ವರು ಮಕ್ಕಳೂ ಸೇರಿದ್ದಾರೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ