ಮನೆಯಲ್ಲಿ ಯಾರು ಇಲ್ಲದಿದ್ದಾಗ ಅಣ್ಣ-ತಂಗಿ ಲೈಂಗಿಕ ಕ್ರಿಯೆ: ಗರ್ಭಿಣಿಯಾದ ಸಹೋದರಿ!
ಅಪ್ರಾಪ್ತ ಅಣ್ಣನಿಂದಲೇ ಸಹೋದರಿ ಮೂರು ತಿಂಗಳ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. 14 ವರ್ಷದ ಅವಳಿ ಜವಳಿಯಾಗಿದ್ದ ಅಣ್ಣ-ತಂಗಿ ಮನೆಯಲ್ಲಿ ಪೋಷಕರು ಇಲ್ಲದಿದ್ದಾಗ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡಿದ್ದಾರೆ. ಬಳಿಕ ಲೈಂಗಿಕ ಸಂಪರ್ಕ ಬೆಳೆಸಿದ್ದು, ಇದೀಗ ಸಹೋದರಿ ಮೂರು ತಿಂಗಳು ಗರ್ಭಿಣಿಯಾಗಿದ್ದಾಳೆ.
ಬೆಂಗಳೂರು, (ಮೇ 21): ಅಪ್ರಾಪ್ತ ಅಣ್ಣನಿಂದಲೇ (Brother) ಸಹೋದರಿ ಮೂರು ತಿಂಗಳ ಗರ್ಭಿಣಿಯಾಗಿರುವ (pregnant) ಆಘಾತಕಾರಿ ಘಟನೆ ಬೆಂಗಳೂರಿನ(Bengaluru) ಬಾಗಲಗುಂಟೆ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. 14 ವರ್ಷದ ಅಣ್ಣ-ತಂಗಿ ಇಬ್ಬರು ಅವಳಿ ಜವಳಿಯಾಗಿದ್ದಾರೆ. ಆದ್ರೆ, ಮನೆಯಲ್ಲಿ ಪೋಷಕರು ಇಲ್ಲದ ವೇಳೆ ಅಶ್ಲೀಲ ವಿಡಿಯೋಗಳನ್ನು ವೀಕ್ಷಣೆ ಮಾಡುತ್ತಿದ್ದು, ಬಳಿಕ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲೆಲ್ಲ ಲೈಂಗಿಕ ಕ್ರಿಯೆಯಲ್ಲಿ ತೊಡದ್ದಾರೆ. ಇದರಿಂದ ಇದೀಗ ಬಾಲಕಿ ಮೂರು ತಿಂಗಳು ಗರ್ಭಿಣಿಯಾಗಿದ್ದಾಳೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ನಿರಂತರವಾಗಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುತ್ತಿದ್ದರಿಂದ ಒಂದು ದಿನ ಬಾಲಕಿಗೆ ಹೊಟ್ಟೆ ಕಾಣಿಸಿಕೊಂಡಿದೆ. ಕೂಡಲೇ ಬಾಲಕಿ ಚಿಕಿತ್ಸೆ ಪಡೆಯಲು ಖಾಸಗಿ ಅಸ್ಪತ್ರೆಗೆ ಹೋಗಿದ್ದಾಳೆ. ಆ ವೇಳೆ ವೈದ್ಯರು ಪರೀಕ್ಷಿಸಿದಾಗ ಬಾಲಕಿ ಮೂರು ತಿಂಗಳು ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಕೂಡಲೇ ವೈದ್ಯರು, ಬಾಗಲಗುಂಟೆ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ.
ಇದನ್ನೂ ಓದಿ: Shocking News: 1 ವರ್ಷದಿಂದ ಅತ್ಯಾಚಾರ; ಸ್ವಂತ ಅಣ್ಣಂದಿರಿಂದಲೇ ಗರ್ಭಿಣಿಯಾದ ಬಾಲಕಿ
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಬಾಗಲಗುಂಟೆ ಪೊಲೀಸರು, ಅಪ್ರಾಪ್ತ ಬಾಲಕನನ್ನು ವಶಕ್ಕೆ ಪಡೆದು ಬಾಲಾಪರಾಧಿ ಕೇಂದ್ರಕ್ಕೆ ರವಾನಿಸಿದ್ದಾರೆ. ಇನ್ನು ಗರ್ಭಿಣಿ ಬಾಲಕಿಯನ್ನು ಖಾಸಗಿ ಆಸ್ಪತ್ರೆಯಿಂದ ವಾಣಿವಿಲಾಸ ಅಸ್ಪತ್ರೆಗೆ ಶಿಷ್ಟ್ ಮಾಡಿಸಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.
ಇನ್ನು ಇದೊಂದು ಸೂಕ್ಷ್ಮ ವಿಚಾರವಾಗಿದ್ದರಿಂದ ಈ ಸುದ್ದಿಯಲ್ಲಿ ಅಣ್ಣ-ತಂಗಿಯ ಹೆಸರು ಮತ್ತು ವಿಳಾಸ ಮೆನ್ಷನ್ ಮಾಡಿಲ್ಲ.
ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:25 pm, Tue, 21 May 24