Crime News: ಚಲಿಸುತ್ತಿದ್ದ ಕಾರಿನಲ್ಲಿ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಆಕೆಯ ಅಪ್ಪನಿಗೆ ವಿಡಿಯೋ ಕಳಿಸಿ ಬ್ಲಾಕ್​ಮೇಲ್

ಚಲಿಸುತ್ತಿದ್ದ ಕಾರಿನಲ್ಲಿಯೇ 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಕಾಮುಕರು 2ನೇ ಬಾರಿ ಆಕೆಯನ್ನು ಬರಲು ಸೂಚಿಸಿದಾಗ ಹೆದರಿದ ಆಕೆ ಬರಲು ಒಪ್ಪಲಿಲ್ಲ. ಹೀಗಾಗಿ, ಆ ಕಾಮುಕರು ಆಕೆಯ ವಿಡಿಯೋವನ್ನು ಕುಟುಂಬದ ಸದಸ್ಯರಿಗೆ ನೀಡಿದ್ದಾರೆ. ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಮೂವರು ಆರೋಪಿಗಳ ವಿರುದ್ಧ ಅತ್ಯಾಚಾರ, ಅಪಹರಣದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Crime News: ಚಲಿಸುತ್ತಿದ್ದ ಕಾರಿನಲ್ಲಿ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಆಕೆಯ ಅಪ್ಪನಿಗೆ ವಿಡಿಯೋ ಕಳಿಸಿ ಬ್ಲಾಕ್​ಮೇಲ್
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Jul 19, 2024 | 12:27 PM

ಗ್ವಾಲಿಯರ್: ಚಲಿಸುತ್ತಿದ್ದ ಕಾರಿನಲ್ಲಿ 9ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಮನಕಲಕುವ ಘಟನೆ ಗ್ವಾಲಿಯರ್‌ನಲ್ಲಿ ನಡೆದಿದೆ. ಅತ್ಯಾಚಾರ ನಡೆಸಿದ ಆರೋಪಿಗಳು ಅಪ್ರಾಪ್ತ ಬಾಲಕಿಯ ಅಶ್ಲೀಲ ವೀಡಿಯೊವನ್ನು ಚಿತ್ರೀಕರಿಸಿ ಆಕೆಯ ಕುಟುಂಬ ಸದಸ್ಯರಿಗೆ ಕಳುಹಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಮೂವರು ಆರೋಪಿಗಳ ವಿರುದ್ಧ ಅತ್ಯಾಚಾರ, ಅಪಹರಣ ಮತ್ತಿತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಆರೋಪಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಸದ್ಯ ಆರೋಪಿಗಳೆಲ್ಲ ಮನೆ ಬಿಟ್ಟು ತಲೆಮರೆಸಿಕೊಂಡಿದ್ದಾರೆ.

ಇದನ್ನೂ ಓದಿ: Shocking News: ಗೆಳೆಯನ ತಾಯಿಯ ಮೇಲೆ ಯುವಕನಿಂದ ಅತ್ಯಾಚಾರ; ಹೇಯ ಕೃತ್ಯ ಬಯಲು

ಈ ಘಟನೆ ಮೋಹನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, 13 ವರ್ಷದ ಬಾಲಕಿ ಇನ್‌ಸ್ಟಾಗ್ರಾಮ್ ಮೂಲಕ ಮೂವರು ಆರೋಪಿಗಳಲ್ಲಿ ಒಬ್ಬನೊಂದಿಗೆ ಸ್ನೇಹ ಬೆಳೆಸಿದ್ದಳು. ಈ ಘಟನೆ ನಡೆದ ದಿನ ಆರೋಪಿ ಅವಳನ್ನು ಭೇಟಿಯಾಗಲು ಕರೆದಿದ್ದ. ಅಲ್ಲಿ ಅವನು ಇತರ ಇಬ್ಬರು ಸ್ನೇಹಿತರೊಂದಿಗೆ ಕಾರಿನಲ್ಲಿ ಕಾಯುತ್ತಿದ್ದ.

ಅಲ್ಲಿಗೆ ಆ ಬಾಲಕಿ ಬಂದ ತಕ್ಷಣ ಕಾರಿನಲ್ಲಿ ಹೋಗುವ ನೆಪದಲ್ಲಿ ಅವಳನ್ನು ಕರೆದೊಯ್ದರು. ಆಕೆ ಒಳಗೆ ಬಂದ ನಂತರ ಆಕೆಯನ್ನು ಹೈವೇಗೆ ಕರೆದೊಯ್ದು ಒಬ್ಬೊಬ್ಬರಾಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಬಳಿಕ ಆಕೆಗೆ ವಿಡಿಯೋ ಕಳುಹಿಸಿ ಸಂತ್ರಸ್ತೆಗೆ ಬ್ಲಾಕ್ ಮೇಲ್ ಮಾಡಿದ್ದಾನೆ.

ಇದನ್ನೂ ಓದಿ: ಅಶ್ಲೀಲ ವೀಡಿಯೊ ನೋಡಿ 8ರ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆಗೈದ ಮೂವರು ಬಾಲಕರು

ಈ ಘಟನೆ ವೇಳೆ ಆರೋಪಿಗಳು ವಿಡಿಯೋ ಮಾಡಿ ಸಂತ್ರಸ್ತೆಯನ್ನು ಬ್ಲ್ಯಾಕ್‌ಮೇಲ್ ಮಾಡಲು ಆರಂಭಿಸಿ ಮತ್ತೆ ಭೇಟಿಯಾಗುವಂತೆ ಕರೆದಿದ್ದಾರೆ. ಅದಕ್ಕೆ ಆಕೆ ನಿರಾಕರಿಸಿದಾಗ ಅವರು ಆ ವಿಡಿಯೋವನ್ನು ಆಕೆಯ ಕುಟುಂಬದ ಸದಸ್ಯರಿಗೆ ಕಳುಹಿಸಿದ್ದಾರೆ.

ಬಳಿಕ ಆಕೆಯ ಮನೆಯವರು ಆಕೆಯನ್ನು ಠಾಣೆಗೆ ಕರೆದೊಯ್ದು ದೂರು ದಾಖಲಿಸಿದ್ದಾರೆ. ಬಾಲಕಿಯ ಹೇಳಿಕೆಯ ಆಧಾರದ ಮೇಲೆ ಪೊಲೀಸರು ಮೂವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ