ರಾಜಸ್ಥಾನದ ಸಿಕರ್‌ನಲ್ಲಿ ಭೀಕರ ಬಸ್ ಅಪಘಾತ; 12 ಜನ ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ
ರಾಜಸ್ಥಾನದ ಸಿಕರ್‌ನಲ್ಲಿ ಬಸ್ ಅಪಘಾತ ಸಂಭವಿಸಿದೆ. ಈ ಅಪಘಾತದ ಸ್ಥಳಕ್ಕೆ ಲಕ್ಷ್ಮಣಗಢ ಪೊಲೀಸರು ಆಗಮಿಸಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಈ ದುರಂತದಲ್ಲಿ 12 ಜನ ಸಾವನ್ನಪ್ಪಿದ್ದಾರೆ.
ಜೈಪುರ: ರಾಜಸ್ಥಾನದ ಸಿಕರ್ ಜಿಲ್ಲೆಯಲ್ಲಿ ಇಂದು ಬಸ್ ಮೋರಿಗೆ ಡಿಕ್ಕಿ ಹೊಡೆದ ಪರಿಣಾಮ 12 ಜನರು ಸಾವನ್ನಪ್ಪಿದ್ದಾರೆ ಮತ್ತು 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಲಾಸರ್‌ನಿಂದ ಬರುತ್ತಿದ್ದ ಬಸ್ ಸಿಕರ್ ಜಿಲ್ಲೆಯ ಲಕ್ಷ್ಮಣಗಢ್ ತಲುಪಿದ ನಂತರ ಮೋರಿಗೆ ಡಿಕ್ಕಿ ಹೊಡೆದಿದೆ.
ಈ ದುರಂತದಲ್ಲಿ ಹಲವು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಲಕ್ಷ್ಮಣಗಢದ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಕ್ಷ್ಮಣಗಢದಲ್ಲಿ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಾಲಾಸರ್ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದಾರೆ ಮತ್ತು ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭುವನ್ ಭೂಷಣ್ ಯಾದವ್ ಹೇಳಿದ್ದಾರೆ. ಗಾಯಾಳುಗಳನ್ನು ಲಕ್ಷ್ಮಣಗಢ ಮತ್ತು ಸಿಕರ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
#WATCH | Sikar, Rajasthan | IG Satyendra Choudhary says, “12 people have lost their lives. A few of those who are injured are referred to Jaipur and others are getting treatment at SK Hospital, Sikar. Proper treatment is being given to those injured. The reason behind the… https://t.co/jjUAAsWER1 pic.twitter.com/tvtb2EnDYp
— ANI MP/CG/Rajasthan (@ANI_MP_CG_RJ) October 29, 2024
ಇದನ್ನೂ ಓದಿ: ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಭಾರೀ ಮೆಚ್ಚುಗೆ
ಲಕ್ಷ್ಮಣಗಢದಲ್ಲಿ 7 ಸಾವುಗಳು ಸಂಭವಿಸಿವೆ ಎಂದು ಎಸ್‌ಕೆ ಆಸ್ಪತ್ರೆಯ ಅಧೀಕ್ಷಕ ಮಹೇಂದ್ರ ಖಿಚಾಡ್ ತಿಳಿಸಿದ್ದಾರೆ. “ಒಟ್ಟು 37 ರೋಗಿಗಳು ಎಸ್‌ಕೆ ಆಸ್ಪತ್ರೆಗೆ ಬಂದರು. ಅವರಲ್ಲಿ ಇಬ್ಬರು ಮೊದಲೇ ಸಾವನ್ನಪ್ಪಿದ್ದರು ಮತ್ತು ಮೂವರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದರು. ಹೆಚ್ಚಿನ ಚಿಕಿತ್ಸೆಗಾಗಿ 7 ರೋಗಿಗಳನ್ನು ಜೈಪುರಕ್ಕೆ ಕಳುಹಿಸಲಾಗಿದೆ” ಎಂದಿದ್ದಾರೆ. ಇಲ್ಲಿಯವರೆಗೆ 12 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: Rajasthan Accident: ರಾಜಸ್ಥಾನದಲ್ಲಿ ಭೀಕರ ಅಪಘಾತ, ಆಟೋ-ಬಸ್ ನಡುವೆ ಡಿಕ್ಕಿ, 12 ಮಂದಿ ಸಾವು
ರಾಜಸ್ಥಾನ ಮುಖ್ಯಮಂತ್ರಿ ಭಜನಲಾಲ್ ಶರ್ಮಾ ಅವರು ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪೊಲೀಸರ ಪ್ರಕಾರ, ಅಪಘಾತಕ್ಕೆ ಯಾವುದೇ ನಿಖರವಾದ ಕಾರಣವನ್ನು ಇನ್ನೂ ನಿರ್ಧರಿಸಲಾಗಿಲ್ಲ, ಆದರೂ ತನಿಖೆ ಮುಂದುವರೆದಿದೆ. ಮೋರಿಗೆ ಢಿಕ್ಕಿ ಹೊಡೆಯುವ ಮುನ್ನ ಬಸ್ ಹಠಾತ್ತನೆ ಚಲಿಸಲು ಆರಂಭಿಸಿ ಅದರ ಮುಂಭಾಗದ ಭಾಗಕ್ಕೆ ತೀವ್ರ ಹಾನಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾರೆ. ಅಪಘಾತದ ನಂತರ, ಬಸ್‌ನಲ್ಲಿದ್ದ ಪ್ರಯಾಣಿಕರು ಕಿರುಚಲು ಮತ್ತು ಕೂಗಲು ಪ್ರಾರಂಭಿಸಿದರು. ನೆರೆದಿದ್ದವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ